ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಉಪನ್ಯಾಸಕರ ಪ್ರತಿಭಟನೆ..!!

ಬೆಂಗಳೂರು

   ಉಪನ್ಯಾಸಕರ ಕಾಲ್ಪನಿಕ ವೇತನ ಸಮಸ್ಯೆ ಬಗೆಹರಿಸಿ ಮೌಲ್ಯ ಮಾಪನ ಸಂಭಾವನೆ ಕೂಡಲೇ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರು ನಗರದಲ್ಲಿ ಮಂಗಳವಾರ ಒಂದು ದಿನದ ಧರಣಿ ಸತ್ಯಾಗ್ರಹ ನಡೆಸಿದರು.ನಗರದ ಮೌರ್ಯ ವೃತ್ತದ ಗಾಂಧಿ ಪ್ರತಿಮೆ ಮುಂಬಾಗ ಸೇರಿ ಧರಣಿ ಸತ್ಯಾಗ್ರಹ ನಡೆಸಿದ ಉಪನ್ಯಾಸಕರ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು, ಕೂಡಲೇ ಸರ್ಕಾರ, ಉಪನ್ಯಾಸಕರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿದರು.

    ಪ್ರತಿಭಟನೆಯ ನೇತೃತ್ವ ವಹಿಸಿದ್ದ ಸಂಘದ ಅಧ್ಯಕ್ಷ ತಿಮ್ಮಯ್ಯ ಪುರ್ಲೆ ಅವರು ದ್ವಿತೀಯ ಪಿಯುಸಿ ಉತ್ತರ ಪತ್ರಿಕೆಗಳ ಮೌಲ್ಯ ಮಾಪನಕ್ಕೆ ನೀಡಬೇಕಾದ ಸಂಭಾವನೆಯನ್ನು ಸರ್ಕಾರ ಇದುವರೆಗೂ ವಿತರಿಸಿಲ್ಲ. ಕೂಡಲೇ ಸಂಭಾವನೆಯನ್ನು ಚೆಕ್ ಮೂಲಕ ವಿತರಿಸಬೇಕೆಂದು ಆಗ್ರಹಿಸಿದರು.2008ರ ನಂತರ ಆಯ್ಕೆಯಾದ ಉಪನ್ಯಾಸಕರಿಗೆ ನೀಡುತ್ತಿದ್ದ 500 ರೂ. ಎಕ್ಸ್‍ಗ್ರೇಷಿಯಾವನ್ನು ಕೂಡಲೇ ಮೂಲವೇತನಕ್ಕೆ ವಿಲೀನಗೊಳಿಸಬೇಕು.

     ಪ್ರೌಢಶಾಲೆಯಿಂದ ಪದೋನ್ನತಿ ಹೊಂದಿ ಪಿಯು ಕಾಲೇಜುಗಳಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ ಉಪನ್ಯಾಸಕರಿಗೆ ಕಾಲಮಿತಿ ಬಡ್ತಿಯನ್ನು 6ನೇ ವೇತನ ಆಯೋಗದ ಎರಡನೇ ವರದಿಯಲ್ಲಿ ಸೂಚಿಸಿರುವಂತೆ ಮಂಜೂರು ಮಾಡಬೇಕೆಂದು ಆಗ್ರಹಿಸಿದರು.ಕೂಡಲೇ ಪಿಯು ಉಪನ್ಯಾಸಕರ ಕಾಲ್ಪನಿಕ ವೇತನ ಸಮಸ್ಯೆ ಬಗೆಹರಿಸಬೇಕು. ಎನ್.ಸಿ.ಇ.ಆರ್.ಟಿ.ಸಿ. ನಿಯಮದಂತೆ ವಿದ್ಯಾರ್ಥಿಗಳ ಗರಿಷ್ಠ ಸಂಖ್ಯೆಯನ್ನು ಪ್ರತಿ ತರಗತಿಗೆ 80 ರಿಂದ 40ಕ್ಕೆ ನಿಗದಿಪಡಿಸಬೇಕು.

     ಪಿಎಚ್‍ಡಿ, ಇನ್ನಿತರ ಸಮಾನಾಂತರ ಶಿಕ್ಷಣ ಪಡೆದಿರುವ ಉಪನ್ಯಾಸಕರಿಗೆ ಪದವಿ ಕಾಲೇಜಿಗೆ ಬಡ್ತಿ ನೀಡಬೇಕು. ರಾಜ್ಯದಲ್ಲಿ ಪರಿವರ್ತನೆಯಾಗಿರುವ 276 ಪಬ್ಲಿಕ್ ಶಾಲೆಗಳಲ್ಲಿ ಆಡಳಿತಾತ್ಮಕ ಸಮಸ್ಯೆ ಬಗೆಹರಿಸಬೇಕು. ಗಣಿತ ವಿಷಯದಲ್ಲೂ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಅಂಕ ನೀಡಬೇಕು. ವರ್ಗಾವಣೆ ಪ್ರಕ್ರಿಯೆಯನ್ನು ಅಧಿಸೂಚನೆ ಅನ್ವಯ ಆರಂಭಿಸುವುದು ಸೇರಿದಂತೆ, ಪ್ರಮುಖ 14 ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿದರು.

      ಕಾರ್ಯಾಧ್ಯಕ್ಷ ಎಸ್.ಆರ್. ವೆಂಕಟೇಶ್, ಪ್ರಧಾನ ಕಾರ್ಯದರ್ಶಿ ನಿಂಗೇಗೌಡ, ಘೋಷಾಧ್ಯಕ್ಷ ಜಯಣ್ಣ ಸೇರಿದಂತೆ, ಇನ್ನಿತರ ಪದಾಧಿಕಾರಿಗಳು, ಸದಸ್ಯರುಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.ಉಳಿದಂತೆ, 2008ರ ನಂತರ ಆಯ್ಕೆಯಾದ ಉಪನ್ಯಾಸಕರಿಗೆ ನೀಡುತ್ತಿದ್ದ 500 ರೂ. ಎಕ್ಸ್‍ಗ್ರೇಷಿಯಾವನ್ನು ಕೂಡಲೇ ಮೂಲವೇತನಕ್ಕೆ ವಿಲೀನಗೊಳಿಸಬೇಕು.

     ಪ್ರೌಢಶಾಲೆಯಿಂದ ಪದೋನ್ನತಿ ಹೊಂದಿ ಪಿಯು ಕಾಲೇಜುಗಳಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ ಉಪನ್ಯಾಸಕರಿಗೆ ಕಾಲಮಿತಿ ಬಡ್ತಿಯನ್ನು 6ನೇ ವೇತನ ಆಯೋಗದ ಎರಡನೇ ವರದಿಯಲ್ಲಿ ಸೂಚಿಸಿರುವಂತೆ ಮಂಜೂರು ಮಾಡಬೇಕೆಂದು ಆಗ್ರಹಿಸಿದರು.ಕೂಡಲೇ ಪಿಯು ಉಪನ್ಯಾಸಕರ ಕಾಲ್ಪನಿಕ ವೇತನ ಸಮಸ್ಯೆ ಬಗೆಹರಿಸಬೇಕು. ಎನ್.ಸಿ.ಇ.ಆರ್.ಟಿ.ಸಿ. ನಿಯಮದಂತೆ ವಿದ್ಯಾರ್ಥಿಗಳ ಗರಿಷ್ಟ ಸಂಖ್ಯೆಯನ್ನು ಪ್ರತಿ ತರಗತಿಗೆ 80 ರಿಂದ 40ಕ್ಕೆ ನಿಗದಿಪಡಿಸಬೇಕು.

      ಪಿಎಚ್‍ಡಿ, ಇನ್ನಿತರ ಸಮಾನಾಂತರ ಶಿಕ್ಷಣ ಪಡೆದಿರುವ ಉಪನ್ಯಾಸಕರಿಗೆ ಪದವಿ ಕಾಲೇಜಿಗೆ ಬಡ್ತಿ ನೀಡಬೇಕು. ರಾಜ್ಯದಲ್ಲಿ ಪರಿವರ್ತನೆಯಾಗಿರುವ 276 ಪಬ್ಲಿಕ್ ಶಾಲೆಗಳಲ್ಲಿ ಆಡಳಿತಾತ್ಮಕ ಸಮಸ್ಯೆ ಬಗೆಹರಿಸಬೇಕು. ಗಣಿತ ವಿಷಯದಲ್ಲೂ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಅಂಕ ನೀಡಬೇಕು. ವರ್ಗಾವಣೆ ಪ್ರಕ್ರಿಯೆಯನ್ನು ಅಧಿಸೂಚನೆ ಅನ್ವಯ ಆರಂಭಿಸಬೇಕು ಸೇರಿದಂತೆ, ಪ್ರಮುಖ 14 ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿದರು.ಪ್ರತಿಭಟನೆಯಲ್ಲಿ ಸಂಘದ ಕಾರ್ಯಾಧ್ಯಕ್ಷ ಎಸ್.ಆರ್. ವೆಂಕಟೇಶ್, ಪ್ರಧಾನ ಕಾರ್ಯದರ್ಶಿ ನಿಂಗೇಗೌಡ, ಘೋಷಾಧ್ಯಕ್ಷ ಜಯಣ್ಣ ಸೇರಿದಂತೆ, ಇನ್ನಿತರ ಪದಾಧಿಕಾರಿಗಳು, ಸದಸ್ಯರುಗಳು ಭಾಗವಹಿಸಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ

Recent Articles

spot_img

Related Stories

Share via
Copy link