ಬೆಂಗಳೂರು
ರೋಗಕ್ಕೆ ಜಾತಿ-ಧರ್ಮಗಳಿಲ್ಲ. ಇದನ್ನು ಜಾತಿ-ಧರ್ಮದ ಪೂರ್ವಗ್ರಹಗಳಿಲ್ಲದೆಯೇ ಎದುರಿಸಬೇಕು. ಕೊರೊನಾ ವಿರುದ್ಧ ದೇಶ ಒಂದಾಗಿನಡೆಸುತ್ತಿರುವ ಹೋರಾಟಕ್ಕೆ ಕೆಲವರು ಜಾತಿ-ಧರ್ಮದ ಬಣ್ಣ ಹಚ್ಚಲು ಪ್ರಯತ್ನಿಸುತ್ತಿರುವುದು ಅಪಾಯಕಾರಿ ಬೆಳವಣಿಗೆ. ಈ ಸಂಕಷ್ಟದ ಗಳಿಗೆಯಲ್ಲಿ ಒಂದಾಗಿರೋಣ, ಎಚ್ಚರವಾಗಿರೋಣ ಎಂದು ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಆತ್ಮೀಯ ರೈತ ಬಾಂಧವರೇ ಸರ್ಕಾರದ ಆದೇಶದನ್ವಯ ಇಂದಿನಿಂದ ಬೆಳಿಗ್ಗೆ 9ರಿಂದ ಮಧ್ಯಾಹ್ನ 2ಗಂಟೆಯವರೆಗೆ ಕೃಷಿ ಇಲಾಖೆಯಿಂದ ಅಧೀಕೃತವಾಗಿ ಪರವಾನಗಿ ಪಡೆದ ಸಸ್ಯ ಸಂರಕ್ಷಣಾ ಔಷಧಿಗಳು ಮತ್ತು ರಸಗೊಬ್ಬರ ಹಾಗೂ ಬಿತ್ತನೆ ಬೀಜದ ಮಳಿಗೆಗಳು ಕಾರ್ಯ ನಿರ್ವಹಿಸಲಿವೆ. ರೈತ ಬಾಂಧವರು ಮೇಲ್ಕಂಡ ಸಮಯದಲ್ಲಿ ತಮ್ಮ ಕೃಷಿ ಚಟುವಟಿಕೆಗಳಿಗೆ ಅವಶ್ಯಕವಿರುವ ಪರಿಕರಗಳನ್ನು ಖರೀದಿ ಮಾಡಲು ಅವಕಾಶ ಕಲ್ಪಿಸಲಾಗಿದೆ. ಈ ಸಂದರ್ಭದಲ್ಲಿ ರೈತರು ಕಡ್ಡಾಯವಾಗಿ ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ಮುಖಕ್ಕೆ ಮಾಸ್ಕ್ ಧರಿಸಿಕೊಂಡು ಕೊರೋನಾ ವೈರಾಣುವಿನ ಸೋಂಕು ಹರಡದಂತೆ ಎಚ್ಚರ ವಹಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.
ಲಾಕ್‍ಡೌನ್ ಪರಿಣಾಮ ಬಾದಾಮಿಯಲ್ಲಿ ಆಹಾರ ಕೊರತೆ ಎದುರಾಗಿ, ಕ್ಷೇತ್ರದ ಜನರು ಹಸಿವಿನಿಂದ ಪರದಾಡುವ ಪರಿಸ್ಥಿತಿ ಎದುರಾಗ ಬಾರದೆಂದು ಮುಂಜಾಗ್ರತೆ ವಹಿಸಿ ಹಲವೆಡೆ ಆಹಾರ ಸಿದ್ಧಪಡಿಸಿ, ಅಗತ್ಯವಿರುವವರಿಗೆ ಪೂರೈಕೆ ಮಾಡುವ ಕೆಲಸ ಆರಂಭಿಸಲಾಗಿದೆ . ಈ ಸಂಬಂಧ ಸ್ಥಳೀಯ ಮುಖಂಡರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಮಾಹಿತಿ ಪಡೆಯುತ್ತಿದ್ದೇನೆ.ಆಹಾರ ತಯಾರಿಕೆ ಹಾಗೂ ವಿತರಣೆ ವೇಳೆ ಗುಂಪುಗೂಡಿ ಕೆಲಸ ಮಾಡದೆ, ಸೂಕ್ತ ಅಂತರ ಕಾಯ್ದುಕೊಳ್ಳುವಂತೆ ನಮ್ಮ ಮುಖಂಡರಿಗೆ, ಕಾರ್ಯಕರ್ತರಿಗೆ ಸೂಚನೆ ನೀಡಿದ್ದೇನೆ. ಹಸಿದವರಿಗೆ ಅನ್ನ ನೀಡುವುದು ಎಷ್ಟು ಮುಖ್ಯವೋ, ರೋಗ ಹರಡದಂತೆ ಎಚ್ಚರಿಕೆಯಿಂದ ಕೆಲಸ ಮಾಡುವುದು ಅಷ್ಟೇ ಮುಖ್ಯ. ಜನ ಸೇವೆ ಮತ್ತು ಕೊರೊನಾ ಬಗ್ಗೆ ಜಾಗೃತಿ ಎರಡನ್ನು ಮಾಡಬೇಕಾಗಿದೆ.
ಅಡುಗೆ ತಯಾರಿ ಹಾಗೂ ವಿತರಣೆ ವೇಳೆ ಮುನ್ನೆಚ್ಚರಿಕೆಯಿಂದ ಸೂಕ್ತ ಅಂತರ ಕಾಯ್ದುಕೊಳ್ಳುವಂತೆ ನಮ್ಮ ಮುಖಂಡರಿಗೆ, ಕಾರ್ಯಕರ್ತರಿಗೆ ಸೂಚನೆ ನೀಡಿದ್ದೇನೆ. ಹಸಿದವರಿಗೆ ಅನ್ನ ನೀಡುವುದು ಎಷ್ಟು ಮುಖ್ಯವೋ, ರೋಗ ಹರಡದಂತೆ ಎಚ್ಚರಿಕೆಯಿಂದ ಕೆಲಸ ಮಾಡುವುದು ಅಷ್ಟೇ ಮುಖ್ಯ. ಜನಸೇವೆ ಮತ್ತು ಕೊರೊನಾ ಬಗ್ಗೆ ಜಾಗೃತಿ ಎರಡನ್ನು ಮರೆಯದಿರೋಣ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
