ಹೂವಿನಹಡಗಲಿ :
ತಾಲೂಕಿನ ಹಿರೇಮಲ್ಲನಕೆರೆ ಗ್ರಾಮದಲ್ಲಿ ವಿಶ್ವ ರೈತ ದಿನಾಚರಣೆಯನ್ನು ಆಚರಿಸಲಾಯಿತು ಕಾರ್ಯಕ್ರಮದ ಉದ್ಘಾಟನೆಯನ್ನು ರೈತ ಸಂಘದ ತಾಲೂಕು ಅಧ್ಯಕ್ಷರಾದ ಅಂಚಿ ಮಂಜುನಾಥರವರು ನೇಗಿಲು ಪೂಜೆಯೊಂದಿಗೆ ನೆರವೇರಿಸಿ ರೈತರ ಹಲವಾರು ಸಮಸ್ಯೆಗಳು ನಿರಂತರವಾಗಿ ಕಾಡುತ್ತಿವೆ ಎಂದು ಹೇಳಿದರು
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರ ಸಮಸ್ಯೆಗಳನ್ನು ಪರಿಪೂರ್ಣವಾಗಿ ಪರಿಹರಿಸುವಲ್ಲಿ ವಿಫಲವಾಗಿದ್ದು, ಕೇವಲ ಕಣ್ಣೊರೆಸುವ ತಂತ್ರವನ್ನು ಮಾಡುತ್ತಿವೆ ಎಂದು ಆರೋಪಿಸಿದರು. ಅಧಿಕಾರಿಗಳು ರೈತರಲ್ಲಿ ತಾರತಮ್ಯ ನೀತಿಯನ್ನು ಅನುಸರಿಸುತ್ತಿದ್ದು, ರಾಜಕಾರಣಿಗಳ ಕೈಗೊಂಬೆಯಾಗಿ ಕಾರ್ಯ ನಿರ್ವಹಿಸುವುದನ್ನು ಬಿಟ್ಟು ರೈತರ ಕಷ್ಟಕ್ಕೆ ನೆರವಾಗುವಂತೆ ಆಗ್ರಹಿಸಿದರು
ವಿಶ್ವರೈತ ದಿನಾಚರಣೆ ಕಾರ್ಯಕ್ರಮದಲ್ಲಿ ಮಲ್ಲನಕೇರಿ ಮಠದ ಚನ್ನಬಸವ ಮಹಾಸ್ವಾಮಿಗಳು ಸಾನಿಧ್ಯವನ್ನು ವಹಿಸಿದ್ದರು ಗ್ರಾಪಂ ಅಧ್ಯಕ್ಷೆ ರುಕಿಬಾಯಿ ಕೊಟ್ರೇಶನಾಯ್ಕ ಅಧ್ಯಕ್ಷತೆ ವಹಿಸಿದ್ದರು. ಗ್ರಾ.ಪಂ ಉಪಾಧ್ಯಕ್ಷರಾದ ಟೆಂಗೂರಿ ಭರಮಲಿಂಗಪ್ಪ ಇವರು ಪ್ರಸ್ತಾವಿಕವಾಗಿ ಮಾತನಾಡಿದರು.
ಮುಖ್ಯ ಅತಿಥಿಗಳಾಗಿ ತಹಶೀಲ್ದಾರ್ ಕೆ.ರಾಘವೇಂದ್ರರಾವ್, ಇಓ ಸೋಮಶೇಖರ್, ರೈತ ಸಂಘದ ರಾಜ್ಯ ಉಪಾಧ್ಯಕ್ಷರಾದ ಎಂ. ಗಂಗಾಧರ, ಪಿಎಸಿಎಸ್‍ನ ಸಿಇಓ ಹೊಳಗುಂದಿ ರಾಮಣ್ಣ, ಸಹಾಯಕ ಕೃಷಿ ನಿರ್ದೇಶಕ ಎಂ.ನೀಲಾನಾಯ್ಕ, ಜೆಸ್ಕಾಂ ಎಇಇ ಮೋಟ್ಲನಾಯ್ಕ, ತೋಟಗಾರಿಕೆ ಇಲಾಖೆಯ ದುರ್ಗಾ ಪ್ರಸಾದ್, ಪಿಡಿಓ ಮಹಮ್ಮದ್ ಗೌಸ್, ಪಶು ವೈದ್ಯಾಧಿಕಾರಿ ಡಾ.ಮಂಜುನಾಥ, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ರಜನಿ, ಮುಖ್ಯೋಪಾಧ್ಯಾಯ ಧರ್ಮನಾಯ್ಕ, ಹಾಗೂ ಮಲ್ಲನಕೆರೆ ಮತ್ತು ಸುತ್ತಮುತ್ತಲಿನ ರೈತ ಬಾಂಧವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಇದೇ ಸಂದರ್ಭದಲ್ಲಿ ಪ್ರಗತಿಪರ ರೈತರನ್ನು ಸನ್ಮಾನಿಸಲಾಯಿತು. ಟಿ.ಲತಾ ಕಾರ್ಯಕ್ರಮ ನಿರೂಪಿಸಿ, ಟೆಂಗೂರಿ ಅಶೋಕ ವಂದಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ