ಹುಳಿಯಾರು
ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಮತದಾನ ಮಹತ್ವ ಬಗ್ಗೆ ಮತದಾರರಲ್ಲಿ ಜಾಗೃತಿ ಮೂಡಿಸಲು ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಹುಳಿಯಾರಿನ ಬಸ್ ನಿಲ್ದಾಣದಲ್ಲಿ ಬೀದಿನಾಟಕ ಪ್ರದರ್ಶನ ಮತ್ತು ಜಾನಪದ ಗೀತೆಗಳ ಮೂಲಕ ಪ್ರಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕಡ್ಡಾಯ ಮತದಾನದ ಮಹತ್ವ, ಯಾವುದೇ ಆಮಿಷಗಳಿಗೆ ಬಲಿಯಾಗದೇ ಮತದಾನ ಮಾಡುವ ಬಗ್ಗೆ, ಮತದಾನ ಮಾಡುವ ಮುನ್ನ ಎಂತಹ ಅಭ್ಯರ್ಥಿಯನ್ನು ಆಯ್ಕೆ ಮಾಡಬೇಕು, ಅಮಿಷಗಳನ್ನು ಕಂಡಲ್ಲಿ ಮತದಾರರು ಕೈಗೊಳ್ಳಬೇಕಿರುವ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಜಾನಪದ ಗೀತೆ, ಬೀದಿ ನಾಟಕ ಮೂಲಕ ಜಾಗೃತಿ ಮೂಡಿಸಲಾಯಿತು.
ಮತದಾನ ಸಂವಿಧಾನಾತ್ಮಕ ಹಕ್ಕಾಗಿದ್ದು, ಮತ ಚಲಾಯಿಸುವ ಮೂಲಕ ಪ್ರಜಾಪ್ರಭುತ್ವದ ಬಲವರ್ಧನೆ ಮಾಡಬೇಕು ಪ್ರಜಾಪ್ರಭುತ್ವದಲ್ಲಿ ಮತಹಕ್ಕು ಚಲಾಯಿಸುವುದು 18 ವರ್ಷ ತುಂಬಿದ ಪ್ರತಿಯೊಬ್ಬರ ಕರ್ತವ್ಯವಾಗಿದೆ. ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಯಾದ ಮತದಾರರು ಚುನಾವಣೆಯಲ್ಲಿ ಕಡ್ಡಾಯವಾಗಿ ಮತ ಚಲಾಯಿಸಬೇಕು ಎಂದರು.
ಒಟ್ಟಾರೆ ಪ್ರಜಾಪ್ರಭುತ್ವದಲ್ಲಿ ಮತದಾನ ಮಹತ್ವ ಕಾರ್ಯವಾಗಿದ್ದು ಈ ಕಾರ್ಯವನ್ನು ಕಡ್ಡಾಯವಾಗಿ ಮಾಡಲೇಬೇಕು ಎಂಬುದನ್ನು ಬೀದಿ ನಾಟಕದ ಮೂಲಕ ಕಲಾವಿದರು ಮನೋಜ್ಞವಾಗಿ ಅಭಿನಯಿಸಿ ಅರಿವು ಮೂಡಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








