ನಾಗರೀಕರಲ್ಲಿ ಮತದಾನದ ಅರಿವು ಮೂಡಿಸಲು ಜಾಗೃತಿ ಜಾಥಾ

ಹಿರಿಯೂರು :

        ಯಾವೊಬ್ಬ ಮತದಾರನು ಮತದಾನದಿಂದ ವಂಚಿತರಾಗಬಾರದು ಎಂಬುದು ನಮ್ಮ ಚುನಾವಣಾ ಧ್ಯೇಯವಾಗಿದೆ. ಆದ್ದರಿಂದ ಪ್ರತಿಮತದಾರನಿಗೂ ಮತದಾನದ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂಬುದಾಗಿ ತಾಲ್ಲೂಕು ತಹಶೀಲ್ದಾರ್ ನಫೀಜಾಬೇಗಂ ಹೇಳಿದರು.

         ನಗರದ ನಗರಸಭೆ ಆವರಣದಲ್ಲಿ ಮತದಾನ ಅರಿವು ಮೂಡಿಸುವ ಅಂಗವಾಗಿ ಸ್ವೀಪ್ ಸಮಿತಿ ಹಾಗೂ ನಗರಸಭೆ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

        ಪ್ರಜಾಪ್ರಭುತ್ವದಲ್ಲಿ ದೃಢವಿಶ್ವಾಸ ಹೊಂದಿರುವ ಭಾರತದ ಪೌರರಾದ ನಾವುಗಳು ದೇಶದ ಪ್ರಜಾಸತ್ತಾತ್ಮಕ ಸಂಪ್ರದಾಯ ಮತ್ತು ಮುಕ್ತ ಹಾಗೂ ನ್ಯಾಯಸಮ್ಮತ, ಶಾಂತಿಯುತ ಚುನಾವಣೆಗಳ ಘನತೆಯನ್ನು ಎತ್ತಿ ಹಿಡಿಯುತ್ತೇವೆಂದು ಹಾಗೂ ಪ್ರತಿಯೊಂದು ಚುನಾವಣೆ ಯಲ್ಲಿಯೂ ನಿರ್ಭೀತವಾಗಿ ಮತ್ತು ಧರ್ಮ-ಜನಾಂಗ, ಜಾತಿ-ಮತ, ಭಾಷೆ ಅಥವಾ ಯಾವುದೇ ದಾಕ್ಷಿಣ್ಯಗಳ ಪ್ರೇರಣೆಯಿಂದ ಪ್ರಭಾವಿತ ರಾಗದೆ ಮತ ಚಲಾಯಿಸುತ್ತೇವೆಂದು ಈ ಮೂಲಕ ಪ್ರತಿಜ್ಞೆ ಮಾಡುತ್ತೇವೆ ಎಂಬುದಾಗಿ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.

         ಈ ಕಾರ್ಯಕ್ರಮದಲ್ಲಿ ನಗರಸಭೆ ಪೌರಾಯುಕ್ತ ಮಹಂತೇಶ್, ಸಾರ್ವಜನಿಕ ಶಿಕ್ಷಣ ಇಲಾಖೆ ಕ್ಷೇತ್ರಶಿಕ್ಷಣಾಧಿಕಾರಿ ಸಿ.ವಿ.ನಟರಾಜ್, ತಾ.ಪಂ.ಯೋಜನಾಧಿಕಾರಿ ಅಶ್ವತ್ಥಾಮ, ನಗರಸಭೆ ವ್ಯವಸ್ಥಾಪಕಿ ಲೀಲಾವತಿ, ಸೇರಿದಂತೆ ನಗರಸಭೆ ಸಿಬ್ಬಂದಿ ಹಾಗೂ ಪೌರಕಾರ್ಮಿಕರು ಭಾಗವಹಿಸಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link