ಚಳ್ಳಕೆರೆ
ಲೋಕಸಭಾ ಚುನಾವಣೆ ಹಿನ್ನೆಲ್ಲೆಯಲ್ಲಿ ಚಳ್ಳಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮತದಾರರ ಪಟ್ಟಿ ಸೇರ್ಪಡೆ ಹಾಗೂ ಪಟ್ಟಿಯಿಂದ ಕೈಬಿಡುವ ವಿವರಣೆಯ ಬಗ್ಗೆ ಇಲ್ಲಿನ ತಾಲ್ಲೂಕು ಕಚೇರಿಯಲ್ಲಿ ಶುಕ್ರವಾರ ಪರಿಶೀಲನಾ ಸಭೆಯನ್ನು ನಡೆಸಲಾಯಿತು.
ನೂತನ ತಹಶೀಲ್ದಾರ್ ಎಂ.ಮಲ್ಲಿಕಾರ್ಜುನ ಮಾತನಾಡಿ, ಈಗಾಗಲೇ ರಾಜ್ಯದೆಲ್ಲಡೆ ಲೋಕಸಭಾ ಚುನಾವಣೆ ಹಿನ್ನೆಲ್ಲೆಯಲ್ಲಿ ಮತದಾರರ ಪಟ್ಟಿ ಪರೀಕ್ಷರಣಾ ಕಾರ್ಯ ವೇಗವಾಗಿ ನಡೆಯುತ್ತಿದ್ದು, ಈಗಾಗಲೇ ಮತದಾರರ ಸೇರ್ಪಡೆಗೆ ಅವಕಾಶವನ್ನು ನೀಡಲಾಯಿತು. ಪ್ರಸ್ತುತ ಮತದಾರರ ಪಟ್ಟಿ ಸೇರ್ಪಡೆ ಹಾಗೂ ಮೃತಪಟ್ಟವರನ್ನು ಮತದಾರರ ಪಟ್ಟಿಯಿಂದ ಕೈಬಿಡುವ ಕುರಿತು ಹಲವಾರು ಸೂಚನೆಯನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಕ್ಷೇತ್ರ ವ್ಯಾಪ್ತಿಯ ಎಲ್ಲಾ ಮತಗಟ್ಟೆ ಕೇಂದ್ರಗಳಲ್ಲಿ ನಿಯೋಜಿಸಲ್ಪಟ್ಟ ಮತಗಟ್ಟೆ ಅಧಿಕಾರಿ ಹಾಗೂ ಮೇಲ್ವಿಚಾರಕರು ಕ್ರಮಬದ್ದವಾಗಿ ಕಾರ್ಯನಿರ್ವಹಿಸುವಂತೆ ಸೂಚನೆ ನೀಡಲಾಯಿತು. ಯಾವುದೇ ಹಂತದಲ್ಲೂ ತಪ್ಪುಗಳಾಗದಂತೆ ಎಚ್ಚರಿಕೆ ವಹಿಸಬೇಕೆಂದು ತಹಶೀಲ್ದಾರ್ ತಿಳಿಸಿದರು.
ಪೌರಾಯುಕ್ತ ಜೆ.ಟಿ.ಹನುಮಂತರಾಜು ಮಾತನಾಡಿ, ಚಳ್ಳಕೆರೆಯ ನಗರ ವ್ಯಾಪ್ತಿಯ ಎಲ್ಲಾ ಮತಗಟ್ಟೆ ಕೇಂದ್ರಗಳಲ್ಲಿ ಮತದಾರರ ಪರೀಕ್ಷರಣಾ ಕಾರ್ಯವನ್ನು ಕಾರ್ಯದಕ್ಷತೆಯಿಂದ ನಿರ್ವಹಿಸಲಾಗಿದೆ. ಕಂದಾಯ ಇಲಾಖೆ ಸಿಬ್ಬಂದಿ ಜೊತೆಗೆ ಚುನಾವಣಾ ಶಾಖೆ ಸಿಬ್ಬಂದಿ ಹಾಗೂ ನಗರಸಭೆಯ ಸಿಬ್ಬಂದಿ ವರ್ಗ ಜಂಟಿಯಾಗಿ ನಗರದ ಮನೆ ಮನೆಗಳಿಗೂ ಭೇಟಿ ನೀಡಿ ವಿವರವನ್ನು ಸಂಗ್ರಹಿಸಲಾಗಿದೆ. ಮತದಾರರ ಪಟ್ಟಿ ಸಿದ್ದತೆ ಕುರಿತು ಸಮರ್ಪಕ ಕಾರ್ಯ ನಡೆದಿದೆ ಎಂದರು. ಈ ಸಂದರ್ಭದಲ್ಲಿ ಚುನಾವಣಾ ಶಿರಸ್ತೇದಾರ ಮಂಜುನಾಥ, ಚುನಾವಣಾ ಶಾಖೆಯ ಪ್ರಕಾಶ್, ಓಬಳೇಶ್ ಮುಂತಾದವರು ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
