ಎಂ ಎನ್ ಕೋಟೆ
ಗುಬ್ಬಿ ತಾಲ್ಲೂಕಿನ ಅಂಕಸಂದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಹೆಡಿಗೆಹಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿನ ಘಟಕ ಕೆಟ್ಟು ಹೋಗಿ ಸುಮಾರು 4 ತಿಂಗಳುಗಳೆ ಕಳೆದಿವೆ. ಅದರೂ ಸಂಬಂಧಪಟ್ಟ ಅಧಿಕಾರಿಗಳು ಯಾರೂ ಕ್ರಮ ಕೈಗೊಂಡಿಲ.್ಲ ಕುಡಿಯುವ ನೀರಿಗಾಗಿ ಹಾಹಾಕಾರ ಉಂಟಾಗಿದೆ ಎಂದು ತಾಪಂ ಸದಸ್ಯೆ ಕರಿಯಮ್ಮ ರಮೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಂಕಸಂದ್ರ ಗ್ರಾಮದ ಸ್ಥಳೀಯರು ಮತ್ತು ಅಕ್ಕಪಕ್ಕದ ಹಳ್ಳಿಗಳು ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಜನರು ಅಂಕಸಂದ್ರದ ಕುಡಿಯುವ ನೀರಿನ ಘಟಕವನ್ನೆ ಅವಲಂಬಿಸಿದ್ದಾರೆ. ಬೇಸಿಗೆಯಲ್ಲಿ ಕುಡಿಯುವ ನೀರಿಗಾಗಿ ಪರದಾಡು ವಂತಾಗಿದೆ ಎಂದು ಗ್ರಾಮಸ್ಥರು ಅಳಲು ತೊಂಡಿಕೊಂಡಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ತುರ್ತಾಗಿ ದುರಸ್ತಿ ಗೊಳಿಸಿ ಕುಡಿಯುವ ನೀರಿನ ಸೌಲಭ್ಯವನ್ನು ಕಲ್ಪಿಸಬೇಕು ಎಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ