ಬೆಂಗಳೂರು
ಪಕ್ಷದ ಗೆಲುವಿಗಾಗಿ ಒಂದು ವೇಳೆ ಸ್ಥಾನ ತ್ಯಾಗ ಮಾಡಬೇಕು ಎಂದು ಹೈಕಮಾಂಡ್ ಹೇಳಿದರೆ ಅದಕ್ಕೂ ಸಿದ್ಧ ಎಂದು ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ ಸುರೇಶ್ ಹೇಳಿದ್ದಾರೆ .
ಬೆಂಗಳೂರಿನಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಇಂದು ತುಮಕೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ ಮತ್ತು ಕೋಲಾರ ಲೋಕಸಭಾ ಕ್ಷೇತ್ರಗಳನ್ನು ಹೊಸಬರಿಗೆ ಬಿಟ್ಟುಕೊಡಬೇಕು ಎಂಬ ಬಲವಾದ ಕೂಗಿನ ನಡುವೆಯೇ ಈ ನಾಲ್ಕು ಕ್ಷೇತ್ರಗಳ ಮುಖಂಡರ ಜೊತೆ ಸಭೆ ನಡೆಸಿ ಕಾರ್ಯಕರ್ತರ ಹಾಗೂ ಮುಖಂಡರ ಅಭಿಪ್ರಾಯ ಸಂಗ್ರಹಿಸಲಾಗುವುದು ಎಂದು ಹೇಳಿದರು.
ಅಭ್ಯರ್ಥಿಗಳ ಆಯ್ಕೆಗೆ ಪ್ರಾಥಮಿಕ ಹಂತದ ಕಾರ್ಯಕರ್ತರಿಂದ ಅಭಿಪ್ರಾಯ ಸಂಗ್ರಹ ಮಾಡಲಾಗುವುದು. ಈ ಸಭೆಯಲ್ಲಿ ಜೆಡಿಎಸ್ ಜೊತೆ ಮೈತ್ರಿಗೆ ಧಕ್ಕೆಯಾಗದ ರೀತಿಯಲ್ಲಿ ಹೊಂದಾಣಿಕೆ ಮಾಡಿಕೊಳ್ಳುವ ಬಗ್ಗೆಯೂ ಕಾರ್ಯಕರ್ತರ ಅಭಿಪ್ರಾಯ ಆಲಿಸಲಾಗುವುದು ಎಂದು ಹೇಳಿದರು.
ಹಾಲಿ ಕ್ಷೇತ್ರಗಳ ಸಂಸದರು ಸಕ್ರಿಯರಾಗಿ ಕ್ಷೇತ್ರಗಳಲ್ಲಿ ಕೆಲಸ ಮಾಡಿದ್ದಾರೆ. ಪ್ರಧಾನಿ ಮೋದಿ ಅಲೆ ವಿರುದ್ಧ ಸೆಣಸಾಡಿ ಪಕ್ಷ ಕಟ್ಟಿದ್ದಾರೆ. ಹೈಕಮಾಂಡ್ ನಿಂದ ಎಲ್ಲರಿಗೂ ಸೀಟು ಸಿಗುವ ಭರವಸೆ ಇದೆ. ಒಂದು ವೇಳೆ ಹೈಕಮಾಂಡ್ ಹೇಳಿದರೆ ನಾನೇ ಸೀಟು ಬಿಟ್ಟುಕೊಡಲು ಸಿದ್ಧನಿದ್ದೇನೆ ಎಂದು ಅವರು ವರದಿಗಾರರ ಪ್ರಶ್ನೆಗೆ ಉತ್ತರಿಸಿದರು.
ಬಿಜೆಪಿಯ ಆಪರೇಷನ್ ಕಮಲವನ್ನು ಮಾಧ್ಯಮಗಳು ಸರಿಯಾಗಿ ಬಿಂಬಿಸದೆ ಕೆಲವು ವಿಷಯಗಳನ್ನುಮುಚ್ಚಿಟ್ಟಿವೆ ಎಂದು ದೂರಿದರು.ಆಪರೇಷನ್ ಕಮಲ ಯಾವ ಹಂತದಲ್ಲಿ ನಡೆಯುತ್ತಿದೆ ಎಂಬುದು ಮಾಧ್ಯಮದವರಿಗೆ ಗೊತ್ತಿದ್ದರೂ ಅದನ್ನು ಸರಿಯಾಗಿ ಬಿಂಬಿಸುತ್ತಿಲ್ಲ. ಆಪರೇಷನ್ ಕಮಲ ನಡೆಯದಿದ್ದರೆ ರೆಸಾರ್ಟ್ ನಲ್ಲಿ ಗಲಾಟೆ ನಡೆಯುತ್ತಿರಲಿಲ್ಲ, ಹೀಗಾಗಿ ಆಪರೇಷನ್ ಕಮಲದ ಹಿಂದಿನ ಮೂಲ ಹುಡುಕಬೇಕು ಎಂದರು.
ಆನಂದ್ ಸಿಂಗ್ ನಿಧಾನವಾಗಿ ಗುಣಮುಖರಾಗುತ್ತಿದ್ದಾರೆ, ಕೇಸ್ ಮುಚ್ಚಿ ಹಾಕುವ ಪ್ರಯತ್ನ ನಡೆಯುತ್ತಿಲ್ಲ , ಆನಂದ್ ಸಿಂಗ್ ಪೊವಿಚಾರದಲ್ಲಿ ನಾನು ಯಾವುದನ್ನೂ ಮುಚ್ಚಿಟ್ಟಿಲ್ಲ. ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ, ಕಾನೂನಿನ ಪ್ರಕಾರ ಲೀಸರು ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಡಿ.ಕೆ. ಸುರೇಶ್ ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ