ಬೆಂಗಳೂರು
ತಮ್ಮ ಕುಟುಂಬ ರಾಜಕೀಯದಲ್ಲಿ ಹೋರಾಟ ಮಾಡಿಕೊಂಡೇ ಬಂದಿದ್ದೇವೆ. ನಿಖಿಲ್ ಚುನಾವಣೆಗೆ ಸ್ಪರ್ಧಿಸುತ್ತೇನೆಂದರೆ ಖಂಡಿತ ಟಿಕೆಟ್ ನೀಡುತ್ತೇವೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ತಿಳಿಸಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮದು ರಾಜಕೀಯವಾಗಿ ಹೋರಾಟ ಮಾಡಿಕೊಂಡು ಬೆಳೆದ ಬಂದ ಪರಿವಾರವಾಗಿದೆ. ನಿಖಿಲ್ ಇನ್ನು ಚಿತ್ರ್ಯೋದ್ಯಮದಲ್ಲಿ ಬೆಳೆಯುತ್ತಿರುವ ಯುವಕ, ಚಿತ್ರರಂಗದಲ್ಲಿ ಈಗತಾನೆ ಗುರುತಿಸಿಕೊಳ್ಳುತ್ತಿದ್ದು, ಆತನನ್ನು ರಾಜಕೀಯಕ್ಕಾಗಿ ಅಪಪ್ರಚಾರಕ್ಕೆ ಎಳೆದು ತರುತ್ತಿರುವುದು ಸರಿಯಲ್ಲ ಎಂದು ಕುಮಾರಸ್ವಾಮಿ ಬೇಸರ ವ್ಯೆಕ್ತಪಡಿಸಿದರು.
ನಿಖಿಲ್ ಕುಮಾರಸ್ವಾಮಿ ಬಹುನಿರೀಕ್ಷೆಯ ಚಿತ್ರ ‘ಸೀತಾರಾಮ ಕಲ್ಯಾಣ’ ಚಲನಚಿತ್ರದ ಟಿಕೆಟ್ ಗಳನ್ನು ಮಂಡ್ಯ ಜಿಲ್ಲೆಯಾದ್ಯಂತ ಮನೆ ಮೆನೆಗೆ ಉಚಿತವಾಗಿ ಹಂಚಲಾಗುತ್ತಿದೆ. ಚಿತ್ರಮಂದಿರ ಭರ್ತಿಯಾಗಿಲ್ಲದ ಕಾರಣ ಟಿಕೆಟ್ ಗಳನ್ನು ಉಚಿತವಾಗಿ ಹಂಚಿಕೆ ಮಾಡಲಾಗುತ್ತಿದೆ ಎಂಬ ಆರೋಪವನ್ನು ನಿರಾಕರಿಸಿದ ಕುಮಾರಸ್ವಾಮಿ, ನಿಖಿಲ್ ಅವರನ್ನು ಮಂಡ್ಯ ಲೋಕಸಭಾ ಅಭ್ಯರ್ಥಿಯಾಗಿ ಕಣಕ್ಕಿಳಿಸುವ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಕೆಲ ರಾಜಕೀಯ ವಿರೋಧಿಗಳು ಉದ್ದೇಶಪೂರ್ವಕವಾಗಿ ಸುಳ್ಳು ಮಾಹಿತಿಗಳನ್ನು ಹರಿಯಬಿಡುವ ಕೆಲಸ ಮಾಡುತ್ತಿದ್ದಾರೆ ಎಂದರು.
