ಬೆಂಗಳೂರು ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಕೆಪಿಸಿಸಿ ಕಚೇರಿಯಿಂದ ಫ್ರೀಡಂಪಾರ್ಕ್ವರೆಗೆ ಸದ್ಭಾವನಾ ಪಾದಯಾತ್ರೆ ನಡೆಸಿದರು.
135ನೇ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ ಕೇವಲ ರಾಜಧಾನಿ ಮಾತ್ರವಲ್ಲದೇ ಜಿಲ್ಲಾ ಕಾಂಗ್ರೆಸ್ ಘಟಕಗಳ ವತಿಯಿಂದ ನಡೆಯಲಿದೆ.ಕಾಂಗ್ರೆಸ್ ನಾಯಕರಾದ ಡಿ.ಕೆ ಶಿವಕುಮಾರ್, ದಿನೇಶ್ ಗುಂಡೂರಾವ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ವೀರಪ್ಪ ಮೊಯ್ಲಿ ಸೇರಿ ನೂರಾರು ಕಾರ್ಯಕರ್ತರು ಸದ್ಬಾವನಾ ನಡಿಗೆಯಲ್ಲಿ ಭಾಗಿಯಾಗಿದ್ದರು.ಸದ್ಭಾವನ ನಡಿಗೆ ಹಿನ್ನೆಲೆ ಕ್ವೀನ್ಸ್ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಆಗಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ.
ಇನ್ನು ಈ ವೇಳೆ ಮಾತನಾಡಿದ ಡಿಕೆ ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ ಪಟ್ಟಕ್ಕಾಗಿ ಈ ಪಾದಯಾತ್ರೆ ಮಾಡುತ್ತಿಲ್ಲ. ದೇಶದಲ್ಲಿ ಸಂವಿಧಾನ ಉಳಿಸಬೇಕು. ಈ ನಿಟ್ಟಿನಲ್ಲಿ ನಾವೆಲ್ಲರೂ ಕೆಲಸ ಮಾಡುತ್ತಿದ್ದೇವೆ. ಅದಕ್ಕಾಗಿ ಪಾದಯಾತ್ರೆ ಮಾಡುತ್ತಿದ್ದೇನೆ ಎಂದು ಸ್ಪಷ್ಟಪಡಿಸಿದರು. ಇನ್ನು ಈ ವೇಳೆ ವಿವಾದ ಸೃಷ್ಟಿಸಿದ ಏಸು ಪ್ರತಿಮೆಗೆ ಭೂಮಿ ನೀಡಿದ್ದ ಬಗ್ಗೆ ವರದಿಗಾರರು ಕೇಳಿದ ಪ್ರಶ್ನೆಗೆ ಪ್ರಶ್ನೆಗೆ ಅವರು ಉತ್ತರಿಸಲು ನಿರಾಕರಿಸಿ, ಬೇರೆ ಸಮಯದಲ್ಲಿ ಉತ್ತರ ಕೊಡುವುದಾಗಿ ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
