ಸಮ್ಮಿಶ್ರ ಸರ್ಕಾರ ನುಡಿದಂತೆ ನಡೆದುಕೊಂಡಿದೆ : ಕೃಷ್ಣಭೈರೇಗೌಡ

ಬೆಂಗಳೂರು

       ಸಮ್ಮಿಶ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ರೈತರ ಸಾಲ ಮನ್ನಾ, ಋಣಭಾರಮುಕ್ತ ಪತ್ರ ವಿತರಣೆಯ ಮೂಲಕ ಸಾಲದ ಸುಳಿಯಲ್ಲಿರುವ ರೈತರ ಸಾಲ ಮನ್ನಾ ಮಾಡುವ ಯೋಜನೆಗೆ ಮುಖ್ಯಮಂತ್ರಿ ಕುಮಾರಸ್ವಾಮಿ ನಾಳೆ ದೊಡ್ಡಬಳ್ಳಾಪುರ ನಗರದಲ್ಲಿ ಚಾಲನೆ ನೀಡಲಿದ್ದಾರೆ.

        ಉಪ ಮಖ್ಯಮಂತ್ರಿ ಪರಮೇಶ್ವರ್ ಮತ್ತು ಸಂಪುಟದ ಸಚಿವರ ಉಪಸ್ಥಿತಿಯಲ್ಲಿ ಸುಮಾರು 64ಸಾವಿರ ಕೋಟಿ ರೈತರ ಸಾಲ ಮನ್ನಾ ಮಾಡುವ ಯೋಜನೆಗೆ ಇಲ್ಲಿನ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಚಾಲನೆ ನೀಡಲಿದ್ದಾರೆ.

       ದೊಡ್ಡಬಳ್ಳಾಪುರ ಮತ್ತು ಸೇಡಂ ತಾಲೂಕನ್ನು ಪ್ರಾಯೋಗಿಕವಾಗಿ ತೆಗೆದುಕೊಂಡಿದ್ದು,ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಹಕಾರ ಸಂಘಗಳಲ್ಲಿ ಸಾಲ ಪಡೆದಿದ್ದ ಸುಮಾರು 17,300 ರೈತರು ಈ ಯೋಜನೆಯ ಲಾಭ ಪಡೆಯಲ್ಲಿದ್ದಾರೆ.

       ವಾಣಿಜ್ಯ ಬ್ಯಾಂಕ್‍ನಲ್ಲಿಯೂ ಸಹ ಸಾಕಷ್ಟು ರೈತರು ಸಾಲ ಪಡೆದಿದ್ದಾರೆ. ರೈತರ ಸಾಲ ಮನ್ನಾ ಪ್ರಕ್ರಿಯೆಯ ಡಾಟಾ ಎಂಟ್ರಿ ಕೆಲಸ ಮುಗಿದಿದ್ದು, ಸಹಕಾರಿ ಸಂಘ ಮತ್ತು ವಾಣಿಜ್ಯ ಬ್ಯಾಂಕ್‍ನಲ್ಲಿರುವ ಸಾಲ ಮನ್ನಾ ಮಾಡಲಾಗುವುದು. ನಾಳೆ ನಡೆಯುವ ಬೃಹತ್ ಸಾರ್ವಜನಿಕ ಕಾರ್ಯಕ್ರಮದಲ್ಲಿ ಸಿಎಂ ಋಣಭಾರಮುಕ್ತ ಪತ್ರ ವಿತರಣೆ ಮಾಡಿಲಿದ್ದಾರೆ.

         ಈ ಮೂಲಕ ಸಮ್ಮಿಶ್ರ ಸರ್ಕಾರ ನುಡಿದಂತೆ ನಡೆದುಕೊಂಡಿದೆಯೆಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಸ್ತುವಾರಿ ಸಚಿವ ಕೃಷ್ಣಭೈರೇಗೌಡ ಹೇಳಿದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ