ಮೈ ಶುಗರ್ ಸಕ್ಕರೆ ಕಾರ್ಖಾನೆ ಅಭಿವೃದ್ಧಿಗೆ ಚಿಂತನೆ : ಸಿ ಎಂ

ಬೆಂಗಳೂರು

      ಜೆಡಿಎಸ್ – ಕಾಂಗ್ರೆಸ್ ಮೈತ್ರಿ ಸರ್ಕಾರದ 13 ಶಾಸಕರು ತಮ್ಮ ವಿಧಾನಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಬೆಳವಣಿಗೆಯಿಂದ ಸ್ವಲ್ಪವೂ ವಿಚಲಿತರಾಗದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, ಸೋಮವಾರ ಮಂಡ್ಯದ ಮೈ ಶುಗರ್ ಸಕ್ಕರೆ ಕಾರ್ಖಾನೆ ಪುನಶ್ಚೇತನ ಕುರಿತಂತೆ ಅಧಿಕಾರಿಗಳು ಹಾಗೂ ರೈತ ಪ್ರತಿನಿಧಿಗಳೊಂದಿಗೆ ನಿರಮ್ಮಳವಾಗಿ ಸಭೆ ನಡೆಸಿದರು.

     ಬಳಕ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರ ಸ್ವಾಮಿ, ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ಈಗಿನ ಸರ್ಕಾರದ ಅನಿಶ್ಚಿತತೆಯಂತಹ ಸಮಸ್ಯೆಗಳೆಲ್ಲವೂ ಇಷ್ಟರಲ್ಲೇ ಬಗೆಹರಿಯಲಿದೆ. ಸರ್ಕಾರಕ್ಕೆ ಯಾವುದೇ ತೊಂದರೆ ಎದುರಾಗದು ಎಂದು ಹೇಳಿದರು.

     ಈಗಿನ ಸಂದರ್ಭದಲ್ಲಿ ಬಿಜೆಪಿಯವರು ಏನು ಮಾಡುತ್ತಾರೆ ಎನ್ನುವುದು ತಮಗೆ ಸಂಬಂಧಪಡದ ವಿಚಾರ. ಮುಖ್ಯ ಮಂತ್ರಿಯಾಗಿ ತಮ್ಮ ಜವಾಬ್ದಾರಿಯನ್ನು ನಿಭಾಯಿಸಬೇಕಾದದ್ದು ತಮ್ಮ ಕರ್ತವ್ಯವಾಗಿದ್ದು, ಅದನ್ನು ನಿರ್ವಹಣೆ ಮಾಡುತ್ತಿದ್ದೇನೆ. ರಾಜಕೀಯ ಬೆಳವಣಿಗೆಗಳ ಬಗ್ಗೆ ತಲೆ ಕೆಡಿಸಿಕೊಳ್ಳುವ ಅವಶ್ಯಕತೆ ನಮಗಿಲ್ಲ ಎಂದರು.

     ಮೈಶುಗರ್ ಕಾರ್ಖಾನೆ ಅಭಿವೃದ್ದಿಗೆ ಕಳೆದ 10 ವರ್ಷಗಳಲ್ಲಿ ವಿವಿಧ ಸರ್ಕಾರಗಳು 428 ಕೋಟಿ ರೂ ನೀಡಿವೆ. ಆದರೆ ಕಾರ್ಖಾನೆ ಅಭಿವೃದ್ಧಿ ಮಾಡುವಲ್ಲಿ ಹಲವಾರು ಲೋಪದೋಷಗಳು ಉಂಟಾಗಿವೆ. ಈ ಸಂಬಂಧ ಅಧಿಕಾರಿಗಳು ಮತ್ತು ಆ ಭಾಗದ ರೈತ ಮುಖಂಡರ ಜೊತೆ ಚರ್ಚೆ ನಡೆಸಿ ನಡೆಸಿದ್ದೇನೆ ಎಂದು ಹೇಳಿದರು.

     ಇದೀಗ ಮೈಶುಗರ್ ಕಾರ್ಖಾನೆ ಪುನಶ್ಚೇತನಕ್ಕೆ 69 ಕೋಟಿ ರೂ ಅಗತ್ಯವಿದೆ ಎಂದು ಬೇಡಿಕೆ ಇಟ್ಟಿದ್ದಾರೆ. ಇದಲ್ಲದೇ ಕಾರ್ಖಾನೆ ಸಮಗ್ರ ಅಭಿವೃದ್ಧಿ ಕಷ್ಟ ಎಂಬ ಅಭಿಪ್ರಾಯವೂ ಇದೆ. ಹೀಗಾಗಿ ರೈತರ ಜೊತೆ ಮಾತನಾಡಿ ಮಾಹಿತಿ ಕಲೆ ಹಾಕಿರುವುದಾಗಿ ಸ್ಪಷ್ಟಪಡಿಸಿದರು.

     ಸಕ್ಕರೆ ಸಚಿವರಾದ ಆರ್. ಬಿ. ತಿಮ್ಮಾಪುರ, ಸಿ.ಎಸ್. ಪುಟ್ಟರಾಜು, ಡಿ.ಸಿ.ತಮ್ಮಣ್ಣ, ಸಾ.ರಾ. ಮಹೇಶ್, ಮಂಡ್ಯ ಜಿಲ್ಲೆಯ ಶಾಸಕರು, ರೈತ ಮುಖಂಡರು, ಹಿರಿಯ ಅಧಿಕಾರಿಗಳು ಸಭೆಯಲ್ಲಿ ಸಭೆಯಲ್ಲಿ ಭಾಗವಹಿಸಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap