ಬೆಳಗಾವಿ
ಪಾಕಿಸ್ತಾನದ ಉಗ್ರರ ತರಬೇತಿ ಶಾಲೆಯ ಮೇಲೆ ವಾಯುಸೇನೆ ನಡೆಸಿರುವ ದಾಳಿ ಬಗ್ಗೆ ಕೇಂದ್ರ ಸರ್ಕಾರ ದೇಶದ ಜನರಿಗೆ ಮನದಟ್ಟು ಮಾಡಿಕೊಡಬೇಕು ಎಂದು ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ಆಗ್ರಹಿಸಿದರು.
ತಿಲಕವಾಡಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಕೈಗೊಳ್ಳಲಾದ ಸ್ಮಾರ್ಟ್ ಗಾರ್ಡನ್ ಉದ್ಘಾಟಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಏರ್ ಸ್ಟೈಕ್ ಬಗ್ಗೆ ರಾಜಕೀಯವಾಗಿ ನಡೆಯುತ್ತಿರುವ ಚರ್ಚೆಗೆ ಆಸ್ಪದ ಕೊಡಬಾರದು. ಏರ್ ಸ್ಟ್ರೈಕ್ ಕುರಿತ ಗೊಂದಲದ ಬಗ್ಗೆ ಕೇಂದ್ರ ಸರ್ಕಾರ ದೇಶದ ಜನತೆಗೆ ಮನದಟ್ಟು ಮಾಡಿಕೊಡಬೇಕು. ದೇಶದ ಏಕತೆ, ಅಖಂಡತೆ ವಿಚಾರದಲ್ಲಿ ರಾಜಕೀಯ ಮಾಡಬಾರದು. ಭಾರತೀಯರೆಲ್ಲರೂ ಒಂದೇ ಎಂಬ ಸಂದೇಶ ವಿಶ್ವಕ್ಕೆ ಸಾರಬೇಕಾದ ಅಗತ್ಯತೆ ಇದೆ ಎಂದರು.
ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಸಂಬಂಧ ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ ಮೈತ್ರಿ ಸರ್ಕಾರ ಇದೆ. ಈ ಬಗ್ಗೆ ಉಭಯ ಪಕ್ಷದ ನಾಯಕರು ಚರ್ಚೆ ನಡೆಸುತ್ತಾರೆ. ಎರಡೂ ಪಕ್ಷಗಳ ನಾಯಕರು ಒಮ್ಮತದ ಅಭ್ಯರ್ಥಿ ಆಯ್ಕೆ ಮಾಡಲಿದ್ದು, ನಮ್ಮಲ್ಲಿ ಯಾವುದೇ ಗೊಂದಲಗಳಿಲ್ಲ ಎಂದರು.
ಪಾಕಿಸ್ತಾನ ಪರ ಘೋಷಣೆ ಹೆಚ್ಚುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಇಂಥ ಸನ್ನಿವೇಶವನ್ನು ನಾನು ಖಂಡಿಸುತ್ತೇನೆ. ಪ್ರತಿಯೊಬ್ಬರೂ ಖಂಡಿಸಬೇಕು. ದೇಶದ್ರೋಹಿ ಘೋಷಣೆ ಸಮಾಜ ಹಾಗೂ ದೇಶಕ್ಕೆ ಮಾರಕವಾಗಿವೆ. ರಾಜಕೀಯ ಉದ್ದೇಶಕ್ಕೆ ನಡೆಯುತ್ತಿರುವ ದೇಶದ್ರೋಹಿ ಘೋಷಣೆ ನಿಯಂತ್ರಣಕ್ಕೆ ಬರಬೇಕು. ನಾವೆಲ್ಲರೂ ಭಾರತೀಯರು ಎಂಬ ಭಾವನೆ ಪ್ರತಿಯೊಬ್ಬರಲ್ಲಿ ಮೂಡಬೇಕು ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ