ಹರಪನಹಳ್ಳಿ:
ಪಟ್ಟಣದ ಸಮಾಜ ಕಲ್ಯಾಣ ಇಲಾಖೆಯ ಸರ್ಕಾರಿ ಬಾಲಕರ ಕಾಲೇಜು ವಿದ್ಯಾರ್ಥಿ ನಿಲಯದಲ್ಲಿ ಸೋಮವಾರ `ಮತದಾನದ ಜಾಗೃತಿ ಅಭಿಯಾನ’ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಆನಂದ ವೈ ಡೊಳ್ಳಿನ ಮಾತನಾಡಿ, `ಮತವನ್ನು ಯಾವುದೇ ಆಮಿಷಗಳಿಗೆ ಒಳಗಾಗಿ ಮಾರಿಕೊಳ್ಳಬಾರದು. ಕಡ್ಡಾಯ ಮತದಾನ ನಮ್ಮೆಲ್ಲರ ಜವಾಬ್ದಾರಿ ಮತ್ತು ಹಕ್ಕು ಆಗಿದೆ. ನಿಲಯಾರ್ಥಿಗಳಿಗೆ ಮತದಾನದ ಮಹತ್ವ ಬಗ್ಗೆ ಅರಿವು ಮೂಡಿಸಿದರು.ವಾರ್ಡನ್ ಬಸವರಾಜ ಮಾತನಾಡಿ, `ಜಾಗೃತ ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವ ಉಳಿವು ಸಾಧ್ಯ. ಒಂದೊಂದು ಮತವೂ ನಿರ್ಣಾಯಕ. ಹಾಗಾಗಿ ಮತ ಚಲಾಯಿಸುವ ಜತೆಗೆ ಮತ್ತೊಬ್ಬರಿಗೂ ಮತದಾನ ಮಾಡಲು ಪ್ರೇರೇಪಿಸಬೇಕು’ ಎಂದು ಹೇಳಿದರು.ಈ ಸಂದರ್ಭದಲ್ಲಿ ನಿಲಯಾರ್ಥಿಗಳು, ಸಿಬ್ಬಂದಿ ವರ್ಗದವರೂ ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
