ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲಾ : ಡಿ ಕೆ ಶಿವಕುಮಾರ್

ಬೆಂಗಳೂರು

     ರೈತರು ಬಡವರು ಯಾರಿಂದಲೂ ಪಡಿತರ ಚೀಟಿ ವಾಪಸ್ ಪಡೆಯಲು ಅವಕಾಶ ನೀಡುವುದಿಲ್ಲ. ಪಡಿತರ ಚೀಟಿ ವಾಪಸ್ ಪಡೆದರೆ ರೈತರ ಪರ ನಿಂತು ಹೋರಾಟ ಮಾಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.

      ಜೂನ್ 14ರಂದು ನಿಗದಿಯಾಗಿರುವ ತಮ್ಮ ಪದಗ್ರಹಣ ನಿಮಿತ್ತ ಪ್ರತಿಜ್ಞಾ ವಿಧಿ ಕಾರ್ಯಕ್ರಮದ ಪೂರ್ವ ತಯಾರಿ ಅಂಗವಾಗಿ ಭಾನುವಾರ ಕೆಪಿಸಿಸಿ ಕಚೇರಿಯಲ್ಲಿ ಬ್ಲಾಕ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರುಗಳ ಜತೆ ವಿಡಿಯೋ ಕಾನ್ಫರೆನ್ಸ್ ಸಭೆ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಎರಡು ಎಕರೆ ಜಮೀನು ಇರುವವರು ಕೂಡ ಟ್ರ್ಯಾಕ್ಟರ್ ಇಟ್ಟುಕೊಂಡಿರುತ್ತಾರೆ. ಅವರನ್ನು ದೊಡ್ಡ ರೈತ ಎಂದು ಪರಿಗಣಿಸಲು ಸಾಧ್ಯವಿಲ್ಲ. ರೈತರು ಬಡವರಾಗಿದ್ದು, ಅವರಿಂದ ಪಡಿತರ ಚೀಟಿ ವಾಪಸ್ ಪಡೆಯುವುದು ಸಲ್ಲದು ಎಂದರು.

      ದೇಶದಲ್ಲಿ ಆಹಾರ ಭದ್ರತೆ ಕಾನೂನು ಇದೆ. ಈಗ ಪಡಿತರ ಚೀಟಿ ಹೊಂದಿರುವ ರೈತರಿಗೆ ಅನ್ನಭಾಗ್ಯ ಯೋಜನೆ ಮೂಲಕ ಅಕ್ಕಿ ವಿತರಿಸಬೇಕು. ಕಾರ್ಡ್ ಹೊಂದಿರುವವರ ರೈತರ ಪರ ನಿಂತು ಅವರ ಹಿತ ರಕ್ಷಣೆ ಮಾಡುವ ಕೆಲಸ ನಾವು ಮಾಡುತ್ತೇವೆ ಎಂದು ಹೇಳಿದರು.
ಕೋವಿಡ್ 19 ಸೋಂಕು ನಿಯಂತ್ರಣ ವಿಚಾರದಲ್ಲಿ ಸರ್ಕಾರ ಪ್ರಕಟಿಸಿರುವ ಪ್ಯಾಕೇಜ್ ಕೇವಲ ಘೋಷಣೆಯಾಗಿದ್ದು, ಯಾವುದೇ ರೈತ, ಕಾರ್ಮಿಕರಿಗೆ ತಲುಪಿಲ್ಲ. ಹೀಗಾಗಿ ನಮ್ಮ ಕಾರ್ಯಕರ್ತರು ತಮ್ಮ ಹಳ್ಳಿ ಸುತ್ತಮುತ್ತಲಿನಲ್ಲಿರುವ ರೈತರು, ಕಾರ್ಮಿಕರಿಗೆ ಆನ್‍ಲೈನ್‍ನಲ್ಲಿ ಪರಿಹಾರಕ್ಕೆ ಅರ್ಜಿ ಸಲ್ಲಿಸಲು ನೆರವಾಗುವಂತೆ ಸೂಚಿಸಲಾಗಿದೆ ಎಂದು ಹೇಳಿದರು.

     ಇದೇ 14ರಂದು ಕೆಪಿಸಿಸಿ ಅಧ್ಯಕ್ಷರಾಗಿ ಪದಗ್ರಹಣ ಕಾರ್ಯಕ್ರಮ ಕಾರ್ಯಕ್ರಮ ನಡೆಸಲು ಅನುಮತಿ ನೀಡುವಂತೆ ಸರ್ಕಾರವನ್ನು ಕೋರಿದ್ದೇವೆ. ಕೇವಲ 150 ಜನರನ್ನು ಮಾತ್ರ ಸೇರಿ ಕೆಪಿಸಿಸಿ ಕಚೇರಿಯಲ್ಲಿ ಪದಗ್ರಹಣ ಮಾಡಲಿದ್ದು, ಆನ್ ಲೈನ್ ಮೂಲಕ ಪ್ರತಿಜ್ಞಾ ಕಾರ್ಯಕ್ರಮ ನಡೆಸಲಾಗುತ್ತಿದೆ. ಹೀಗಾಗಿ ಯಾರೂ ಕೂಡ ಈ ಕಾರ್ಯಕ್ರಮಕ್ಕೆ ಬೇರೆ ಕಡೆಯಿಂದ ಬರುವುದು ಬೇಡ. ನಿಮ್ಮ ಪಂಚಾಯತ್ ಹಾಗೂ ವಾರ್ಡ್‍ಗಳಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಿ. ಈ ಕಾರ್ಯಕ್ರಮವನ್ನು ಎಲ್ಲ ಪಂಚಾಯಿತಿ, ವಾರ್ಡ್‍ಗಳಲ್ಲಿ ಸೇರಿ 7800 ಕಡೆಗಳಲ್ಲಿ ನಡೆಸಲಾಗುತ್ತದೆ ಎಂದರು.

     ಆನ್ ಲೈನ್ ಶಿಕ್ಷಣ ವ್ಯವಸ್ಥೆ ಆರಂಭಿಸುವ ಮುನ್ನ ರಾಜ್ಯ ಹಾಗೂ ಕೇಂದ್ರ ಸರ್ಕಾರ, ಹಳ್ಳಿ ಹಳ್ಳಿ ಗಳಲ್ಲಿ ಅಂತರ್ಜಾಲ ಹಾಗೂ ಕಂಪ್ಯೂಟರ್ ವ್ಯವಸ್ಥೆ ಕಲ್ಪಿಸಬೇಕು. ಮೊದಲು ಸವಲತ್ತು ನೀಡಿ ಆಮೇಲೆ ಆನ್ ಲೈನ್ ಶಿಕ್ಷಣ ನೀಡಲು ಮುಂದಾಗಬೇಕು ಎಂದರು.ಮೈಶುಗರ್ ಕಾರ್ಖಾನೆಗೂ ಮಂಡ್ಯ ಜನರಿಗೂ ಉತ್ತಮ ಬಾಂಧವ್ಯವಿದೆ. ಸರ್ಕಾರ ಕಾರ್ಖಾನೆ ನಡೆಸಲು ಆಗದಿದ್ದರೆ ಅದು ಸರ್ಕಾರದ ಅಸಮರ್ಥತೆಯನ್ನು ತೋರುತ್ತದೆ. ಕಾರ್ಖಾನೆಯನ್ನು ಸರ್ಕಾರ ನಡೆಸಬೇಕು. ಇರುವ ನ್ಯೂನ್ಯತೆ ಸರಿಪಡಿಸಲು ಅಗತ್ಯ ಕ್ರಮ ಕೈಗೊಳ್ಳಿ. ಅದನ್ನು ಬಿಟ್ಟು ಖಾಸಗಿ ವಲಯಕ್ಕೆ ಮಾರಲು ಅವಕಾಶ ನೀಡುವುದಿಲ್ಲ. ಈ ವಿಚಾರದಲ್ಲಿ ಮಂಡ್ಯ ರೈತರ ಪರ ಹೋರಾಟ ಮಾಡುತ್ತೇವೆ ಎಂದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap