ಪರಿಶ್ರಮದಿಂದ ಮಾತ್ರ ಸಾಧನೆ ಸಾಧ್ಯ

ಹೊನ್ನಾಳಿ:

      ನಿರ್ದಿಷ್ಟ ಗುರಿ, ಜ್ಞಾನ, ಕಠಿಣ ಪರಿಶ್ರಮದಿಂದ ಯಾವುದೇ ಸಾಧನೆ ಮಾಡಬಹುದು ಎಂದು ಭಾರತೀಯ ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ಡಾ.ಎಚ್.ಪಿ. ರಾಜ್‍ಕುಮಾರ್ ಹೇಳಿದರು.ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ಭಾರತೀಯ ವಿದ್ಯಾ ಸಂಸ್ಥೆಯ 31ನೇ ವಾರ್ಷಿಕ ಮಹಾಸಭೆಯಲ್ಲಿ ಅವರು ಮಾತನಾಡಿದರು.

      ತಾಲೂಕಿನಲ್ಲಿ ಪ್ರಥಮ ಬಾರಿಗೆ “ಕನ್ನಡ ಮಾಧ್ಯಮದಲ್ಲಿಯೇ ಪ್ರಾಥಮಿಕ ಶಿಕ್ಷಣ” ಎನ್ನುವ ಸಿದ್ಧಾಂತದಡಿ ಶಿಕ್ಷಣ ಸಂಸ್ಥೆಯನ್ನು ತೆರೆದು ಇಂದು ಗುಣಾತ್ಮಕ ಶಿಕ್ಷಣವನ್ನು ಮಕ್ಕಳಿಗೆ ನೀಡುವ ಮೂಲಕ ಶಿಕ್ಷಣ ಇಲಾಖೆಯಿಂದಲೇ ನಮ್ಮ ಸಂಸ್ಥೆ ಶ್ಲಾಘನೆಗೆ ಒಳಗಾಗಿದೆ ಎಂದು ತಿಳಿಸಿದರು.ಈ ಸಂಸ್ಥೆಯಲ್ಲಿ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೂ ಸಮಾನ ಅವಕಾಶ ನೀಡುವ ಮೂಲಕ ಹಾಗೂ ದೇಶದ ಸತ್ಪ್ರಜೆಗಳನ್ನಾಗಿ ಮಾಡುವ ಮೂಲಕ ಇಲ್ಲಿನ ವಿದ್ಯಾರ್ಥಿಗಳು ದೇಶದ ಯಾವುದೇ ಮೂಲೆಯಲ್ಲಿ ಬದುಕಬಲ್ಲ ಜೀವನ ಕೌಶಲ್ಯಗಳನ್ನು ಕೂಡ ಕಲಿಸಿಕೊಡಲಾಗುತ್ತಿದೆ ಎಂದರು.

       ಅನುದಾನಿತ ಸಂಸ್ಥೆಗಳ ಪ್ರಾಥಮಿಕ ತರಗತಿಗಳಲ್ಲಿ 360ರಷ್ಟು ಮಕ್ಕಳ ಸಂಖ್ಯೆಯನ್ನು ಹೊಂದುವ ಮೂಲಕ ನಮ್ಮ ಶಾಲೆ ದಾಖಲೆ ಸೃಷ್ಟಿಸಿದ್ದು, ಸಂಸ್ಥೆ ಅಧಿಕಾರ ವಿಕೇಂದ್ರೀಕರಣದ ಮೂಲಕ ವಿವಿಧ ಸಮಿತಿಗಳನ್ನು ರಚಿಸಿ ಮಕ್ಕಳ ಸರ್ವತೋಮುಖ ಅಭಿವೃದ್ಧಿಗಾಗಿ ಅವಿರತವಾಗಿ ಶ್ರಮಿಸಲಾಗುತ್ತಿದೆ ಎಂದು ವಿವರಿಸಿದರು.

      ಇದೇ ಸಂದರ್ಭದಲ್ಲಿ 2017-18ನೇ ಸಾಲಿನ ವಾರ್ಷಿಕ ವರದಿಯನ್ನು ಮಂಡಿಸಿದರು. ಶಾಲಾ ಮಕ್ಕಳು ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.

      ವರ್ತಕ ಎಲ್.ಎಸ್. ವೈಶ್ಯರ್ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಉಪಾಧ್ಯಕ್ಷ ಲಕ್ಷ್ಮಣ್‍ರಾವ್, ಸಹ ಕಾರ್ಯದರ್ಶಿ ಎಚ್. ಲಿಂಗಯ್ಯ, ಖಜಾಂಚಿ ಎಚ್.ಎನ್. ಬಸವರಾಜಪ್ಪ, ನಿರ್ದೇಶಕರಾದ ಎಚ್.ಎಂ. ಅರುಣ್‍ಕುಮಾರ್, ಹಾಲೇಶ್, ಗಣೇಶ್, ಶಾಲೆಯ ಮುಖ್ಯ ಶಿಕ್ಷಕರಾದ ಆರ್. ತಿಮ್ಮೇಶ್, ದೇವೀರಮ್ಮ, ಸಿಬ್ಬಂದಿ, ಸಂಸ್ಥೆಯ ವಿವಿಧ ಸಮಿತಿಗಳ ಸದಸ್ಯರು ಉಪಸ್ಥಿತರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link