ಬೆಂಗಳೂರು
ನಿಗಮ ಮಂಡಳಿ ಪಟ್ಟಿಯಿಂದ ಕೆಲ ಕಾಂಗ್ರೆಸ್ ಶಾಸಕರನ್ನುಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕೈಬಿಟ್ಟ ವಿಚಾರವನ್ನು ತಾವು ಬೀದಿ ರಂಪಾಟ ಮಾಡುವುದಕ್ಕೆ ಹೋಗುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್-ಕಾಂಗ್ರೆಸ್ ಎರಡೂ ಪಕ್ಷದವರು ಚರ್ಚಿಸಿದ ಬಳಿಕವೇ ನಿಗಮ ಪಟ್ಟಿಯನ್ನು ಅಂತಿಮಗೊಳಿಸಲಾಗಿತ್ತು. ಆದರೆ ಈಗ ಹೆಚ್.ಡಿ.ಕುಮಾರಸ್ವಾಮಿ ಶಾಸಕರ ನೇಮಕಕ್ಕೆ ತಡೆ ಏಕೆ ಒಡ್ಡಿದ್ದಾರೆ ಎನ್ನುವುದು ಗೊತ್ತಿಲ್ಲ ಎಂದರು.
ಸಮ್ಮಿಶ್ರ ಸರ್ಕಾರದ ಭಾಗವಾಗಿರುವ ಕಾಂಗ್ರೆಸ್ ಮೈತ್ರಿ ಧರ್ಮ ಪಾಲನೆಯನ್ನು ಮಾಡುತ್ತಿದ್ದು, ಎರಡೂ ಪಕ್ಷದವರು ಒಟ್ಟಿಗೆ ಲೋಕಸಭಾ ಚುನಾವಣೆಯನ್ನುಎದುರಿಸಬೇಕಾಗಿದೆ. 5 ವರ್ಷ ಜೆಡಿಎಸ್‍ಗೆ ಕಾಂಗ್ರೆಸ್ ಬೆಂಬಲ ಸೂಚಿಸಿದ್ದು, ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಸಂಪೂರ್ಣ ಬೆಂಬಲ ನೀಡಿದ್ದೇವೆ. ಪಟ್ಟಿ ಗೊಂದಲ ಬಗ್ಗೆ ಎರಡು ಪಕ್ಷದ ಹಿರಿಯ ನಾಯಕರು ಒಟ್ಟಿಗೆ ಕುಳಿತು ಚರ್ಚಿಸಿ, ಆಂತರಿಕವಾಗಿ ಸಮಸ್ಯೆ ಬಗೆಹರಿಸಿಕೊಳ್ಳುವುದಾಗಿ ದಿನೇಶ್ ಗುಂಡೂರಾವ್ ತಿಳಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








