ಚಳ್ಳಕೆರೆ
ಪ್ರಸ್ತುತ ಏ.18ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಜಿಲ್ಲಾಧಿಕಾರಿಗಳ ಆದೇಶದಂತೆ ಚಳ್ಳಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಶೇ.100ರ ಮತದಾನ ಮಾಡುವ ಯೋಜನೆ ಇದ್ದು, ಇದಕ್ಕೆ ಪೂರಕವಾಗಿ ತಾಲ್ಲೂಕು ಸ್ವೀಫ್ ಸಮಿತಿ ಸಹಕಾರದೊಂದಿಗೆ ಮತದಾರರ ಜಾಗೃತಿ ಅಭಿಯಾನವನ್ನು ಚುರುಕುಗೊಳಿಸಲಾಗಿದೆ ಎಂದು ತಹಶೀಲ್ದಾರ್ ತುಷಾರ್ ಬಿ.ಹೊಸೂರ್ ತಿಳಿಸಿದರು.
ಅವರು, ಮಂಗಳವಾರ ಇಲ್ಲಿನ ತಾಲ್ಲೂಕು ಪಂಚಾಯಿತಿ ಕಾರ್ಯಾಲಯದ ಆವರಣದಲ್ಲಿ ತಾಲ್ಲೂಕಿನ ವಿಕಲಚೇತನರು ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಮತದಾರರ ಜಾಗೃತಿ ಅಭಿಯಾನದಲ್ಲಿ ವಿಕಲಚೇತನರೂ ಸಹ ಭಾಗವಹಿಸುವ ಮೂಲಕ ಮತದಾನ ಮಾಡುವ ಮೌಲ್ಯವನ್ನು ಜನರಿಗೆ ತಿಳಿಸಿದಂತಾಗುತ್ತದೆ.
ಸುಮಾರು 50ಕ್ಕೂ ಹೆಚ್ಚು ವಿಕಲಚೇತನರು ತಮ್ಮ ತ್ರಿಚಕ್ರ ವಾಹನಗಳಲ್ಲಿ ಮತದಾನ ಮಾಡುವಂತೆ ಸಾರ್ವಜನಿಕರಲ್ಲಿ ಬಿತ್ತಿ ಪತ್ರಗಳ ಮೂಲಕ ಮನವಿ ಮಾಡಿದರಲ್ಲದೆ ಮತದಾನ ಮಾಡುವವನೇ ನಿಜವಾದ ಶೂರ ಎಂಬ ಘೋಷವಾಖ್ಯ ಆಕರ್ಷಣಿಯವಾಗಿತ್ತು.
ನಗರದ ತಾಲ್ಲೂಕು ಪಂಚಾಯಿತಿ ಕಾರ್ಯಾಲಯದಿಂದ ಹೊರಟ ವಿಕಲಚೇತನರ ಮತದಾನ ಜಾಗೃತಿ ಯಾತ್ರೆ ವಾಲ್ಮೀಕಿ ವೃತ್ತ, ಅಂಬೇಡ್ಕರ್ ವೃತ್ತ, ನೆಹರೂ ಸರ್ಕಲ್, ಪಾವಗಡ ರಸ್ತೆ, ಕೆ.ಎಸ್‍ಆರ್‍ಟಿಸಿ ಬಸ್ ನಿಲ್ದಾಣ, ಬೆಂಗಳೂರು ರಸ್ತೆ, ಗಾಂಧಿನಗರದ ಮೂಲಕ ಪ್ರವಾಸಿ ಮಂದಿರ ತಲುಪಿತು. ದಾರಿಯುದ್ದಕ್ಕೂ ಎಲ್ಲಾ ವಿಕಲಚೇತನರು ಏ.18ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ತಪ್ಪದೆ ಮತದಾನ ಮಾಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದರು.
ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ವೈಶಾಲಿ ತಾಲ್ಲೂಕು ಸ್ವೀಫ್ ಸಮಿತಿ ಅಧ್ಯಕ್ಷ ಬಿ.ಎಲ್.ಈಶ್ವರಪ್ರಸಾದ್, ನಿರ್ದೇಶಕ ಜೆ.ಟಿ.ಹನುಮಂತರಾಜು, ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶಪ್ಪ, ಶಿಶುಅಭಿವೃದ್ಧಿ ಕಲ್ಯಾಣಾಧಿಕಾರಿ ಗಿರಿಜಾಂಭ, ಅಕ್ಷರ ದಾಸೋಹ ಅಧಿಕಾರಿ ತಿಪ್ಪೇಸ್ವಾಮಿ, ತಾಲ್ಲೂಕು ಪಂಚಾಯಿತಿ ವ್ಯವಸ್ಥಾಪಕ ತಿಪ್ಪೇಸ್ವಾಮಿ, ತಾಲ್ಲೂಕು ಅಂಗವಿಕಲ ಕಲ್ಯಾಣಾಧಿಕಾರಿ ನರಸಿಂಹಮೂರ್ತಿ ಮುಂತಾದವರು ಜಾಗೃತಿ ಅಭಿಯಾನದಲ್ಲಿ ಪಾಲ್ಗೊಂಡಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
