ಬಳ್ಳಾರಿ
ವೈದ್ಯಕೀಯ ಶಿಕ್ಷಣ ಸಚಿವರಾದ ತುಕಾರಾಂ ರವರು ಎರಡು ದಿನಗಳ ಕಾಲ ನಗರದ ವಿವಿಧ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ರಂದು ವಿಮ್ಸ್ ಆಸ್ಪತ್ರೆಯ ನಿರ್ದೇಶಕರು ಸೇರಿದಂತೆ ಹಲವಾರು ಪ್ರಾಧ್ಯಾಪಕ ರನ್ನು ಒಳಗೊಂಡಂತೆ ಅಧಿಕಾರಿಗಳ ಸಭೆ ನಡೆಸಿದರು,
ನಂತರ ಎರಡನೇ ದಿನವೂ ಕೂಡ ವಿಮ್ಸ್ ಆಸ್ಪತ್ರೆಯಲ್ಲಿ ತದನಂತರ ವಾರ್ಡ್ ಗಳಿಗೆ ತೆರಳಿ ಅಲ್ಲಿನ ಸ್ವಚ್ಛತೆ ಮತ್ತು ರೋಗಿಗಳಿಗೆ ಯಾವ ರೀತಿಯ ಚಿಕಿತ್ಸೆ ಸಿಗುತ್ತದೆ ಎಂಬುದನ್ನು ಕೇಳುವ ಮೂಲಕ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಆಸ್ಪತ್ರೆಯ ಆಡಳಿತ ಮಂಡಳಿಯ ಅಧಿಕಾರಿಗಳಿಗೆ ಸೂಚಿಸಿದರು,
ವಿಮ್ಸ್ ಆಸ್ಪತ್ರೆಯ ಅಧೀಕ್ಷಕರ ಕಛೇರಿಯ ಸಭಾಂಗಣದಲ್ಲಿ ಸುದ್ದಿಗೋಷ್ಟಿಯನ್ನು ನಡೆಸಿ, ಮಾತನಾಡಿದ ಅವರು ಆಸ್ಪತ್ರೆಗೆ ಬರುವ ರೋಗಿಗಳು ಚಿಕಿತ್ಸೆ ಪಡೆದು ಗುಣಮುಕರಾಗಿ ನಗು ನಗುತ ಹೊರಗೆ ಹೋಗುವಂತೆ ಬದಲಾವಣೆ ಮಾಡಲಾಗುವುದು ಎಂದರು. ಹಾಗೆಯೇ ಕೆ
ಪಿ ಟಿ ಸಿ ಎಲ್ ನವರು ನಮ್ಮ ಆಸ್ಪತ್ರೆಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಲು ಮುಂದಾಗಿದ್ದಾರೆ. ಅದನ್ನು ನಾವು ಸರಿಯಾಗಿ ಸದ್ಬಳಕೆ ಮಾಡಿಕೊಂಡು ರೋಗಿಗಳಿಗೆ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಲು ನಿರ್ದೇಶಕರಿಗೆ ಸೂಚನೆ ಮತ್ತು ನಿರ್ದೇಶನ ನೀಡಿದರು. ಆಸ್ಪತ್ರೆಯ ಅಭಿವೃದ್ಧಿಗೆ ಈಗಾಗಲೆ 4 ಕೋಟಿ 5 ಲಕ್ಷ ಬಿಡುಗಡೆ ಮಾಡಲಾಗಿದೆ, ಅದನ್ನು ಸರಿಯಾದ ರೀತಿಯಲ್ಲಿ ಅವಶ್ಯಕತೆಗಳ ಅನುಗುಣವಾಗಿ ಬಳಸಲು ನಿರ್ಧರಿಸಲು ಸಿಬ್ಬಂದಿಗಳಿಗೆ ನಿರ್ದೇಶಿಸಿದ್ದೇನೆಎಂದರು.
ನಾನು ಬರುವ ಬಜೆಟ್ ನಲ್ಲಿ ವಿಶೇಷವಾಗಿ ಬಳ್ಳಾರಿ ವಿಮ್ಸ್ ಆಸ್ಪತ್ರೆಯ ಹಾಸಿಗೆಯ ಮತ್ತು ಇನ್ನುಳಿದ ಅಭಿವೃದ್ಧಿ ಯೋಜನೆ ರೋಗಿಗಳಿಗೆ ಪೌಷ್ಟಿಕಾಹಾರ ಹಾಗೆಯೇ ಮೆಡಿಕಲ್ ಕಾಲೇಜು ಶಿಕ್ಷಣಕ್ಕೆ ಸಂಬಂಧ ಪಟ್ಟ ತದನಂತರ ಸಿರಂಜ್,ಜೌಷಧಿ ಮತ್ತು ಹೊರಗುತ್ತಿಗೆ ನೌಕರರ ಸಂಬಳವನ್ನು ಸೇರಿದಂತೆ ಬಜೆಟ್ ನಲ್ಲಿ ಘೋಷಣೆ ಮಾಡಲು ಮಾನ್ಯ ಮುಖ್ಯಮಂತ್ರಿ ಕುಮಾರ್ ಸ್ವಾಮಿ ಮತ್ತು ನಮ್ಮ ಪಕ್ಷದ ಹಿರಿಯರ ಜೊತೆಯಲ್ಲಿ ಮಾತನಾಡಿ ಅನುದಾನ ಬಿ ಡುಗಡೆಗೊಳಿಸುವ ಭರವಸೆ ನೀಡಿದರು.