ಮಾರ್ಚ್31ಕ್ಕೆ ಲಾಲ್‍ಬಾಗ್ ಸಸ್ಯೋದ್ಯಾನದಲ್ಲಿ ರೇಖೆಗಳಲ್ಲಿ ಮತದಾರರ ಜಾಗೃತಿ ಅಭಿಯಾನ

ಬೆಂಗಳೂರು

       ಬೆಂಗಳೂರಿನ ಲಾಲ್‍ಬಾಗ್ ಸಸ್ಯೋದ್ಯಾನದ ಗಾಜಿನ ಮನೆಯಲ್ಲಿ ಭಾರತ ಚುನಾವಣಾ ಆಯೋಗದ ಆಶಯದಂತೆ ರಾಜ್ಯ ತೋಟಗಾರಿಕಾ ಇಲಾಖೆಯ ಸಹಯೋಗದೊಂದಿಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯೋಜಿಸಿರುವ ರೇಖೆಗಳಲ್ಲಿ ಚುನಾವಣೆ-2019 ಪ್ರದರ್ಶನ ಹಾಗೂ ಮತದಾರರ ಜಾಗೃತಿ ಅಭಿಯಾನಕ್ಕೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಅವರು ಮಾರ್ಚ್ 31 ರಂದು ಬೆಳಿಗ್ಗೆ 8-00 ಗಂಟೆಗೆ ಚಾಲನೆ ನೀಡಲಿದ್ದಾರೆ.

     ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ವ್ಯವಸ್ಥಿತ ಮತದಾರರ ಶಿಕ್ಷಣ ಹಾಗೂ ಚುನಾವಣಾ ಪಾಲ್ಗೊಳ್ಳುವಿಕೆ ಕಾರ್ಯಕ್ರಮಕ್ಕೆ ಪೂರಕವಾಗಿ ಆಯೋಜಿಸಿರುವ ಈ ವಿನೂತನ ಕಾರ್ಯಕ್ರಮದಲ್ಲಿ ರಾಜ್ಯ ಚುನಾವಣಾಧಿಕಾರಿ ಮುಖ್ಯ ಸಂಜೀವ್ ಕುಮಾರ್, ಅಪರ ಮುಖ್ಯ ಚುನಾವಣಾಧಿಕಾರಿಗಳಾದ ಡಾ ಅಜಯ್ ನಾಗಭೂಷಣ್, ಡಾ ಕೆ. ಜಿ. ಜಗದೀಶ್ ಮತ್ತು ಕೆ ಎನ್ ರಮೇಶ್, ಜಂಟಿ ಮುಖ್ಯ ಚುನಾವಣಾಧಿಕಾರಿ ಎ. ವಿ. ಸೂರ್ಯಸೇನ್, ರಾಜ್ಯ ತೋಟಗಾರಿಕಾ ಇಲಾಖೆಯ ನಿರ್ದೇಶಕ ಡಾ ಎಂ ವೆಂಕಟೇಶ್ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನಿರ್ದೇಶಕ ಎನ್ ಭೃಂಗೀಶ್ ಅವರು ಪಾಲ್ಗೊಳ್ಳಲಿದ್ದಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link