ಹಿರಿಯೂರು :
ನಗರದ ಪ್ರಧಾನ ರಸ್ತೆಯಲ್ಲಿರುವ ಶ್ರೀಸತ್ಯನಾರಾಯಣಸ್ವಾಮಿ ದೇವಾಲಯದಲ್ಲಿ ಶ್ರೀರಾಮ ಸೇವಾ ಸಮಿತಿ ವತಿಯಿಂದ ಶ್ರೀರಾಮನವಮಿ ಅಂಗವಾಗಿ ಆಯೋಜಿಸಿದ್ದ ರಾಮೋತ್ಸವ ವಿಶೇಷ ಪೂಜಾ ಕಾರ್ಯಕ್ರಮ ಹಾಗೂ ಸಂಜೆಯ ಸಾಂಸ್ಕೃತಿಕ ಕಾರ್ಯಕ್ರಮ ಮುಕ್ತಾಯವಾಯಿತು.
ಈ ಕಾರ್ಯಕ್ರಮದಲ್ಲಿ ಪ್ರತೀ ವರ್ಷದಂತೆ ಈ ವರ್ಷವೂ ಸಹಾ ದೇವಾಲಯದಲ್ಲಿ ಸಾಮೂಹಿಕ ಶ್ರೀಸತ್ಯನಾರಾಯಣಸ್ವಾಮಿಯ ಪೂಜೆ ನಡೆಯಿತು. ಸ್ವಾಮಿಗೆ ಮುಂಜಾನೆಯಿಂದಲೇ ಅರ್ಚನೆ ಅಭಿಷೇಕ ಸತ್ಯನಾರಾಯಣಸ್ವಾಮಿಯ ಕಥಾಶ್ರವಣ ಹಾಗೂ ಮಹಾಮಂಗಳಾರತಿ ತೀರ್ಥಪ್ರಸಾದ ವಿನಿಯೋಗ ಮತ್ತು ಅನ್ನದಾಸೋಹ ಕಾರ್ಯಕ್ರಮ ನಡೆಯಿತು. ಶ್ರೀರಾಮಸೇವಾಸಮಿತಿ ಪದಾಧಿಕಾರಿಗಳು ಹಾಗೂ ನಗರದ ಅನೇಕ ಭಕ್ತರು ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
