ಬೆಂಗಳೂರು
ನಗರದಲ್ಲಿ ಲಾಕ್‍ಡೌನ್ ಜಾರಿಯಲ್ಲಿದ್ದರೂ ಕೆಲವೆಡೆ ಮಂಗಳವಾರ ಬೆಳಿಗ್ಗೆ ನಗರದ ಕೆಲ ರಸ್ತೆ ಗಳಲ್ಲಿ ವಾಹನ ದಟ್ಟಣೆ ಉಂಟಾಗಿದ್ದರೆ ಮತ್ತೆ ಕೆಲವು ರಸ್ತೆಗಳಲ್ಲಿ ಹೆಚ್ಚಿನ ವಾಹನ ಸಂಚಾರ ಕಂಡುಬಂದಿರುವುದು ಆತಂಕಕ್ಕೆ ಕಾರಣವಾಗಿದೆ ಸೀಲ್ ಡೌನ್ ಹಾಗೂ ನಿಯಂತ್ರಣ ವಲಯ ವನ್ನು ಹೊರತುಪಡಿಸಿ ಎಲ್ಲಾ ಕಡೆಗಳಲ್ಲಿ ವಾಹನ ಸಂಚಾರ ಕಂಡುಬಂದಿದೆ ಕೆ.ಆರ್.ಮಾರ್ಕೆಟ್‍ನಲ್ಲಿ ಲಾಕ್‍ಡೌನ್, ಕಠಿಣ ನಿಯಮ ಜಾರಿಯ ನಡುವೆಯೂ ಭಾರೀ ಪ್ರಮಾಣದ ವಾಹನಗಳು ರಸ್ತೆಗಿಳಿದಿವೆ.
ಅಕ್ಕಪಕ್ಕದ ರಸ್ತೆಗಳೆಲ್ಲ ಬಂದ್ ಆದ ಹಿನ್ನೆಲೆಯಲ್ಲಿ ಕೆ.ಆರ್.ಮಾರ್ಕೆಟ್ ನ ವಾಹನಗಳ ದಟ್ಟಣೆಯ ದೃಶ್ಯ ಬೆಚ್ಚಿ ಬೀಳುವಂತಿದೆ. ಬೇರೆ ದಿನಗಳಲ್ಲಿ ಕಚೇರಿ ಅವಧಿಯಲ್ಲಿ ರಸ್ತೆಗಳಲ್ಲಿ ಕಂಡುಬರುವಂತ ಟ್ರಾಫಿಕ್ ಲಾಕ್‍ಡೌನ್‍ನಲ್ಲಿಯೂ ಕಂಡುಬಂದಿದೆ.ಬಂದ್ ಆಗಿದ್ದ ಟ್ರಾಫಿಕ್ ಸಿಗ್ನಲ್ ಗಳನ್ನು ಮತ್ತೆ ಪ್ರಾರಂಭಿಸಬೇಕು. ಸಿಗ್ನಲ್‍ನಲ್ಲಿ ಟ್ರಾಫಿಕ್ ನಿರ್ವಹಣೆಗೆ ಪೊಲೀಸರನ್ನು ನಿಯೋಜಿಸಬೇಕು ಎನ್ನುವಂತಹ ರೀತಿಯ ದೃಶ್ಯಗಳು ಎದುರಾಗಿವೆ.
ಆನಂದ್ ರಾವ್ ವೃತ್ತದ ಒಂದೇ ಕಡೆ ಹೆಚ್ಚಿನ ಸಂಖ್ಯೆಯಲ್ಲಿ ವಾಹನಗಳು ಬಂದಿವೆ. ತಪಾಸಣೆ ಮಾಡಿ ಬಿಡುವಷ್ಟರಲ್ಲಿ ಪೊಲೀಸರು ಹರಸಾಹಸ ಪಡಬೇಕಾಯಿತು ಮೆಜೆಸ್ಟಿಕ್, ರೈಲ್ವೆ ನಿಲ್ದಾಣ, ಆನಂದ್ ರಾವ್ ಸರ್ಕಲ್, ಫ್ಲೈ ಓವರ್ ಕೆಳಗೆ ಬೆಳಗ್ಗೆ ಟ್ರಾಫಿಕ್ ಫುಲ್ ಜಾಮ್ ಆಗಿದ್ದ ದೃಶ್ಯ ಕಂಡುಬಂತು ಪ್ಯಾಲೆಸ್ ಗುಟ್ಟಹಳ್ಳಿ, ಅರಮನೆ ಮೈದಾನದ ಬಳಿ ಪೊಲೀಸರು ವಾಹನ ತಪಾಸಣೆಗೆ ಇಳಿದಿದ್ದು, ರಸ್ತೆಯುದ್ದಕ್ಕೂ ವಾಹನಗಳು ಸಾಲುಗಟ್ಟಿ ನಿಂತಿದ್ದು ಕಂಡು ಬಂತು
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ