ಬೆಂಗಳೂರು
ಹಿಂದುಳಿದ ವರ್ಗಗಳ ಖಾತೆ ಸಚಿವ ಪುಟ್ಟರಂಗ ಶೆಟ್ಟಿ ಅವರ ಆಪ್ತ ಸಹಾಯಕ ಮೋಹನ ಕುಮಾರ್ ಬಳಿ ಪತ್ತೆಯಾದ 25.76 ಲಕ್ಷ ರೂ. ಪ್ರಕರಣವನ್ನು ಎಸಿಬಿ ವಹಿಸಲಾಗಿದೆ.
ಸಚಿವ ಪುಟ್ಟರಂಗ ಶೆಟ್ಟಿ ರಾಜೀನಾಮೆಗೆ ಪ್ರತಿಪಕ್ಷ ಬಿಜೆಪಿ ಒತ್ತಾಯಿಸುತ್ತಿರುವಾಗಲೇ ಮುಂದಿನ ತನಿಖೆ ಕೈಗೊಳ್ಳಲು ಪತ್ತೆಯಾದ ಹಣವನ್ನು ಭ್ರಷ್ಟಾಚಾರ ನಿಗ್ರಹ ದಳಕ್ಕೆ ಹಸ್ತಾಂತರಿಸಲಾಗಿದೆ.
ಈ ಕುರಿತು ಸಚಿವ ಪುಟ್ಟರಂಗ ಶೆಟ್ಟಿ ಅವರ ಆಪ್ತ ಸಹಾಯಕ ಎಸ್.ಜೆ.ಮೋಹನ್ ಕುಮಾರ್ ಅವರ ವಿರುದ್ಧ ವಿಧಾನ ಸೌಧ ಪೊಲೀಸ್ ಇನ್ಸ್ ಪೆಕ್ಟರ್ ಎಸಿಬಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಜನವರಿ 4ರಂದು ಮೋಹನ್ ಕುಮಾರ್ 25,76,000 ಲಕ್ಷ ರೂಪಾಯಿಗಳನ್ನು ಸಚಿವಾಲಯದಿಂದ ತೆಗೆದುಕೊಂಡು ಹೋಗುವಾಗ ಪೊಲೀಸರಿಗೆ ಸಿಕ್ಕಿಬಿದ್ದಿದ್ದ.
ಹಗರಣ ಮುಚ್ಚಿಹಾಕಲು ಪ್ರಕರಣವನ್ನು ಎಸಿಬಿಗೆ ಹಸ್ತಾಂತರಿಸಲಾಗಿದ್ದು, ಸರ್ಕಾರ ಕಣ್ಣೊರೆಸುವ ತಂತ್ರ ಅನುಸರಿಸುತ್ತಿದೆ. ಪುಟ್ಟರಂಗ ಶೆಟ್ಟಿ ನೈತಿಕ ಹೊಣೆ ಹೊತ್ತು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ನಾಯಕರು ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
