ಬೆಳಗಾವಿ:
ಪ್ರಸ್ತುತ ರಾಜಕೀಯ ಬೆಳವಣಿಗೆಯಲ್ಲಿ ಕಾಂಗ್ರೆಸ್ ತನ್ನ ಅತೃಪ್ತರನ್ನು ವಾಪಾಸ್ ಕರೆತರಲು ಹರಸಾಹಸ ಪಡುವ ಜೊತೆಗೆ ವಿರೋಧ ಪಕ್ಷದ ನಾಯರನ್ನು ಸೆಳೆಯುತ್ತಿದೆ ಎಂಬ ಗುಮಾನಿ ಹಬ್ಬಿರವ ಬೆನ್ನಲ್ಲೆ ನಾವು ಯಾವುದೇ ರಿವರ್ಸ್ ಆಪರೇಷನ್ ಮಾಡಲ್ಲ. ನಮ್ಮವರು ವಾಪಸ್ ಬಂದರೆ ಸರ್ಕಾರ ಉಳಿಯುತ್ತದೆ ಎಂದು ಸಚಿವ ಸತೀಶ್ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಈಗಾಗಲೇ ನಾಲ್ಕು ಜನ ಶಾಸಕರು ಬೆಂಗಳೂರಿನಲ್ಲೇ ಇದ್ದಾರೆ. ಮುಂಬೈನಲ್ಲಿರುವ ಇಬ್ಬರು ಶಾಸಕರು ಬಂದರೆ ಸರ್ಕಾರ ಉಳಿಯುತ್ತದೆ. ಸರ್ಕಾರ ಉಳಿಸಿಕೊಳ್ಳುವ ಕೆಲಸ ಎಲ್ಲರೂ ಮಾಡುತ್ತಿದ್ದಾರೆ ಎಂದು ಹೇಳಿದರು.
ಮೈತ್ರಿ ಸರ್ಕಾರದಿಂದಲೂ ತಪ್ಪಾಗಿರಬಹುದು. ಈಗ ಅದನ್ನು ಸರಿಪಡಿಸಿಕೊಳ್ಳಲಾಗುತ್ತದೆ. ಬಿಜೆಪಿ ಪದೇ ಪದೇ ಸರ್ಕಾರ ಬೀಳಿಸುವ ಕೆಲಸ ಮಾಡಿಕೊಂಡು ಬರುತ್ತಿದೆ. ಬಿಜೆಪಿ ಪಕ್ಷ ಅಧಿಕಾರ ತರಲು ಅಮಿತ್ ಶಾ ಪ್ರಯತ್ನ ಮಾಡುತ್ತಿದ್ದಾರೆ. ನಾವು ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದೇವೆ. ಬೇರೆಯವರನ್ನು ಸಚಿವರನ್ನಾಗಿ ಮಾಡಿದರೂ, ಇಲ್ಲ ನಮ್ಮನ್ನ ಮುಂದುವರಿಸಿದರೂ ನಾವು ಸಿದ್ಧರಿದ್ದೇವೆ ಎಂದು ತಿಳಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








