ಪಾರದರ್ಶಕ ಆಡಳಿತಕ್ಕೆ ಹೆಚ್ಚು ಆದ್ಯತೆ : ಮುಖ್ಯಮಂತ್ರಿ ಯಡಿಯೂರಪ್ಪ

ಬೆಂಗಳೂರು

     ಕರ್ನಾಟಕ ದೇಶದಲ್ಲೇ ಅಭಿವೃದ್ಧಿಯಲ್ಲಿ ಮುಂಚೂಣಿಯಲ್ಲಿದೆ. ಪಾರದರ್ಶಕತೆ, ಉತ್ತಮ ಆಡಳಿತ ನೀತಿಗಳಿಂದ ರಾಜ್ಯದಲ್ಲಿ ಉದ್ಯಮಗಳು ಹೆಚ್ಚು ಹೆಚ್ಚಾಗಿ ಸ್ಥಾಪನೆಯಾಗುತ್ತಿವೆ. ಉದ್ಯಮಗಳ ಸ್ಥಾಪನೆಗೆ ಅನುಕೂಲವಾಗುವಂತೆ ನೀತಿಗಳ ಜಾರಿ ಮಾಡಲಾಗಿದೆಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು.

     ನಗರದಲ್ಲಿಂದು ಇಂದು ನಡೆದ ದಿ ಹಡ್ಡಲ್ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಒಳ್ಳೆಯ ಆಡಳಿತ ನೀಡುವುದು ತಮ್ಮ ಮೊದಲ ಆದ್ಯತೆ. ಅದರಂತೆ ಪಾರದರ್ಶಕ ಆಡಳಿತಕ್ಕೆ ಒತ್ತು ನೀಡಿದ್ದೇನೆ ಎಂದರು.

      ರಾಜ್ಯದಲ್ಲಿ ಆಡಳಿತದಲ್ಲಿ ಪಾರದರ್ಶಕತೆ ತಂದು ಒಳ್ಳೆಯ ಆಡಳಿತ ನೀಡುವುದು ತಮ್ಮ ಆಶಯ. ಅದರಂತೆ ತಂತ್ರಜ್ಞಾನ ಬಳಸಿಕೊಂಡು ಒಳ್ಳೆಯ ಆಡಳಿತ ನೀಡುವುತ್ತ ಗಮನ ಹರಿಸಿದ್ದೇನೆವಿವಿಧ ವಲಯಗಳಿಗೆ ಸಂಬಂಧಿಸಿದಂತೆ 24 ನೀತಿಗಳನ್ನು ಸರ್ಕಾರ ಇದುವರೆಗೂ ಜಾರಿಗೊಳಿಸಿದೆ ಎಂದು ಅವರು ಹೇಳಿದರು.

      ಕರ್ನಾಟಕ ದೇಶದಲ್ಲೇ ಐಟಿ ಉದ್ಯಮದ ರಾಜಧಾನಿ ಎಂದು ಹೆಸರು ಪಡೆದಿರುವ ಜತೆಗೆ ಜ್ಞಾನ ಮತ್ತು ಸ್ಟಾಟಪ್ ಉದ್ಯಮದಲ್ಲೂ ಮುಂಚೂಣಿಯಲ್ಲಿದೆ ಇಡೀ ದೇಶದಲ್ಲೇ ನಾವಿನ್ಯತೆಯಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ. ಇತ್ತೀಚೆಗಷ್ಟೇ ಕರ್ನಾಟಕ ನಾವಿನ್ಯತಾ ಪ್ರಾಧಿಕಾರವನ್ನೂ ಸ್ಥಾಪಿಸಲಾಗಿದೆ ದೇಶದ ಅಭಿವೃದ್ಧಿಗೆ ಮಾರ್ಗದರ್ಶನ ಮಾಡುವಂತಹ ಇಂತಹ ಸಮಾವೇಶಗಳು ಹೆಚ್ಚು ಹೆಚ್ಚು ನಡೆಯಲಿ ಎಂದು ಅವರು ಹೇಳಿದರು.ಈ ಸಮಾವೇಶದಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್, ರಾಜ್ಯಪಾಲ ವಜುಭಾಯಿ ರೂಢಾವಾಲ ಮತ್ತಿತರರು ಉಪಸ್ಥಿತರಿದ್ದರು.

 

Recent Articles

spot_img

Related Stories

Share via
Copy link