ಬಯಲು ಬಹಿರ್ದೆಸೆ ಮುಕ್ತ ರಾಜ್ಯ ಮಾಡುವಲ್ಲಿ ರಾಜ್ಯ ಸರ್ಕಾರ ನೂರಕ್ಕೆ ನೂರರಷ್ಟು ಗುರಿ ತಲುಪಿದೆ: ಸಿಎಂ

ಬೆಂಗಳೂರು

         ರಾಜ್ಯದ ಗ್ರಾಮೀಣ ಪ್ರದೇಶವನ್ನು ಬಯಲು ಬಹಿರ್ದೆಸೆ ಮುಕ್ತ ರಾಜ್ಯವನ್ನಾಗಿ ಮಾಡುವಲ್ಲಿ ರಾಜ್ಯ ಸರ್ಕಾರ ನೂರಕ್ಕೆ ನೂರರಷ್ಟು ಗುರಿ ತಲುಪಿದೆ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

         ಬೆಂಗಳೂರಿನಲ್ಲಿಂದು ವಿಶ್ವ ಶೌಚಾಲಯ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಳೆದ 2012-13ನೇ ಸಾಲಿನಲ್ಲಿ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ. ರಾಜ್ಯದಲ್ಲಿ 70 ಲಕ್ಷ ಕುಟುಂಬಗಳಿಗೆ ಶೌಚಾಲಯ ಕಲ್ಪಿಸಿಕೊಡುವ ಗುರಿ ಹಾಕಿಕೊಳ್ಳಲಾಗಿತ್ತು. ಆದರೆ ಈ ಮೊದಲೇ 24 ಲಕ್ಷ ಕುಟುಂಬಗಳಲ್ಲಿ ಶೌಚಾಲಯವಿತ್ತು ಎಂದು ಅವರು ವಿವರಿಸಿದರು.

          ಉಳಿದಂತೆ 41 ಲಕ್ಷ ಕುಟುಂಬಗಳಿಗೆ ಆದ್ಯತೆಯ ಮೇಲೆ ಶೌಚಾಲಯ ನಿರ್ಮಿಸಿಕೊಡುವ ಕೆಲಸವನ್ನು ಸರ್ಕಾರ ಮಾಡಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

         ನಗರ ಮತ್ತು ಗ್ರಾಮೀಣ ಭಾಗಕ್ಕೆ ಮೂಲಸೌಕರ್ಯ ಒದಗಿಸಿಕೊಡಲು ಸರ್ಕಾರ ಬದ್ಧವಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಶೌಚಾಲಯ ಸಮಸ್ಯೆಯನ್ನು ನಿವಾರಿಸಲು ಮತ್ತು ಆ ಭಾಗದ ಜನರಿಗೆ ನೀರಿನ ಸೌಕರ್ಯ ಕಲ್ಪಿಸಲು ಸರ್ಕಾರ ‘ಜಲಧಾರೆ’ ಎಂಬ ವಿಶೇಷ ಯೋಜನೆಯನ್ನು ಹಮ್ಮಿಕೊಂಡಿದ್ದು, ಇದಕ್ಕಾಗಿ 60 ಸಾವಿರ ಕೋಟಿ ರೂಪಾಯಿ ವಿನಿಯೋಗ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

         ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಸಚಿವ ಕೃಷ್ಣ ಬೈರೆಗೌಡ ಮಾತನಾಡಿ, ರಾಜ್ಯದಲ್ಲಿ 5 ತಿಂಗಳ ಅವಧಿಯಲ್ಲಿ 7 ಲಕ್ಷ ಶೌಚಾಲಲಯ ನಿರ್ಮಿಸಲಾಗಿದೆ. 4ವರ್ಷಗಳಲ್ಲಿ 44 ಲಕ್ಷ ಶೌಚಾಲಯ ನಿರ್ಮಿಸಿರುವುದು ರಾಜ್ಯದ ಹೆಗ್ಗಳಿಕೆ ಎಂದರು.

         ಕೇಂದ್ರ ಸರ್ಕಾರದ ವರದಿಯಂತೆ ರಾಜ್ಯ ಶೌಚಲಯ ನಿರ್ಮಾಣದಲ್ಲಿ ಮೂರನೇ ಸ್ಥಾನದಲ್ಲಿದೆ. ಇತ್ತೀಚೆಗೆ ಶೌಚಾಲಯ ನಿಮಾರ್ಣದಲ್ಲಿ ಸರ್ಕಾರ ಗಣನೀಯ ಸಾಧನೆ ಮಾಡಿದೆ ಎಂದರು.ಕಾರ್ಯಕ್ರಮದಲ್ಲಿ ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಸಚಿವ ಜಮೀರ್ ಅಹಮ್ಮದ್ ಖಾನ್ ಮತ್ತಿತರರು ಉಪಸ್ಥಿತರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ 

 

 

Recent Articles

spot_img

Related Stories

Share via
Copy link
Powered by Social Snap