ಹರಪನಹಳ್ಳಿ
ಪಟ್ಟಣದ ಮಿನಿ ವಿಧಾನಸೌಧದ ಮುಂದೆ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕರು ಆಹೋರಾತ್ರಿ ಧರಣಿ ಶನಿವಾರ ಎರಡನೇ ದಿನಕ್ಕೆ ಕಾಲಿಟ್ಟಿದೆ.ಅಂಗನವಾಡಿ ಕಾರ್ಯಕರ್ತೆಯರು ನಡೆಸುತ್ತಿರುವ ಧರಣಿಗೆ ಕಾಂಗ್ರೆಸ್ ಪಕ್ಷದ ಮುಖಂಡರಾದ ಎಂ.ಪಿ.ಲತಾ ಮಲ್ಲಿಕಾರ್ಜುನ ಹಾಗೂ ಎಂ.ಪಿ.ವೀಣಾ ಮಹಾಂತೇಶ್ ಬೇಟಿ ನೀಡಿ ಪ್ರತಿಭಟನೆಗೆ ಬೆಂಬಲ ನೀಡಿದರು.
ರಾಜ್ಯ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿ ಎಂ.ಪಿ.ಲತಾ ಮಲ್ಲಿಕಾರ್ಜುನ ಮಾತನಾಡಿ, ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡುತ್ತೇವೆ. ಪಕ್ಷದ ವರಿಷ್ಟರಾದ ಸಿದ್ದರಾಮಯ್ಯ ಹಾಗೂ ದಿನೇಶ ಗುಂಡುರಾವ್ ಬಳಿ ಕಾರ್ಯಕರ್ತೆಯರ ಸಮಸ್ಯೆಗಳ ಮಾಹಿತಿ ನೀಡಿ ಸರ್ಕಾರದ ಮೇಲೆ ಒತ್ತಡ ಹಾಕಿ ಪರಿಹಾರಕ್ಕೆ ಶ್ರಮಿಸುತ್ತೇನೆ ಎಂದು ಭರವಸೆ ನೀಡಿದರು.
ಎಂ.ಪಿ.ಪ್ರಕಾಶ ಸಮಾಜ ಮುಖಿ ಟ್ರಸ್ಟ್ ಅಧ್ಯಕ್ಷೆ ಎಂ.ಪಿವೀಣಾ ಮಹಾಮತೇಶ್ ಮಾತನಾಡಿ, ಸರ್ಕಾರದ ಸೌಲಭ್ಯಗಳನ್ನು ಹೇಗೆ ಪಡೆಯಬೇಕು ಎನ್ನುವುದನ್ನು ವಿವರಿಸಿ ಕೆಲ ಸಮಯ ಧರಣಿ ಸ್ಥಳದಲ್ಲಿ ಕಾರ್ಯಕರ್ತೆಯರೊಡನೆ ಟೆಂಟ್‍ನಲ್ಲಿ ಕುಳಿತು ಅವರ ಸಮಸ್ಯೆಗಳನ್ನು ಆಲಿಸಿದರು. ಯಾವುದೇ ಸಮಸ್ಯೆಗಳಿಗೆ ಸಂಪೂರ್ಣ ಬೆಂಬಲ ನೀಡುತ್ತೇನೆ. ನಿಮ್ಮ ಬೇಡಿಕೆ ಈಡೇರಿಕೆಗೆ ಪ್ರತಿಭಟನೆ ಮಾಡಲು ಬೆಂಗಳೂರಿಗೆ ಆಗಮಿಸಿದರೂ ತಮಗೆ ಎಲ್ಲಾ ರೀತಿಯ ಸಹಕಾರ ನೀಡತ್ತೇನೆ ಎಂದು ಭರವಸೆ ನೀಡಿದರು.
ಅಂಗನವಾಡಿ ಅಧ್ಯಕ್ಷೆ ತ್ರಿವೇಣಿ, ಕಾರ್ಯದರ್ಶಿ ಜಯಲಕ್ಷ್ಮಿ, ಖಜಾಂಚಿ ಸುಮಾ, ಪುರಸಭೆ ಸದಸ್ಯರಾದ ಡಿ.ರೆಹಮಾನಸಾಬ್, ಟಿ.ವೆಂಕಟೇಶ್, ಮುಖಂಡರಾದ ಮಂಜುಳಾ ಗುರುಮೂರ್ತಿ, ಚಿಕ್ಕೇರಿ ಬಸಪ್ಪ, ರವಿ ಯುವ ಶಕ್ತಿ ಪಡೆಯ ಅಧ್ಯಕ್ಷ ಉದಯಶಂಕರ, ಬಸವರಾಜ, ಜೇಷನ್, ಸಮೀವುಲ್ ಹಾಗೂ ಇತರರು ಭಾಗವಹಿಸಿದ್ದರು.ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕರು ಆಹೋರಾತ್ರಿ ಧರಣಿಯು ಶನಿವಾರ ತಹಶೀಲ್ದಾರ ಅವರಿಗೆ ಮನವಿ ಸಲ್ಲಿಸಿ ಮುಕ್ತಾಯಗೊಳಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
