ತುಮಕೂರು:
ಇತ್ತೀಚಿನ ದಿನಗಳಲ್ಲಿ ಶಿಕ್ಷಣ ಜೊತೆ ಕಂಪ್ಯೂಟರ್ ಜ್ಞಾನವೂ ಅವಶ್ಯಕವಾಗಿದೆ. ತಂತ್ರಜ್ಞಾನ ಮತ್ತು ಮಾಹಿತಿಯೂ ಮುಂದಿನ ದಿನಗಳಲ್ಲಿ ಅಗತ್ಯವಾಗಿದೆ. ವಿದ್ಯಾರ್ಥಿಗಳು ತಮ್ಮ ಪಠ್ಯಕ್ರಮಕ್ಕೆ ಹೆಚ್ಚುವರಿಯಾಗಿ ತಮ್ಮ ಕೌಶಲ್ಯವನ್ನು ಸುಧಾರಿಸಲು ಇಂತಹ ಕಾರ್ಯಕ್ರಮಗಳು ನಡೆಯಬೇಕು. ಇತ್ತೀಚಿನ ದಿನಗಳಲ್ಲಿ ಎಂಬೆಡೆಡ್ ಸಿಸ್ಟಮ್ಸ್‍ಗಳು ತಂತ್ರಜ್ಞಾನದಲ್ಲಿ ಅತ್ಯಂತ ಬೇಡಿಕೆ ಇದ್ದು ಈ ಕಾರ್ಯಾಗಾರದಲ್ಲಿ ಹೆಚ್ಚಿನ ಪ್ರಯೋಜನವಾಗಲಿದೆ ದೇಶದ ಅಭಿವೃದ್ಧಿಯಲ್ಲಿ ಕಂಪ್ಯೂಟರ್ ಇಂಜಿನಿಯರಿಂಗ್ ಪಾತ್ರವು ಬಹಳ ಮಹತ್ವದಾಗಿದೆ ಎಂದು ಮೈಸೂರು ಸರೋಜಾ ಎಂಟರ್‍ಪ್ರೈಸ್ ಮುಖ್ಯsಸ್ಥರಾದ ಸರಗೂರ್ ನರಸಿಂಹನ್ ರವರು ತಿಳಿಸಿದರು.
ನಗರದ ಶ್ರೀದೇವಿ ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ವಿಭಾಗದಿಂದ ಎಂಬೆಡೆಡ್ ಸಿಸ್ಟಮ್ಸ್ ಎಂಬ ಮೂರು ದಿನಗಳ ಕಾರ್ಯಾಗಾರವನ್ನು ಬೈಟ್ಸ್ ಮತ್ತು ಸಿಎಸ್‍ಐ ಸಹಯೋಗದೊಂದಿಗೆ ಏಪ್ರಿಲ್ 22 ರಂದು ಬೆಳಿಗ್ಗೆ 10 ಗಂಟೆಗೆ ಶ್ರೀದೇವಿ ಇಂಜಿನಿಯರಿಂಗ್ ಕಾಲೇಜಿನ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀದೇವಿ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ಟಿ.ಹೇಮಾದ್ರಿನಾಯ್ಡುರವರು ವಹಿಸಿ ಮಾತನಾಡುತ್ತಾ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಈ ಕಾರ್ಯಾಗಾರವು ಪ್ರಚಲಿತ ತಂತ್ರಜ್ಞಾನವನ್ನು ತಿಳಿಸುತ್ತಿರುವುದಾ ಗಿಯೂ, ಇಲ್ಲಿ ತಿಳಿಸಿದಂತಹ ವಿಷಯಗಳ ಮೇಲೆ ಅಂತಿಮ ವರ್ಷದ ಪ್ರಾಜೆಕ್ಟ್‍ಗಳನ್ನು ಮಾಡುವ ಬಹುರಾಷ್ಟ್ರೀಯ ಕಂಪನಿ ಗಳಲ್ಲಿ ಉದ್ಯೋಗ ಪಡೆದುಕೊಳ್ಳಬೇಕು.
ತಮ್ಮ ಪಠ್ಯಕ್ರಮಕ್ಕೆ ಹೆಚ್ಚುವರಿಯಾಗಿ ತಮ್ಮ ಕೌಶಲ್ಯವನ್ನು ಸುಧಾರಿಸಲು ಇಂತಹ ಕಾರ್ಯಾಗಾರಗಳು ನಡೆಯಬೇಕು. ವಿದ್ಯಾರ್ಥಿಗಳು ಪಠ್ಯಕ್ರಮದ ಜೊತೆ ಜೊತೆಯಲ್ಲಿ ಹೊಸ ತಂತ್ರಜ್ಞಾನವನ್ನು (ಐ ಓ ಟಿ, ಬ್ಲಾಕ್ ಚೈನ್, ಮಿಷನ್ ಲರ್ನಿಂಗ್) ಮುಂತಾದವುಗಳಲ್ಲಿ ಕಲಿಯುವುದಲ್ಲಿ ಇತಂಹ ಕಾರ್ಯಾಗಾರಗಳು ಬಹು ಉಪಯುಕ್ತ ವಾಗುತ್ತದೆ ಹಾಗೂ ವಿದ್ಯಾರ್ಥಿಗಳು ಹೊಸ ತಂತ್ರಜ್ಞಾನದ ಸೃಜನಶೀಲತೆ ಹೊಂದಿದ್ದು ಸ್ಟಾಟ್‍ಆಫ್ ಕಂಪನಿಗಳನ್ನು ಸ್ಥಾಪಿಸಲು ಇಚ್ಚಿಸಿದಲ್ಲಿ ನಮ್ಮ ಸಂಸ್ಥೆಯು ಆವಿಷ್ಕಾರಗಳ ಕೇಂದ್ರ ಸೌಲಭ್ಯಗಳನ್ನು ಉಪಯೋಗಿಸಿಕೊಳ್ಳಬಹುದು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಶ್ರೀದೇವಿ ಛಾರಿಟಬಲ್ ಟ್ರಸ್ಟ್‍ನ ಅಧ್ಯಕ್ಷರಾದ ಡಾ.ಎಂ.ಆರ್.ಹುಲಿನಾಯ್ಕರ್, ಶ್ರೀದೇವಿ ಸಂಸ್ಥೆಯ ಮಾನವ ಸಂಪನ್ಮೂಲ ವಿಭಾಗದ ನಿರ್ದೇಶಕರಾದ ಎಂ.ಎಸ್. ಪಾಟೀಲ್‍ರವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಇದೇ ಸಂದರ್ಭ ದಲ್ಲಿ ಕಾರ್ಯಕ್ರಮದಲ್ಲಿ ಶ್ರೀದೇವಿ ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥರಾದ ಪ್ರೊ.ಸಿ.ವಿ. ಷಣ್ಮುಖಸ್ವಾಮಿ ರವರು ಮಾತನಾಡುತ್ತಾ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಯುಗದಲ್ಲಿ ಹೆಚ್ಚಿನ ರೀತಿಯಲ್ಲಿ ವಿದ್ಯಾಭ್ಯಾಸ ಮಾಡಿದರೆ ಯಾವ ಕೆಲಸವಾದರೂ ಸಾಧಿಸಬಹುದು.
ಉದ್ಯೋಗ ಮತ್ತು ಮಾರುಕಟ್ಟೆ ಕ್ಷೇತ್ರದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿ ಗಳಿಗೆ ಹೆಚ್ಚು ಸವಾಲನ್ನು ತರುವಲ್ಲಿ ಎಂಬೆಡೆಡ್ ಸಿಸ್ಟಮ್ಸ್ ಕ್ಷೇತ್ರದ ನಿರ್ವಹಣೆಯು ಮಹತ್ವ ಪೂರ್ಣವಾಗಿದೆ ಎಂದು ತಿಳಿಸಿದರು. ಕಾರ್ಯಕ್ರಮದ ಸಂಯೋಜಕರಾದ ಪ್ರೊ. ಎಂ.ಎಸ್. ಚೇತನ್‍ರವರು ಮುಖ್ಯಅತಿಥಿಗಳನ್ನು ಸಭೆಗೆ ಪರಿಚಯಿಸಿದರು. ಹಾಗೂ ವಿದ್ಯಾರ್ಥಿ- ವಿದ್ಯಾರ್ಥಿನಿಯರು ಬೋಧಕ ಮತ್ತು ಬೋಧಕೇತರ ವರ್ಗದವರು ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








