ಫೆ. 13: ರೈತರಿಂದ ವಿಧಾನಸೌಧ ಮುತ್ತಿಗೆ

ತುಮಕೂರು

        ಮಹದಾಯಿ ಕಳಸಾ-ಬಂಡೂರಿ ಯೋಜನೆ ಅನುಷ್ಠಾನ, ಮಹದಾಯಿ ನ್ಯಾಯಾಧೀಕರಣದ ಆದೇಶದಂತೆ 4 ಟಿಎಂಸಿ ನೀರನ್ನು ಮಲ್ಲಪ್ರಭೆಗೆ ಹರಿಸಲು ಕಾನೂನಾತ್ಮಕ ಕ್ರಮ ಕೈಗೊಳ್ಳುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯ ರೈತ ಸಂಘ ವಿಧಾನಸೌಧ ಮುತ್ತಿಗೆ ಕಾರ್ಯಕ್ರಮವನ್ನು ಫೆ. 13 ರಂದು ಹಮ್ಮಿಕೊಂಡಿದೆ.

       ರೈತ ನಾಯಕ . ಎಂ.ಡಿ. ನಂಜುಂಡಸ್ವಾಮಿಯವರ ಜನ್ಮದಿನದಂದು ರೈತರ ಆಶೋತ್ತರಗಳ ಈಡೇರಿಸಲು ವಿಫಲವಾಗಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಈ ಹೋರಾಟ ಹಮ್ಮಿಕೊಂಡಿರುವುದಾಗಿ ರೈತ ಸಂಘದ ರಾಜ್ಯಾಧ್ಯಕ್ಷ ಜಿ.ಎ. ಲಕ್ಷ್ಮೀನಾರಾಯಣಗೌಡ ತಿಳಿಸಿದರು.

        ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರೈತ ವಿರೋಧಿ ನೀತಿಗಳಿಂದಾಗಿ ರೈತರು ಬೇಸತ್ತು ಆತ್ಮಹತ್ಯೆಯ ಹಾದಿ ಹಿಡಿಯುವಂತಾಗಿದೆ. ರೈತರ ಬದುಕಲ್ಲಿ ಆಶಾಭಾವನೆ ಮೂಡಿಸುವಂತಹ ಕಾರ್ಯಕ್ರಮಗಳನ್ನು ಜಾರಿಗೊಳಿಸಲು ಸರ್ಕಾರಗಳು ಮುಂದಾಗಬೇಕು ಎಂದು ಒತ್ತಾಯಿಸಿದರು.

        ಸರ್ಕಾರ ಮಹದಾಯಿ ನ್ಯಾಯಾಧೀಕರಣದ ಆದೇಶದ ಮೇಲೆ ಹೆಚ್ಚುವರಿ ನೀರಿನ ಬೇಡಿಕೆಗಾಗಿ ಸುಪ್ರೀಂ ಕೋರ್ಟ್‍ಗೆ ಮೇಲ್ಮನವಿ ಸಲ್ಲಿಸಿದೆ. ಆದರೆ ಈಗಾಗಲೇ ಮಹದಾಯಿ ನ್ಯಾಯಾಧೀಕರಣದ ಆದೇಶದಂತೆ 4 ಟಿಎಂಸಿ ನೀರಿಗೆ ಆದ್ಯತೆ ನೀಡಿ ಶೀಘ್ರ ನೀರು ಹರಿಸಲು ಸೂಕ್ತ ಕ್ರಮ ಜರುಗಿಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ರೈತರ ಸಂಪೂರ್ಣ ಸಾಲವನ್ನು ಮನ್ನಾ ಮಾಡಬೇಕು.

         ರೈತರು ಬೆಳೆದ ಬೆಳೆಗೆ ಯೋಗ್ಯ ಬೆಲೆ ನೀಡಬೇಕು. ರೈತರು ಬೆಳೆದ ಬೆಳೆಗಳನ್ನು ಖರೀದಿಸುವ ಮೂಲಕ ಖರೀದಿ ಕೇಂದ್ರಗಳನ್ನು ಆರಂಭಿಸಬೇಕು. ಉದ್ಯೋಗಖಾತ್ರಿ ಯೋಜನೆಯನ್ನು ಗ್ರಾಮಾಂತರ ಪ್ರದೇಶದ ಜತೆಗೆ ನವಲಗುಂದ, ಅಣ್ಣಗೇರಿ, ನರಗುಂದ, ರೋಣ, ಬಾದಾಮಿ, ಕುಂದಗೋಳ, ಕಲಘಟಕಿ, ಗಜೇಂದ್ರಗಡ, ಹುಬ್ಬಳ್ಳಿ, ಧಾರವಾಡ, ಬೈಲಹೊಂಗಲ, ಸವದತ್ತಿ, ರಾಯದುರ್ಗ, ಯರಗಟ್ಟಿ ಹಾಗೂ ಪಟ್ಟಣ ಪ್ರದೇಶದಲ್ಲಿರುವ ಕೃಷಿ ಕಾರ್ಮಿಕರಿಗೆ ಈ ಯೋಜನೆಯಡಿ ಕೆಲಸ ಒದಗಿಸುವುದು ಸೇರಿದಂತೆ ವಿವಿಧ ಬೇಡಿಕೆಗಳಿಗಾಗಿ ಫೆ. 13 ರಂದು ವಿಧಾನಸೌಧಕ್ಕೆ ಮುತ್ತಿಗೆ ಹಾಕಿ ಹೋರಾಟ ನಡೆಸುತ್ತಿರುವುದಾಗಿ ಅವರು ವಿವರಿಸಿದರು.

       ಈ ಸಂದರ್ಭದಲ್ಲಿ ಸಂಘದ ರಾಜ್ಯ ಕಾರ್ಯದರ್ಶಿ ಬಸವರಾಜು, ಪುಟ್ಟಯ್ಯ ಜಿಲ್ಲಾಧ್ಯಕ್ಷ ಶಿವಪ್ರಕಾಶ್, ಕಳ್ಳಿಪಾಳ್ಯದ ರಾಜಣ್ಣ, ಗೋವಿಂದಪ್ಪ, ಮಂಜುಳ ಮತ್ತಿತರರು ಉಪಸ್ಥಿತರಿದ್ದರು. 

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link