ಮತದಾರರ ಜಾಗೃತಿ ಕುರಿತು ಪಂಜಿನ ಮೆರವಣಿಗೆ

ಬಳ್ಳಾರಿ

        ಬಳ್ಳಾರಿ ಲೋಕಸಭಾ ಉಪಚುನಾವಣೆಯ ಹಿನ್ನಲೆಯಲ್ಲಿ ಮತದಾರರಲ್ಲಿ ಜಾಗೃತಿ ಮೂಡಿಸಲು ಪಂಜಿನ ಮೆರವಣಿಗೆಯನ್ನು ರೂಪನಗುಡಿ ಗ್ರಾಮದಲ್ಲಿ ಇತ್ತಿಚೆಗೆ ಹಮ್ಮಿಕೊಳ್ಳಲಾಯಿತು.

        ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಜಾನಕಿ ರಾಮ್ ಅವರು ಮತದಾರರಿಗೆ ಮತದಾನದ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು ಜೊತೆಗೆ ಮತದಾರರು ಯಾವುದೇ ಆಮಿಷಕ್ಕೆ ಒಳಗಾಗದೆ ತಮ್ಮ ಮತವನ್ನು ಕಡ್ಡಾಯವಾಗಿ ಚಲಾಯಿಸಬೇಕೆಂದು ಕರೆ ನೀಡಿದರು.

          ಈ ಕಾರ್ಯಕ್ರಮದಲ್ಲಿ ಬಳ್ಳಾರಿ ಸಹಾಯಕ ಆಯುಕ್ತರು ರಮೇಶ ಕೋನಪ್ಪ ರೆಡ್ಡಿ, ಹಾಗೂ ತಾಪಂ ಸಹಾಯಕ ನಿರ್ದೇಶಕರು, ಸಿಡಿಪಿಒ, ಬಳ್ಳಾರಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಆರೋಗ್ಯ ಇಲಾಖೆ ಸಿಬ್ಬಂದಿಯವರು, ಗ್ರಾಮ ಲೆಕ್ಕಾಧಿಕಾರಿಗಳು, ರೂಪನಗುಡಿ ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗದವರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link