ಚಿಕ್ಕನಾಯಕನಹಳ್ಳಿ
ಪಟ್ಟಣದಲ್ಲಿ ಮತದಾರರಿಗೆ ಇ.ವಿ.ಎಂ ಮತ್ತು ವಿ.ವಿ.ಪ್ಯಾಟ್ ಬಗ್ಗೆ ಅರಿವು ಮೂಡಿಸಲು ಪುರಸಭಾ ಮುಖ್ಯಾಧಿಕಾರಿ ನಿರ್ವಾಣಯ್ಯ ಮತ್ತು ತಂಡದವರು ಮನೆಮನೆಗೆ ತೆರಳಿ ಜಾಗೃತಿ ಮೂಡಿಸಿದರು.
ಪುರಸಭೆ, ತಾಲ್ಲೂಕು ಪಂಚಾಯಿತಿ, ಸ್ವೀಪ್ ಸಮಿತಿ ವತಿಯಿಂದ ಏರ್ಪಡಿಸಿದ್ದ ಮತದಾನದ ಜಾಗೃತಿ ಕಾರ್ಯವು ಪಟ್ಟಣದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ, ಖಾಸಗಿ ಬಸ್‍ನಿಲ್ದಾಣ, ಕಂಬಳಿ ಸೊಸೈಟಿ ಹತ್ತಿರ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಹಳ್ಳಿಕಾರರ ಬೀದಿ ಹಾಗೂ ರಾಯಪ್ಪನಪಾಳ್ಯ, ಗಾಂಧಿನಗರ, ಬಸವೇಶ್ವರನಗರ, ಜೋಗಿಬಾವಿ ಸಂಧಿ ಈ ಭಾಗಗಳಲ್ಲಿ ಪುರಸಭೆ ಸಿಬ್ಬಂದಿಗಳು ಮತದಾನದ ಅರಿವಿನ ಹಸ್ತಪ್ರತಿಗಳನ್ನು ಮನೆಮನೆಗಳಿಗೆ ಹಂಚುವ ಮುಖಾಂತರ ಮತ್ತು ಗೋಡೆ ಬರಹದ ಭಿತ್ತಿ ಪತ್ರಗಳನ್ನು ಅಂಟಿಸುವ ಮುಖಾಂತರ ಜಾಗೃತಿ ಮೂಡಿಸಲಾಯಿತು.
ಈ ಸಂದರ್ಭದಲ್ಲಿ ಪುರಸಭಾ ಮುಖ್ಯಾಧಿಕಾರಿ ನಿರ್ವಾಣಯ್ಯ, ಕಂದಾಯ ಅಧಿಕಾರಿ ರವಿಕುಮಾರ್, ನಾಗರಾಜು ಹಾಗೂ ಪುರಸಭಾ ಸಿಬ್ಬಂದಿ ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
