ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಚಾಲನೆ

ಚಿತ್ರದುರ್ಗ:

     ಭಾರತ ಚುನಾವಣಾ ಆಯೋಗ, ಜಿಲ್ಲಾಡಳಿತ, ಜಿ.ಪಂ., ತಾ.ಪಂ ವತಿಯಿಂದ ಸಮಗ್ರ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಯನ್ನು ಚಿತ್ರದುರ್ಗ ತಾಲೂಕು ಪಂಚಾಯಿತಿ ಅಧ್ಯಕ್ಷ ಡಿ.ಎಂ.ಲಿಂಗರಾಜು ತಾ.ಪಂ.ಸಭಾಂಗಣದಲ್ಲಿ ಭಾನುವಾರ ಉದ್ಘಾಟಿಸಿದರು.

      ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಉದ್ಘಾಟಿಸಿ ಮಾತನಾಡಿದ ಅವರು ಸೋಮವಾರದಿಂದ ಗ್ರಾಮ ಪಂಚಾಯಿತಿಗಳಲ್ಲಿ ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ವಿಶೇಷ ಪಟ್ಟಿಯ ಪರಿಷ್ಕರಣೆ ನಡೆಯಲಿದ್ದು, ಮತದಾರರ ಪಟ್ಟಿಯಲ್ಲಿರುವ ನೂನ್ಯತೆ ಸರಿಪಡಿಸುವುದು, ದಾಖಲೆ ಪರಿಶೀಲಿಸುವುದು, ಕುಟಂಬ ಸದಸ್ಯರ ಮಾಹಿತಿ, ಮತದಾರರ ದೂರವಾಣಿ ಸಂಖ್ಯೆ, ಮತದಾನ ಕೇಂದ್ರಗಳ ಬಗ್ಗೆ ಮಾಹಿತಿ ಸಂಗ್ರಹಿಸಲಾಗುವುದು.

     ಗ್ರಾಮೀಣ ಪ್ರದೇಶದ ಜನರು ಇದರ ಸದುಪಯೋಗಪಡೆದುಕೊಳ್ಳುವಂತೆ ಮನವಿ ಮಾಡಿದರು. ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಕೃಷ್ಣನಾಯ್ಕ ಮಾತನಾಡುತ್ತ ಸೆ.1 ರಿಂದ 30 ರವರೆಗೆ ನಡೆಯಲಿರುವ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಯಲ್ಲಿ ಮನೆ ಮನೆಗೆ ಭೇಟಿ ನೀಡುವ ಮತಗಟ್ಟೆ ಅಧಿಕಾರಿಗಳಿಗೆ ಆಯಾ ಗ್ರಾಮ ಪಂಚಾಯಿತಿಗಳಲ್ಲಿ ಮಾಹಿತಿ ನೀಡುವ ಮೂಲಕ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಯಶಸ್ವಿಯಾಗಲು ಸಹಕರಿಸುವಂತೆ ವಿನಂತಿಸಿದರು.ಚಿತ್ರದುರ್ಗ ತಾಲೂಕು ಪಂಚಾಯಿತಿ ಸಿಬ್ಬಂದಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.

        ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap