ಜ.11 ,12ಕ್ಕೆ ಹಂಪಿ ಉತ್ಸವ : ಲಕ್ಷ್ಮಣ್ ಸವದಿ

ಬಳ್ಳಾರಿ

    ವಿಶ್ವವಿದ್ಯಾಲಯದ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಉತ್ತಮ ವಸತಿನಿಲಯ ವ್ಯವಸ್ಥೆ ಮಾಡಲಾಗಿದೆ ಹಾಗೂ ವಿವಿ ಅಭಿವೃದ್ಧಿಗೆ ಮತ್ತಷ್ಟು ಹಣ ಬಿಡುಗಡೆ ಮತ್ತು ವಿಶ್ವ ಪ್ರಸಿದ್ದ ಹಂಪಿ ಉತ್ಸವವನ್ನು ಬರುವ ಜನವರಿ 11,12ಕ್ಕೆ ನಡೆಸಲು  ಉದ್ದೇಶಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಹೇಳಿದರು.ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಆವರಣದಲ್ಲಿ ಮಂಗಳವಾರದಂದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳ ವಸತಿ ನಿಲಯದ ನೂತನ ಕಟ್ಟಡಗಳ ಉದ್ಘಾಟನೆ ಮಾಡಿ ಮಾತನಾಡಿದರು.

    ಜಿಲ್ಲೆಯ ಕಾಮಗಾರಿಗಳ ಬಗ್ಗೆ ಮಾತನಾಡಿ, ಜಿಲ್ಲೆಯ ಸಂಪೂರ್ಣ ಅಭಿವೃದ್ಧಿ ಬಗ್ಗೆ ಅವಲೋಕನ ಮಾಡಿ ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು. ಹಾಗೂ ಜಿಲ್ಲೆಯ ವಿಭಜನೆಯ ಕುರಿತು ಮಾತನಾಡಿ ಅದೊಂದು ರಾಜಕೀಯ ವಿಷಯ ಈ ವಿಷಯವನ್ನು ಸಧ್ಯಕ್ಕೆ ಮುಂದೂಡಲಾಗಿದೆ ಮುಂದಿನ ವಿಧಾನ ಸಭಾ ಉಪಚುನಾವಣೆ ಮುಗಿದ ನಂತರ ಜಿಲ್ಲೆಯ ಮುಖಂಡರೊಂದಿಗೆ ಸುಧೀರ್ಘವಾಗಿ ಚರ್ಚೆ ನಡೆಸಲಾಗುವುದು ಎಂದರು, ಮತ್ತು ವಿಧಾನಸಭಾ ಉಪಚುನಾವಣೆ ಇರುವುದರಿಂದ ಈಗಾಗಲೇ ನೀತಿ ಸಂಹಿತೆ ಜಾರಿಯಾಗಿದೆ ಹಾಗಾಗಿ ಹಂಪಿ ಉತ್ಸವವನ್ನು ಸರಳವಾಗಿ ಆಚರಿಸಲಾಗುವುದು ಎಂದು ಹೇಳಿದರು.

     ಕಾರ್ಯಕ್ರಮದಲ್ಲಿ ಸಂಸದರಾದ ದೇವೇಂದ್ರಪ್ಪ, ಕರಡಿ ಸಂಗಣ್ಣ, ನಗರ ಶಾಸಕರಾದ ಸೋಮಶೇಖರ ರೆಡ್ಡಿ, ಗ್ರಾಮೀಣ ಶಾಸಕ ನಾಗೇಂದ್ರ, ಹರಪ್ಪನಹಳ್ಳಿ ಶಾಸಕಾರದ ಕರುಣಾಕರ ರೆಡ್ಡಿ, ಮಾಜಿ ಸಚಿವರು ಅಲ್ಲಂ ವೀರಭದ್ರಪ್ಪ, ಜಿಲ್ಲಾ ಪಂಚಾಯತ್ ಅಧ್ಯಕ್ಷರು ಭಾರತಿ ತಿಮ್ಮಾರೆಡ್ಡಿ, ತಾಲೂಕು ಪಂಚಾಯತ್ ಅಧ್ಯಕ್ಷರು ರಮೀಜಾ ಬೀ, ಜಿಲ್ಲಾಧಿಕಾರಿ ಎಸ್ ಎಸ್ ನಕುಲ್, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನಿತೀಶ್ ಕೆ, ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಸಿದ್ಧು ಪಿ ಅಲಗೂರು, ಕುಲಸಚಿವರು ಪ್ರೊ. ಬಿ. ಕೆ. ತುಳಸಿಮಾಲ, ಮೌಲ್ಯಮಾಪನ ಕುಲಸಚಿವರಾದ ಪ್ರೋ. ಕೆ ರಮೇಶ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಎನ್. ರಾಜಪ್ಪ ಉಪಸ್ಥಿತರಿದ್ದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ  

Recent Articles

spot_img

Related Stories

Share via
Copy link