ಹುಬ್ಬಳ್ಳಿಗೆ ಆಗಮಿಸಿದ ಉಪರಾಷ್ಟ್ರಪತಿ..!

ಹುಬ್ಬಳ್ಳಿ:

     ಮಾನ್ಯ ಉಪರಾಷ್ಟ್ರಪತಿ ಶ್ರೀ ಎಂ. ವೆಂಕಯ್ಯನಾಯ್ಡು ಅವರು ಇಂದು ಹುಬ್ಬಳ್ಳಿಗೆ ಆಗಮಿಸಿದ್ದು ರಾಜ್ಯದಲ್ಲಿ ಎರಡು ದಿನಗಳ ಪ್ರವಾಸ ಕೈಗೊಳ್ಳಲ್ಲಿದ್ದಾರೆ ಎನ್ನಲಾಗಿದೆ.

     ಹುಬ್ಬಳ್ಳಿ ನಗರದಲ್ಲಿ ಫೆ.2 ರಂದು ನಡೆಯಲಿರುವ ದೇಶಪಾಂಡೆ ಫೌಂಡೇಶನ್ ಕೌಶಲ್ಯ ಅಭಿವೃದ್ಧಿ ಕೇಂದ್ರ ಹಾಗೂ ಹೆಚ್ ಡಿ ಬಿ ಆರ್ ಟಿ ಎಸ್ ಯೋಜನೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರು ಭಾರತೀಯ ವಾಯು ಸೇನೆಯ ವಿಶೇಷ ವಿಮಾನದ ಮೂಲಕ ಇಂದು ಸಂಜೆ 6.50 ಕ್ಕೆ ಹುಬ್ಬಳ್ಳಿಗೆ ಆಗಮಿಸಿದರು.

    ವಿಮಾನ ನಿಲ್ದಾಣದಲ್ಲಿ ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಹಾಗೂ ಗಣಿ ಸಚಿವರಾದ ಪ್ರಲ್ಹಾದ ಜೋಶಿ, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್, ಜಿಪಂ ಅಧ್ಯಕ್ಷೆ ವಿಜಯಲಕ್ಷ್ಮಿ ಕೆಂಪೇಗೌಡ ಪಾಟೀಲ,ಶಾಸಕ ಅರವಿಂದ ಬೆಲ್ಲದ, ಬೆಳಗಾವಿ ಪ್ರಾದೇಶಿಕ ಆಯುಕ್ತರಾದ ಆಮ್ಲನ್ ಆದಿತ್ಯ ಬಿಸ್ವಾಸ್, ಜಿಲ್ಲಾಧಿಕಾರಿ ದೀಪಾ ಚೋಳನ್, ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಆರ್. ದಿಲೀಪ್ ಮತ್ತಿತರ ಗಣ್ಯರು ಪುಸ್ತಕಗಳು, ಶಾಲು, ಹೂ ಮಾಲೆ ನೀಡಿ ಬರಮಾಡಿಕೊಂಡರು. ಉಪರಾಷ್ಟ್ರಪತಿಗಳು ಸರ್ಕ್ಯೂಟ್ ಹೌಸ್ ನಲ್ಲಿ ವಾಸ್ತವ್ಯ ಹೂಡಿದ್ದಾರೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap