ಜ 6,7,8ರಂದು ಮತದಾರರ ಪಟ್ಟಿ ಪರಿಕ್ಷರಣೆ: ಎಂ.ಮಮತಾ

ಗುಬ್ಬಿ

     ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2020 ರ ಸಂಬಂಧ ಇದೇ ತಿಂಗಳ 6, 7 ಮತ್ತು 8 ನೇ ದಿನಾಂಕದಂದು ಮೂರು ದಿನಗಳ ಕಾಲ ಮಿಂಚಿನ ನೋಂದಣಿ ಕಾರ್ಯಕ್ರಮವನ್ನು ಆಯಾ ಮತಗಟ್ಟೆಗಳು, ಶಿಕ್ಷಣ ಸಂಸ್ಥೆಗಳು ಹಾಗೂ ಸಹಾಯಕ ಚುನಾವಣಾಧಿಕಾರಿಗಳ ಕಚೇರಿಗಳಲ್ಲಿ ನಡೆಸಲಾಗುವುದು ಎಂದು ತಹಸೀಲ್ದಾರ್ ಎಂ.ಮಮತಾ ತಿಳಿಸಿದರು.

     ಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮಿಂಚಿನ ನೋಂದಣಿಯಲ್ಲಿ ಬಿಎಲ್‍ಒಗಳು ಕಡ್ಡಾಯವಾಗಿ ಅವರ ಮತಗಟ್ಟೆಗಳಲ್ಲಿ ಬೆಳಿಗ್ಗೆ 8 ರಿಂದ ಸಂಜೆ 6 ರವರೆಗೆ ಹಾಜರಿದ್ದು ಅರ್ಜಿಗಳನ್ನು ಸ್ವೀಕರಿಸಬೇಕಿದೆ. ಈ ಪ್ರಕ್ರಿಯೆ ಸರಿಯಾಗಿ ನಡೆಯುತ್ತಿರುವ ಬಗ್ಗೆ ಸಂಬಂಧಪಟ್ಟ ಮೇಲ್ವಿಚಾರಕರು ನಿಗಾವಹಿಸಲು ಸೂಚಿಸಲಾಗಿದೆ ಎಂದರು.

     ನೋಂದಣಿ ಸಂದರ್ಭದಲ್ಲಿ ಸಾಧ್ಯವಾದಷ್ಟು ಯುವ ಮತದಾರರಿಂದ ಅರ್ಜಿ ಸ್ವೀಕರಿಸಲು ಸೂಚಿಸಲಾಗಿದೆ. ಹೊಸ ಮತದಾರರು ನೋಂದಾಯಿಸಿಕೊಳ್ಳಲು ಶಿಕ್ಷಣ ಸಂಸ್ಥೆಗಳಲ್ಲಿ ಜಾಗೃತಿ ಮೂಡಿಸುವ ಕಾರ್ಯ ಮಾಡಲಾಗಿದೆ ಎಂದ ಅವರು ನೋಂದಣಿ ಕಾರ್ಯದ ಜತೆಯಲ್ಲಿ ಪದವೀಧರ ಕ್ಷೇತ್ರದ ಮತದಾರರ ಪಟ್ಟಿಗೂ ಪದವೀಧರರ ಅರ್ಜಿಗೆ ಮನ್ನಣೆ ನೀಡಲಾಗುತ್ತಿದೆ. ಈ ಬಾರಿ 2 ಸಾವಿರ ಮತದಾರರು ಸೇರ್ಪಡೆಯಾಗಿದ್ದು, ಮತ್ತಷ್ಟು ಮತದಾರರ ಹೆಸರು ನೋಂದಾಯಿಸಲು ಸಿಬ್ಬಂದಿಗಳು ಸಿದ್ದತೆ ನಡೆಸಿದ್ದಾರೆ. ಈ ಕಾರ್ಯಕ್ಕೆ ಪದವೀಧರರು ಸ್ವಯಂ ಪ್ರೇರಿತವಾಗಿ ಆಗಮಿಸಲು ಮನವಿ ಮಾಡಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap