ಮತದಾನ ಜಾಗೃತಿ ಜಾಥ

ಕೂಡ್ಲಿಗಿ:

        ಪ್ರತಿಯೊಬ್ಬರು ತಪ್ಪದೆ ಮತದಾನ ಮಾಡುವ ಮೂಲಕ ಚುನಾವಣೆಯನ್ನು ಯಶಸ್ವಿಗೊಳಿಸಬೇಕು ಎಂದು ತಹಶೀಲ್ದಾರ್ ಎಲ್. ಕೃಷ್ಣಮೂರ್ತಿ ಹೇಳಿದರು. ಬಳ್ಳಾರಿ ಲೋಕಸಭಾ ಕ್ಷೇತ್ರದ ಉಪ ಚುನಾವಣಾ ಅಂಗವಾಗಿ ತಾಲ್ಲೂಕು ಆಡಳಿತದಿಂದ ಕೈಗೊಂಡಿರುವ ‘ಮತದಾನ ಜಾಗೃತಿ ಜಾಥ’ಕ್ಕೆ ಬುಧವಾರ ಚಾಲನೆ ನೀಡಿ ಮಾತನಾಡಿದರು.

        ಮತದಾರರು ಯಾವುದೇ ಅಮೀಷಕ್ಕೆ ಒಳಗಾಗದೆ, ನಿರ್ಭೀತಿಯಿಂದ ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವವನ್ನು ಬಲ ಪಡಿಸಬೇಕು. ದೇಶದ ಪ್ರಜಾಪ್ರಭುತ್ವ ವ್ಯವಸ್ಥೆ ಪ್ರಪಂಚಕ್ಕೇ ಮಾದರಿಯಾಗಿದೆ. ಚುನಾವಣೆ ಸಂದರ್ಭ ಮಾತ್ರ ಮತದಾರರು ತಮ್ಮ ಮತದಾನದ ಹಕ್ಕನ್ನು ಚಲಾಯಿಸಲು ಅವಕಾಶವಿರುತ್ತದೆ. ಕಡ್ಡಾಯ ಮತದಾನ ಭಾರತದ ಪ್ರತಿ ಪ್ರಜೆಯ ಹಕ್ಕು. ಆದ್ದರಿಂದ ಚುನಾವಣೆ ಬಂದ ಸಂದರ್ಭದಲ್ಲಿ ಮತದಾನ ಮಾಡುವ ಹಕ್ಕಿನ ಅವಕಾಶ ಕಳೆದುಕೊಳ್ಳದೇ ಕಡ್ಡಾಯವಾಗಿ ಮತದಾನ ಮಾಡಬೇಕೆಂದು ಮನವಿ ಮಾಡಿದರು.

        ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಹಣಾಧಿಕಾರಿ ಜಿ.ಎಂ. ಬಸಣ್ಣ, ಗ್ರೇಡ್-2 ತಹಶೀಲ್ದಾರ್ ಅರುಂದತಿ ನಾಗವಿ, ಪಟ್ಟಣ ಪಂಚಾಯ್ತಿ ಮುಖ್ಯಧಿಕಾರಿ ಉಮೇಶ್ ಹಿರೇಮಠ, ಶಿಕ್ಷಣ ಸಂಯೋಜಕ ತಳವಾರ ಶರಣಪ್ಪ ಹಾಗೂ ತಾಲ್ಲೂಕು ಕಚೇರಿ ಹಾಗೂ ತಾಲ್ಲೂಕು ಪಂಚಾಯ್ತಿ ಸಿಬ್ಬಂದಿ ಇದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link