ತುಮಕೂರು 
ಕ್ಷಯ ರೋಗದ ಬಗ್ಗೆ ಪ್ರತಿಯೊಬ್ಬರಿಗೂ ಜಾಗೃತಿ ಮೂಡಿಸುವ ಅಗತ್ಯ ಎಂದು ಜಿಲ್ಲಾ ಕ್ಷಯ ರೋಗ ನಿಯಂತ್ರಣಾಧಿಕಾರಿ ಡಾ|| ಸನತ್ಕುಮಾರ್ ತಿಳಿಸಿದರು.
ವಿಶ್ವ ಕ್ಷಯ ರೋಗ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಕ್ಷಯ ರೋಗದ ಅರಿವು ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು ಕ್ಷಯ ರೋಗದಿಂದ ಬಳಲುತ್ತಿರುವವರಿಗೆ ಉತ್ತಮ ಜೀವನ ನಡೆಸಲು ಅವಕಾಶ ಮಾಡಬೇಕು. ಕ್ಷಯ ರೋಗ ಸಾಂಕ್ರಾಮಿಕ ರೋಗವಾಗಿದ್ದು, ಸೂಕ್ತ ಚಿಕಿತ್ಸೆ ಪಡೆಯದಿದ್ದಲ್ಲಿ ಬೇರೆಯವರಿಗೆ ಹರಡುವ ಸಾಧ್ಯತೆ ಇರುತ್ತದೆ. ಯಾವುದೇ ಕಾರಣಕ್ಕೂ ರೋಗದ ಬಗ್ಗೆ ನಿರ್ಲಕ್ಷ್ಯಿಸದೇ ಶೀಘ್ರ ಪತ್ತೆ ಮಾಡಿ ಚಿಕಿತ್ಸೆಯನ್ನು ಪಡೆದುಕೊಂಡು ರೋಗದಿಂದ ಮುಕ್ತರಾಗಬೇಕು ಎಂದು ಸಲಹೆ ನೀಡಿದರು.
ದೇಶದಲ್ಲಿ ಕ್ಷಯರೋಗ ನಿರ್ಮೂಲನೆ ಮಾಡಲು ಸರ್ಕಾರ ಈಗಾಗಲೇ ಕ್ರಮ ತೆಗೆದುಕೊಂಡಿದ್ದು ರೋಗ ನಿರ್ಮೂಲನೆಗಾಗಿ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳು ರೋಗಿಗಳಲ್ಲಿ ತಾರತಮ್ಯ ತೋರದೆ ಕೈ ಜೋಡಿಸಿ ಕೆಲಸ ಮಾಡುವುದು ಅವಶಕ್ಯವಾಗಿದೆ ಎಂದು ತಿಳಿಸಿದರು.
ದೇಶದಲ್ಲಿ ಪ್ರತಿ ವರ್ಷವೂ 35 ಸಾವಿರದಿಂದ 40 ಸಾವಿರ ಜನರು ಈ ಖಾಯಿಲೆಯಿಂದ ಸಾವನ್ನುಪ್ಪುತ್ತಿದ್ದಾರೆ. ಜಿಲ್ಲೆಯಲ್ಲಿ 3000 ಜನರು ಈ ಖಾಯಿಲೆಗೆ ತುತ್ತಾಗುತ್ತಿದ್ದಾರೆ.
ಈ ರೋಗದ ಬಗ್ಗೆ ಗ್ರಾಮೀಣ ಜನರಿಗೆ ಹೆಚ್ಚು ಅರಿವು ಮೂಡಿಸಬೇಕು ಎಂದು ತಿಳಿಸಿದರು. ದಿನಾಚರಣೆ ಅಂಗವಾಗಿ ಬಸ್ನಿಲ್ದಾಣ, ರೈಲ್ವೆ ಸ್ಟೇಷನ್ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಸಾರ್ವಜನಿಕರಿಗೆ ಕರಪತ್ರ ಮೂಲಕ ಅರಿವು ಮೂಡಿಸಲಾಯಿತು. ಈ ಸಂದರ್ಭದಲ್ಲಿ ಕ್ಷಯ ರೋಗದ ಸಿಬ್ಬಂದಿಗಳು ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








