ಉಪಚುನಾವಣೆಯಲ್ಲಿ ಗೆಲ್ಲುವುದೇ ನಮ್ಮ ಗುರಿ : ಸಿ ಟಿ ರವಿ

ಬೆಂಗಳೂರು

    ವಿಧಾನಪರಿಷತ್ತಿನ ನಾಲ್ಕು ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸುವುದೇ ನಮ್ಮ ಮುಂದಿನ ಗುರಿ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ. ರವಿ ಹೇಳಿದ್ದಾರೆ. ಪಕ್ಷದ ಪ್ರಧಾನ ಕಾರ್ಯದರ್ಶಿಯಾದ ಬಳಿಕ ಮೊದಲ ಬಾರಿಗೆ ಬೆಂಗಳೂರಿನ ಬಿಜೆಪಿ ಕಚೇರಿ ಜಗನ್ನಾಥ ಭವನಕ್ಕೆ ಭೇಟಿ ನೀಡಿದ ಅವರನ್ನು ಕಾರ್ಯಕರ್ತರು ಹಾಗೂ ಮುಖಂಡರು ಆತ್ಮೀಯವಾಗಿ ಸ್ವಾಗತಿಸಿದರು.

    ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಷ್ಟ್ರೀಯ ನಾಯಕರು ತಮ್ಮ ಮೇಲೆ ವಿಶ್ವಾಸವಿಟ್ಟು ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಆಯ್ಕೆ ಮಾಡಿದ್ದಾರೆ. ಪಕ್ಷ ಸಂಘಟನೆ ಬೇಕೋ, ಸಂಘಟನೆಗೆ ಆದ್ಯತೆ ನೀಡುತ್ತೀರೋ ಎಂದು ವರಿಷ್ಠರು ತಮ್ಮ ಅಭಿಪ್ರಾಯ ಕೇಳಿದ್ದರು. ಆಗ ನಾನು ಪಕ್ಷವನ್ನೇ ಆಯ್ಕೆ ಮಾಡಿಕೊಂಡಿದ್ದೇನೆ ಎಂದರು. ಜನತೆ ಮತ್ತು ಪಕ್ಷದ ಕಾರ್ಯಕರ್ತರ ಸಹಕಾರದೊಂದಿಗೆ ತಮಗೆ ನೀಡಿದ ಎಲ್ಲ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಲಾಗುವುದು.

    ರಾಜರಾಜೇಶ್ವರಿ ನಗರ ಹಾಗೂ ಶಿರಾ ವಿಧಾನಸಭಾ ಕ್ಷೇತ್ರಗಳಿಗೆ ಪಕ್ಷ ಸಮರ್ಥ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿದ್ದು, ಎರಡೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುತ್ತೇವೆ ಎಂದು ಹೇಳಿದರು. ಇದಲ್ಲದೇ ವಿಧಾನಪರಿಷತ್ತಿನ ನಾಲ್ಕು ಕ್ಷೇತ್ರಗಳಿಗೂ ಸಹ ಚುನಾವಣೆ ನಡೆಯಲಿದ್ದು, ಇದಕ್ಕಾಗಿ ಸಿದ್ಧತೆ ಮಾಡಿಕೊಳ್ಳಲಾಗುವುದು. ಮುಂಬರುವ ದಿನಗಳಲ್ಲಿ ರಾಜ್ಯದಲ್ಲಿ ನಡೆಯಲಿರುವ ಎಲ್ಲಾ ಚುನಾವಣೆಗಳನ್ನು ಒಟ್ಟಾಗಿ ಎದುರಿಸಿ ಗೆಲುವು ಸಾಧಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap