ಸಚಿವ ಸ್ಥಾನ ಆಕಾಂಕ್ಷಿಗಳಲ್ಲಿ ಹೆಚ್ಚಿದ ಗೊಂದಲ
ಬೆಂಗಳೂರು :
ಚುನಾವಣೆಯಲ್ಲಿ ಗೆದ್ದು ಬಂದ ನಂತರ ತಮಗೆ ಸಚಿವ ಸ್ಥಾನ ಆಗ ಸಿಗಬಹುದು ಈಗ ಸಿಗಬಹುದು ಎಂದು ಕಣ್ಣಿಗೆ ಎಣ್ಣೆ ಬಿಟ್ಟುಕೊಂಡು ಕಾಯುತ್ತಿದ್ದ ಸಚಿವ ಸ್ಥಾನಾಕಾಂಕ್ಷಿಗಳಿಗೆ ಯಡಿಯೂರಪ್ಪ ಮತ್ತೊಂದು ಶಾಕ್ ನೀಡಿದ್ದಾರೆ ಅದೇನೆಂದರೆ ಸಚಿವ ಸಂಪುಟ ವಿಸ್ತರಣೆ ಮತ್ತೊಮ್ಮೆ ಮುಂದೂಡಿಕೆಯಾಗುವ ಮುನ್ಸೂಚನೆ ನೀಡಿರುವುದು.
ಸದ್ಯ ವಿಧಾನಪರಿಷತ್ ನ 4 ಸ್ಥಾನಗಳು, ವಿಧಾನಸಭೆಯ 2 ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿರುವುದರಿಂದ ಚುನಾವಣೆ ನಂತರ ಸಚಿವ ಸಂಪುಟ ವಿಸ್ತರಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಯಡಿಯೂರಪ್ಪ ಅವರು ವಾರಾಂತ್ಯದಲ್ಲಿ ದೆಹಲಿಗೆ ಭೇಟಿ ನೀಡಿ ಸಚಿವ ಸಂಪುಟ ವಿಸ್ತರಣೆ ಸಂಬಂಧ ಹೈಕಮಾಂಡ್ ಒಪ್ಪಿಗೆ ಪಡೆದು ಕೊಂಡು ಬರಲಿದ್ದಾರೆ ಎನ್ನಲಾಗಿತ್ತು. ಆದರೆ ಇದೀಗ ಉಪಚುನಾವಣೆ ಘೋಷಣೆಯಾಗಿರುವುದರಿಂದ ಉಪಚುನಾವಣೆ ನಡೆದ ಬಳಿಕ ಸಚಿವ ಸಂಪುಟ ವಿಸ್ತರಣೆಗೆ ರಾಜ್ಯ ಬಿಜೆಪಿ ನಿರ್ಧರಿಸಿದೆ ಎಂದು ಹೇಳಲಾಗುತ್ತಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ