ಕ್ಷಯರೋಗಕ್ಕೆ ಪ್ರಾಥಮಿಕ ಹಂತದಲ್ಲೇ ಚಿಕಿತ್ಸೆ ಅತ್ಯವಶ್ಯಕ :ಡಾ.ಎಚ್.ಎಸ್.ರಾಘವೇಂದ್ರಸ್ವಾಮಿ

ಹಾವೇರಿ

        ಕ್ಷಯರೋಗವು ಮೈಕೋ ಬ್ಯಾಕ್ಟೀರಿಯಂ ಟ್ಯೈಬರ್‍ಕುಲೋಸಿಸ್ ಎಂಬ ಸೂಕ್ಷ್ಮಾಣುವಿನಿಂದ ಉಂಟಾಗುತ್ತದೆ. ಕ್ಷಯರೋಗಕ್ಕೆ ಪ್ರಾಥಮಿಕ ಹಂತದಲ್ಲಿಯೇ ಚಿಕಿತ್ಸೆ ನೀಡುವುದು ಅತ್ಯವಶ್ಯಕವಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಚ್.ಎಸ್. ರಾಘವೇಂದ್ರಸ್ವಾಮಿ ಅವರು ಹೇಳಿದರು.

         ಮಂಗಳವಾರ ನಗರದ ಶಿವಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯ ರೋಗ ನಿಯಂತ್ರಣ ಕೇಂದ್ರ, ಜಿಲ್ಲಾ ಆಸ್ಪತ್ರೆ ಹಾಗೂ ಜಿಲ್ಲಾ ವಾರ್ತಾ ಇಲಾಖೆ ಇವರ ಸಹಯೋಗದಲ್ಲಿ ಜರುಗಿದ ವಿಶ್ವ ಕ್ಷಯರೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು.

        ಜಿಲ್ಲೆಯಲ್ಲಿ ಕ್ಷಯರೋಗ ಮುಕ್ತಗೊಳಿಸಲು ಸರ್ವೇ ಕಾರ್ಯ ಆರಂಭಿಸಲಾಗಿದೆ. ಆರಂಭಿಕ ಹಂತದಲ್ಲೇ ಈ ರೋಗಗಳನ್ನು ಪತ್ತೆಹಚ್ಚಿ ಉಚಿತವಾಗಿ ಸೂಕ್ತ ನೀಡುವುದರ ಮೂಲಕ ಜಿಲ್ಲೆಯನ್ನು ಕ್ಷಯರೋಗ ಮುಕ್ತವಾಗಿಸಲು ಕಾರ್ಯಕ್ರಮ ಹಾಕಿಕೊಳ್ಳಲಾಗಿದೆ ಎಂದು ಹೇಳಿದರು.
ಜಿಲ್ಲೆಯಲ್ಲಿ 2013 ರಿಂದ 2018ರ ಫೆಬ್ರುವರಿವರೆಗೆ 2212 ಸಂಶಯಾಸ್ಪದ ಎಂಡಿಆರ್ ಜನರ ಕಫವನ್ನು ಪರೀಕ್ಷೆ ಒಳಪಡಿಸಿದೆ.

       ಇದಲ್ಲಿ 170 ಜನರು 170 ಎಂ.ಡಿ.ಅರ್. ಕ್ಷಯರೋಗಿ ಎಂದು ದೃಢಪಟ್ಟಿದ್ದು, ಈ ಪೈಕಿ 163 ಜನರಿಗೆ ಏಳು ದಿನಗಳ ಚಿಕಿತ್ಸಾ ಪೂರ್ವದ ಸಿದ್ಧತೆಗಾಗಿ  ಹುಬ್ಬಳ್ಳಿ ಕಿಮ್ಸ್‍ಗೆ ಕಳುಹಿಸಿ ನಂತರ ಜಿಲ್ಲೆಯಲ್ಲಿಯೇ ಮುಂದಿನ ಚಿಕಿತ್ಸೆಯನ್ನು ಪ್ರಾರಂಭಿಸಲಾಗಿದೆ. 163 ಜನರಲ್ಲಿ 110 ಜನರು ಚಿಕಿತ್ಸೆಯನ್ನು ಪೂರ್ಣಗೊಳಿಸಿ ಗುಣಮುಖರಾಗಿದ್ದಾರೆ . ಕ್ಷರೋಗದ ಲಕ್ಷಣಗಳು ಕಂಡುಬಂದರೆ ತಕ್ಷಣವೇ ವೈದ್ಯರನ್ನು ಸಂಪರ್ಕಿಸಿ ಸೂಕ್ತ ಚಿಕಿತ್ಸೆ ಪಡೆದುಕೊಳ್ಳಲು ಮನವಿ ಮಾಡಿಕೊಂಡರು. .

      ನಕ್ಷಾ ಕೋಷ್ಠಕ ಯೋಜನೆಯಡಿ ನೋಂದಾಯಿಸಿಕೊಂಡ ಕ್ಷಯ ರೋಗಿಗಳಿಗೆ ಪೌಷ್ಟಿಕಾಂಶ ಆಹಾರ ಸೇವನೆಗೆ ಅನೂಕೂಲವಾಗಲೆಂದು ಮಾಸಿಕ 500ರೂ.ಗಳನ್ನು ನೀಡಲಾಗುತ್ತಿದೆ ಎಂದು ಹೇಳಿದರು.ಹುಕ್ಕೇರಿಮಠದ ಸದಾಶಿವ ಶ್ರೀಗಳು, ಜಿಲ್ಲಾ ಕ್ಷಯ ರೋಗ ನಿಯಂತ್ರಣ ಅಧಿಕಾರಿ ಡಾ.ನಿಲೇಶ್ ಎಂ.ಎನ್. ಅವರು ಮಾತನಾಡಿದರು.ಕಾರ್ಯಕ್ರಮಕ್ಕೂ ಮುನ್ನಾ ಜಿಲ್ಲಾ ಆಸ್ಪತ್ರೆಯಿಂದ ಶಿವಬಸವೆಶ್ವರ ಕಲ್ಯಾಣ ಮಂಟಪದವರೆಗೆ ಜಾಥಾ ಕಾರ್ಯಕ್ರಮಕ್ಕೆ ಜಿಲ್ಲಾ ಮುಖ್ಯ ಕಾರ್ಯನಿರ್ವಾಹಕ ಕೆ.ಲೀಲಾವತಿ ಅವರು ಚಾಲನೆ ನೀಡಿದರು
ಕಾರ್ಯಕ್ರಮದಲ್ಲಿ ಕುಟುಂಬ ಕಲ್ಯಾಣಾಧಿಕಾರಿ ದೇವರಾಜ, ಜಿಲ್ಲಾ ಸಂರಕ್ಷಣಾ ಅಧಿಕಾರಿ ಜಗದೀಶ ಪಾಟೀಲ್, ಜಿಲ್ಲಾ ಕುಷ್ಟರೋಗ ಅಧಿಕಾರಿ ಡಾ.ಸತೀಶ, ಜಿಲ್ಲಾ ಮಲೇರಿಯಾ ನಿಯಂತ್ರಣಧಿಕಾರಿ ಡಾ. ಸುಹೀಲಾ , ಕ್ಷಯರೋಗ ಚಿಕಿತ್ಸಾ ಘಟಕದ ವ್ಯದ್ಯಾಧಿಕಾರಿ ಡಾ.ಪ್ರಭಾಕರ ಕುಂದೂರು ಇತರರು ಉಪಸ್ಥಿತರಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link