2.0 ವಿರುದ್ಧ ವಾಟಾಳ್ ಪ್ರತಿಭಟನೆ

ಬೆಂಗಳೂರು

         ತಮಿಳಿನ ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ 2.0 ಸಿನಿಮಾವನ್ನು ಬೆಂಗಳೂರಲ್ಲಿ ಬಿಡುಗಡೆ ಮಾಡಿರುವುದನ್ನು ವಿರೋಧಿಸಿ ಕನ್ನಡಪರ ಹೋರಾಟ ವಾಟಾಳ್ ನಾಗರಾಜ್ ಗುರುವಾರ ಪ್ರತಿಭಟನೆ ನಡೆಸಿದರು.

         ರಜನಿ ಸಿನಿಮಾ ವಿರುದ್ಧ ಊವರ್ಶಿ ಚಿತ್ರಮಂದಿರದ ಮುಂಭಾಗ ಪ್ರತಿಭಟಿಸಿ ವಾಟಾಳ್ ನಾಗರಾಜ್, ಕನ್ನಡ ಚಿತ್ರಗಳು ಬಿಟ್ಟು ಪರಭಾಷಾ ಚಿತ್ರಗಳ ಪ್ರದರ್ಶನ ಬೇಡ. ನವೆಂಬರ್ ತಿಂಗಳಲ್ಲಿ ಬೇರೆ ಭಾಷೆ ಸಿನಿಮಾಗಳು ರಿಲೀಸ್ ಆಗಬಾರದು. ಇದರಿಂದ ಕನ್ನಡ ಸಿನಿಮಾಗಳಿಗೆ ತೊಂದರೆ ಆಗುತ್ತದೆ. ಇದರ ವಿರುದ್ಧ ಡಿಸೆಂಬರ್ 1 ರಂದು ವಾಣಿಜ್ಯ ಮಂಡಳಿಗೆ ಮುತ್ತಿಗೆ ಹಾಕುತ್ತೇವೆ ಎಂದರು. ಈ ವೇಳೆ ಪ್ರತಿಭಟನಾಕಾರರನ್ನು ತಡೆದ ಪೊಲೀಸರು ವಶಕ್ಕೆ ಪಡೆದರು.

      ಪ್ರತಿಭಟನೆ ಹಿನ್ನೆಲೆಯಲ್ಲಿ ಊರ್ವಶಿ ಚಿತ್ರ ಮಂದಿರ ಬಳಿ ಹೆಚ್ಚಿನ ಪೊಲೀಸ್ ಭದ್ರತೆ ವಹಿಸಲಾಗಿತ್ತು. ಅಲ್ಲದೇ ಚಿತ್ರ ಮಂದಿರ ಮುಂದೆ ಯಾವುದೇ ಕಟೌಟ್ ಮತ್ತು ಬ್ಯಾನರ್ಸ್ ಹಾಕದೆ ಎಚ್ಚರ ವಹಿಸಲಾಗಿತ್ತು. ಚಿತ್ರ ಮಂದಿರ ಬಳಿಕ ಒಂದು ಕೆ.ಎಸ್.ಆರ್.ಪಿ ತುಕಡಿ ನಿಯೋಜನೆ ಮಾಡಿ 60ಕ್ಕೂ ಹೆಚ್ಚು ಪೊಲೀಸರ ರಕ್ಷಣೆ ನೀಡಿದ್ದರು.

      ರೋಬೋ ಚಿತ್ರದ ಮುಂದುವರಿದ ಭಾಗವಾದ 2.0 ಎಸ್. ಶಂಕರ್ ನಿರ್ದೇಶನದ ಬಹುನಿರೀಕ್ಷಿತ ಬೆಂಗಳೂರು ಸೇರಿದಂತೆ ರಾಜ್ಯದ ವಿವಿದೆಡೆ ಬಿಡುಗಡೆ ಆಗಿದೆ. ಸಿನಿಮಾದ ಟೀಸರ್, ಫಸ್ಟ್ ಲುಕ್ ಮತ್ತು ಮೇಕಿಂಗ್ ವಿಡಿಯೋಗಳಿಂದ ಭಾರೀ ಸದ್ದು ಮಾಡಿದ್ದ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. 2.0 ಸಿನಿಮಾದಲ್ಲಿ ರಜನಿಕಾಂತ್, ಅಕ್ಷಯ್ ಕುಮಾರ್ ಮತ್ತು ಅ್ಯಮಿ ಜಾಕ್ಸನ್ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap