ಬೆಂಗಳೂರು:
ಇಸ್ರೋದ ಚಂದ್ರಯಾನ-2 ಯೋಜನೆ ಬಹುತೇಕ ಯಶಸ್ವಿಯಾಗಿ ನಡೆದಿತ್ತು ಆದರೆ ಅಂತಿಮ ಕ್ಷಣದಲ್ಲಿ ಲ್ಯಾಂಡರ್ ವಿಕ್ರಮ್ ಇಂದ ಸಂಪರ್ಕ ಕಡಿತಗೊಂಡಿದೆ ಎಂದು ಇಸ್ರೋ ವಿಜ್ಞಾನಿಗಳು ತಿಳಿಸಿದ್ದಾರೆ.
ಎಲ್ಲಾ ಅಂದುಕೊಂಡತೆಯೇ ಆಗುತ್ತಿದ್ದ ವಿಕ್ರಮ್ ಲ್ಯಾಂಡಿಂಗ್ ಪ್ರಕ್ರಿಯೆ ಚಂದ್ರನ ದಕ್ಷಿಣ ಧ್ರುವದಲ್ಲಿ ಸುರಕ್ಷಿತವಾಗಿ ಲ್ಯಾಂಡ್ ಆಗುವ ಸೂಚನೆಯೂ ಲಭಿಸಿತು. ಆದರೆ ಲ್ಯಾಂಡರ್ ಪಥ ಬದಲಾದ ಕಾರಣ ಇಸ್ರೋ ಕೇಂದ್ರಕ್ಕೆ ಬರಬೇಕಾದ ಸಂದೇಶ ತಡವಾಯಿತು. ಚಂದ್ರ ನನ್ನು ತಲುಪಲು ಕೇವಲ 2.1ಕಿಮೀ ದೂರ ಇದ್ದ ಸಂದರ್ಭದಲ್ಲಿ ಲ್ಯಾಂಡರ್ ನೊಂದಿಗಿನ ಸಂಪರ್ಕ ಕಡಿತಗೊಂಡಿದೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.
ಈ ವೇಳೆ ವಿಜ್ಞಾನಿಗಳಿಗೆ ಧೈರ್ಯ ತುಂಬಿದ ಪ್ರಧಾನಿ ಮೋದಿ, ಇದು ನಿಮ್ಮ ಸಾಧನೆ ಕಡಿಮೆ ಏನು ಅಲ್ಲ ಎಂದು ಧೈರ್ಯ ತುಂಬುವ ಕೆಲಸ ಮಾಡಿದರು ಮತ್ತು ಧೈರ್ಯಗೇಡ ಬೇಡಿ ಎಂದು ಬೆನ್ನುತ್ತಟ್ಟಿದರು.ದೇಶಕ್ಕೆ ನಿಮ್ಮ ಬಗ್ಗೆ ಹೆಮ್ಮೆ ಇದೆ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗುತ್ತದೆ. ಸಾಧನೆಯ ಹಾದಿಯಲ್ಲಿ ಏರಿಳಿತ ಇದ್ದೇ ಇರುತ್ತದೆ. ನಾನು ನಿಮ್ಮ ಜೊತೆ ಇರುತ್ತೇನೆ ಎಂದು ಹೇಳಿದರು. ಬಳಿಕ ವಿದ್ಯಾರ್ಥಿಗಳೊಂದಿಗೆ ಕೆಲ ಸಮಯ ಮಾತನಾಡಿ ಇಸ್ರೋ ಕೇಂದ್ರದಿಂದ ನಿರ್ಗಮಿಸಿದರು.
ಇದಕ್ಕೂ ಮುನ್ನ ಮಾತನಾಡಿದ ಇಸ್ರೋ ಅಧ್ಯಕ್ಷ ಕೆ.ಶಿವನ್ ಅವರು, 2.1 ಕಿ.ಮೀ ಅಂತರದಲ್ಲಿ ಸಿಗ್ನಲ್ ಕಡಿತಗೊಂಡಿದೆ. ಲ್ಯಾಂಡರ್ ಸಿಗ್ನಲ್ ಪಡೆಯಲು ನಿರಂತರವಾಗಿ ಪ್ರಯತ್ನಿಸಲಾಗುತ್ತಿದೆ ಎಂದಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ