ಪೈಪೋಟಿ ಹೆಚ್ಚಿದಂತೆ ಪರೀಕ್ಷಾ ಪದ್ದತಿಯಲ್ಲಿ ಬದಲಾವಣೆ ಅಗತ್ಯ:ಡಾ. ಲಿಂಗೇಗೌಡ

ಬೆಂಗಳೂರು

    ಶೈಕ್ಷಣಿಕ ಪದ್ದತಿಯಲ್ಲಿ ಆಗುತ್ತಿರುವ ಬದಲಾವಣೆಗಳಿಗೆ ಅನುಗುಣವಾಗಿ ಪರಿಶ್ರಮಪಟ್ಟು ಪರೀಕ್ಷೆಗಳಲ್ಲಿ ಉತ್ತಮ ಅಂಕಗಳನ್ನು ಗಳಿಸಿ ಸಾಧನೆ ಮಾಡಬೇಕು ಎಂದು ರಾಜೀವಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಸಚಿವ (ಮೌಲ್ಯಮಾಪನ) ಡಾ. ಲಿಂಗೇಗೌಡ ಅವರು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

     ಶೈಕ್ಷಣಿಕ ಕ್ಷೇತ್ರದಲ್ಲಿ ಪೈಪೋಟಿ ಹೆಚ್ಚಿದಂತೆ ಪ್ರಶ್ನೆಪತ್ರಿಕೆಗಳು ಪರೀಕ್ಷಾ ಪದ್ದತಿಯಲ್ಲಿ ಬದಲಾವಣೆ ಮಾಡಬೇಕಿದೆ ಸುಲಭದಲ್ಲಿ ಪರೀಕ್ಷೆ ಬರೆದು ಉತ್ತಮ ಅಂಕಗಳನ್ನು ಗಳಿಸುವುದು ಸಾಧ್ಯವಾಗುವುದಿಲ್ಲ ಎನ್ನುವುದನ್ನು ಅರ್ಥಮಾಡಿಕೊಂಡು ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ತಯಾರಿ ನಡೆಸಬೇಕು ಎಂದರು.

     ಯಲಹಂಕದ ಆದಿತ್ಯ ಬೆಂಗಳೂರು ಇನ್ಸ್ಟಿಟ್ಯೂಟ್ ಆಫ್ ಫಾರ್ಮಸಿ ಎಜುಕೇಷನ್ ಅಂಡ್ ರಿಸರ್ಚ್ ಸಂಸ್ಥೆಯಲ್ಲಿ ನಡೆದ 5ನೇ ಫಾರ್ಮ ಬಿ ಕೋರ್ಸ್ ಹಾಗೂ 4ನೇ ಬಿ ಫಾರ್ಮ ಕೋರ್ಸ್‍ನ ಪದವಿ ಪ್ರದಾನ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಅವರು ಪರೀಕ್ಷೆಗಳನ್ನು ಬರೆಯಲು ಸಿದ್ದತೆ ನಡೆಸುವಾಗ ನಿರ್ಲಕ್ಷ್ಯ ಬದಿಗಿಟ್ಟು ಶ್ರಧ್ದೆ ಪರಿಶ್ರಮ ಪಡಬೇಕು ಎಂದರು.

     ಪರೀಕ್ಷೆಯ ಸಂಬಂಧ ರಾಜೀವಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ ಹಲವು ಕಾರ್ಯಕ್ರಮಗಳನ್ನು ರೂಪಿಸಲಾಗಿದ್ದು ವಿದ್ಯಾರ್ಥಿಗಳು ಅದರ ಅನುಕೂಲ ಪಡೆಯಬೇಕು ಎಂದು ಹೇಳಿದರು.

      ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಆದಿತ್ಯ ಗ್ರೂಪ್ ಆಫ್ ಇನ್ಸ್ಟಿಟ್ಯೂಟ್‍ನ ಅಧ್ಯಕ್ಷ ಡಾ.ಬಿ.ಎ.ವಿಶ್ವನಾಥ್ ಅವರು ಪರೀಕ್ಷೆಗಳಿಗೆ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಲು ಹಲವು ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ನುರಿತ ಉಪನ್ಯಾಸಕರು ಗುಣಮಟ್ಟದ ಶಿಕ್ಷಣ ನೀಡುತ್ತಿದ್ದಾರೆ ಎಂದರು.

        ಶೈಕ್ಷಣಿಕ ಪದ್ದತಿಯಲ್ಲಿ ಬದಲಾವಣೆಗೆ ತಕ್ಕಂತೆ ತಂತ್ರಜ್ಞಾನ ಬಳಸಿಕೊಂಡು ವಿದ್ಯಾರ್ಥಿಗಳು ಪರೀಕ್ಷೆಯ ಸವಾಲುಗಳನ್ನು ಸಮರ್ಥವಾಗಿ ಎದುರಿಸಬೇಕು ಪರಿಶ್ರಮಪಡುವ ವಿದ್ಯಾರ್ಥಿಗಳು ಉತ್ತಮ ಸಾಧನೆ ತೋರಬಹುದು ಎಂದು ಹೇಳಿದರು .ಇನ್ಸ್ಟಿಟ್ಯೂಟ್‍ನ ನಿರ್ದೇಶಕಿ ಡಾ. ಪ್ರಿಯಾ ವಿಶ್ವನಾಥ್ ಅವರು ಪಾಲ್ಗೊಂಡಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link