ವಿಲೀನವಾಗುವುದೇ ಕೆ ಎಸ್ ಆರ್ ಟಿ ಸಿ ,ಸಹಕಾರ ಸಾರಿಗೆ…?

ಚಿಕ್ಕಮಗಳೂರು

       ಕಾಫಿ ನಾಡಿನ ಜನರ ಜೀವನಾಡಿ ಎಂದೇ ಕರೆಯಲ್ಪಡುವ ಕೊಪ್ಪದ ಸಹಕಾರ ಸಾರಿಗೆ ೆದುರಿಸುತ್ತಿರುವ ತೀವ್ರ ಆರ್ಥಿಕ ಸಂಕಷ್ಟದಿಂದ ಹೊರಬರಲು ಕೆ ಎಸ್ ಆರ್ ಟಿ ಸಿ ಜತೆಗೆ ವಿಲೀನಗೊಳಬಹುದು ಎಂದು ಸಾರಿಗೆ ಅಧಿಕಾರಿಗಳು ಮತ್ತು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.

    ಸಹಕಾರ ಸಾರಿಗೆ ಬಸ್‌ಗಳ ಮಾರ್ಗಗಳಲ್ಲಿ ಸಾರಿಗೆ ಬಸ್‌ಗಳು ಸಂಚರಿಸುತ್ತಿಲ್ಲ. ಅದನ್ನು ಕೆಎಸ್ಸಾರ್ಟಿಸಿ ಸುಪರ್ದಿಗೆ ವಹಿಸುವುದರಿಂದ ಸಾರಿಗೆ ಸೇವೆ ಉತ್ತಮಗೊಳ್ಳುವುದರ ಜತೆಗೆ ನಿಗಮಕ್ಕೂ ಲಾಭ ಬರುವುದು ಎಂಬ ವರದಿಗಳು ಕೇಳಿ ಬರುತ್ತಿವೆ. ಈ ಹಿನ್ನೆಲೆಯಲ್ಲಿ ಸರ್ಕಾರ ಚಿಂತನೆ ನಡೆಸುವ ಆವಶ್ಯಕತೆ ಇದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ .ಚಿಕ್ಕಮಗಳೂರು, ಶೃಂಗೇರಿ, ಕೊಪ್ಪ, ತೀರ್ಥಹಳ್ಳಿ, ಸುತ್ತಲಿನ ಮಾರ್ಗಗಳಲ್ಲಿ ಸಹಕಾರ ಸಾರಿಗೆ ನೂರಾರು ಟ್ರಿಪ್‌ಗಳನ್ನು ನಡೆಸುತ್ತದೆ. ನಿತ್ಯ 6-7 ಲಕ್ಷ ರೂ. ಆದಾಯ ಬರುತ್ತದೆ. ವಿಲೀನ ವಾದರೆ ಆ ಆದಾಯವೆಲ್ಲವೂ ಕೆಎಸ್ಸಾರ್ಟಿಸಿಗೆ ವರ್ಗಾವಣೆ ಆಗುವುದರಲ್ಲಿ ಎರಡು ಮಾತಿಲ್ಲ. ಕೊಪ್ಪದಲ್ಲಿ ನಿಗಮಕ್ಕೆ ಸೇರಿದ 5 ಎಕರೆ ಜಾಗವಿದ್ದು, ಅದನ್ನೇ ಘಟಕವಾಗಿಸಬಹುದು ಎಂದು ನಿಗಮದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಆರ್ಥಿಕ ಮುಗ್ಗಟ್ಟಿನಿಂದ ಸಹಕಾರ ಸಾರಿಗೆಯ ಬಸ್‌ಗಳೆಲ್ಲವೂ ಆರು ತಿಂಗಳಿನಿಂದ ಮೂಲೆ ಗುಂಪಾಗಿವೆ. ಅವುಗಳನ್ನು ದುರಸ್ತಿಪಡಿಸಿ, ಕೆಎಸ್ಸಾರ್ಟಿಸಿಯಿಂದ ಮರು ಕಾರ್ಯಾಚರಣೆಗೆ ಕ್ರಮ ಕೈಗೊಳ್ಳಬಹುದು.ಇಲ್ಲವೇ ಹರಾಜು ಹಾಕಿ, ಅದೇ ಹಣದಲ್ಲಿ ಸಾಲ ಮತ್ತಿತರ ಹೊರೆಯನ್ನು ನೀಗಿಸಬಹುದು. ಅನಂತರ ಆ ಮಾರ್ಗಗಳಲ್ಲಿ ಸರಕಾರಿ ಬಸ್‌ಗಳನ್ನು ರಸ್ತೆಗಿಳಿಸಬಹುದಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap