ಕಸ ಸಂಗ್ರಹಿಸಲು ಬಳಸುವ ವಾಹನಗಳ ಸಂಖ್ಯೆ ಹೆಚ್ಚಳಕ್ಕೆ ಕ್ರಮ

ಬಳ್ಳಾರಿ

      ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮನೆ ಮನೆ ಕಸ ಸಂಗ್ರಹಿಸಲು ಬರುವ ವಾಹನಗಳ ಸಂಖ್ಯೆ ಸದ್ಯದಲ್ಲಿ ಕಡಿಮೆ ಇದ್ದು, ಅವುಗಳನ್ನು ಹೆಚ್ಚಿಸಲು ಯೋಜನೆಯೊಂದನ್ನು ರೂಪಿಸಲಾಗಿದೆ ಎಂದು ಶಾಸಕ ಜಿ.ಸೋಮಶೇಖರ ರೆಡ್ಡಿ ಅವರು ಹೇಳಿದರು.

         ಕ್ಷೇತ್ರಜನಸಂಪರ್ಕ ಕಾರ್ಯಾಲಯ, ಮಹಾನಗರ ಪಾಲಿಕೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ,ಅಲ್ಲಂ ಸುಮಂಗಳಮ್ಮ ಮಹಿಳಾ ಪದವಿ ಪೂರ್ವ ಕಾಲೇಜು ಸಂಯುಕ್ತ ಆಶ್ರಯದಲ್ಲಿ ನಗರದ ಅಲ್ಲಂ ಸುಮಂಗಳಮ್ಮ ಮಹಿಳಾ ಪಿಯು ಕಾಲೇಜಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸ್ವಚ್ಛ ಭಾರತ ಅಭಿಯಾನ(ನಗರ) ಕುರಿತು ವಿಶೇಷ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

        ನಗರದಲ್ಲಿ ಕಸ ಸಂಗ್ರಹಿಸುವ ವಾಹನಗಳ ಸಂಖ್ಯೆ ಕಡಿಮೆ ಇರುವ ಕಾರಣ ಪ್ರತಿದಿನ ಮನೆಮನೆಗೆ ತೆರಳಿ ಕಸವನ್ನು ಸಮರ್ಪಕವಾಗಿ ಸಂಗ್ರಹಿಸುವ ಕೆಲಸವಾಗುತ್ತಿಲ್ಲ ಎಂದು ಹೇಳಿದ ಅವರು, ಕೇಂದ್ರ ಸರಕಾರದ ಸಹಾಯದೊಂದಿಗೆ ಯೋಜನೆಯೊಂದನ್ನು ತಯಾರಿಸಿ ಅಧಿವೇಶನದಲ್ಲಿ ಚರ್ಚಿಸಿ ಸೂಕ್ತಕ್ರಮಕೈಗೊಳ್ಳಲಾಗುವುದು ಎಂದರು.

       ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಲೋಚನೆ, ಸ್ವಚ್ಛವಾದ ಮನೆ ಹಾಗೂ ಪರಿಸರದ ಶುದ್ಧತೆ, ದೇಶದ ಹೆಣ್ಮಕ್ಕಳನ್ನು ಗೌರವವಾಗಿಡಲು ಸ್ವಚ್ಛಭಾರತ ಅಭಿಯಾನ ಪ್ರಾರಂಭಿಸಿದ್ದಾರೆ ಎಂದರು.ಪ್ರತಿಯೊಬ್ಬ ವಿದ್ಯಾರ್ಥಿ ಐದು ಮನೆಗಳಿಗೆ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸಿದ್ದಲ್ಲಿ ಸ್ವಚ್ಛ ಭಾರತವಾಗುವ ಮತ್ತು ಗಾಂಧೀಜಿ ಹಾಗೂ ನರೇಂದ್ರ ಮೋದಿ ಅವರ ಕನಸು ನನಸಾಗುವುದರಲ್ಲಿ ಸಂದೇಹವಿಲ್ಲ ಎಂದರು.

       ಬಳ್ಳಾರಿ ನಗರದಲ್ಲಿ ತಾಪಮಾನ ದಿನೇದಿನೇ ಹೆಚ್ಚುತ್ತಿದ್ದು, ಇದನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ 2ರಿಂದ 3ಲಕ್ಷ ಮರಗಳನ್ನು ಬೆಳೆಸಬೇಕಾಗಿದೆ ಎಂದರು.ವೀರಶೈವ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಚೋರನೂರು ಕೊಟ್ರಪ್ಪ ಅವರು ಮಾತನಾಡಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷಿ ಈ ಸ್ವಚ್ಛಭಾರತ ಯೋಜನೆಗೆ ಎಲ್ಲರು ಕೈ ಜೋಡಿಸಬೇಕು ಎಂದರು.
ಶಾಲಾ-ಕಾಲೇಜು ವಿದ್ಯಾರ್ಥಿಗಳಲ್ಲಿ ಸ್ವಚ್ಛತೆ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ನಮ್ಮ ಕಾಲೇಜಿನಲ್ಲಿ ಈ ಕಾರ್ಯಕ್ರಮ ಏರ್ಪಡಿಸಿರುವುದು ಸಂತಸ ತಂದಿದೆ ಎಂದರು.

        ವೀರಶೈವ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಉಡೇದ ಬಸವರಾಜ,ಕೋಶಾಧಿಕಾರಿ ಕೋಳೂರು ಮಲ್ಲಿಕಾರ್ಜುನಗೌಡ, ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲರಾದ ಡಾ.ಎಸ್.ವೈ.ತಿಮ್ಮರೆಡ್ಡಿ, ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ಡಾ.ಗೋವಿಂದರಾಜು ಅವರು ಮಾತನಾಡಿದರು.ಮಹಾನಗರ ಪಾಲಿಕೆಯ ಪರಿಸರ ಎಂಜನಿಯರ್ ಟಿ.ಶ್ರೀನಿವಾಸ್ ಅವರು ವಿಶೇಷ ಉಪನ್ಯಾಸ ನೀಡಿದರು.
ಸಂಗೀತ ಮತ್ತು ನಾಟಕ ವಿಭಾಗದ ಎರಡು ಕಲಾತಂಡಗಳ ಮೂಲಕ ಸ್ವಚ್ಛತೆಯ ಕುರಿತು ಅರಿವು ಮೂಡಿಸಲಾಯಿತು. ಕ್ಷೇತ್ರ ಜನಸಂಪರ್ಕ ಕಾರ್ಯಾಲಯದ ಉಪನಿರ್ದೇಶಕ ಡಾ.ಜಿ.ಡಿ.ಹಳ್ಳಿಕೇರಿ ಪ್ರಾಸ್ತಾವಿಕವಾಗಿ ಮಾತನಾಡಿದರು.

          ಕಾರ್ಯಕ್ರಮದ ಅಂಗವಾಗಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಕ್ಷೇತ್ರ ಜನಸಂಪರ್ಕ ಕಾರ್ಯಾಲಯದ ಸಹಾಯಕ ಎನ್.ರಾಮಕೃಷ್ಣ ನಿರೂಪಿಸಿ ವಂದಿಸಿದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link