ಶಿಕ್ಷಕರ ಕುಂದು ಕೊರತೆ ನಿವಾರಿಸಲು ಸರ್ಕಾರದ ಜೊತೆ ಚರ್ಚೆ ನಡೆಸಲಾಗುವುದು : ಡಾ.ಎಲ್.ಹನುಮಂತಯ್ಯ

ಬೆಂಗಳೂರು

    ಗ್ರಾಮೀಣ ಭಾಗದ ಸರ್ಕಾರಿ ಶಾಲಾ ಶಿಕ್ಷಕರ ಕೊರತೆ ನಿವಾರಿಸಲು ರಾಜ್ಯ ಸರ್ಕಾರದ ಜೊತೆ ಚರ್ಚೆ ನಡೆಸಲಾಗುವುದು ಎಂದು ರಾಜ್ಯಸಭಾ ಸದಸ್ಯ ಡಾ.ಎಲ್.ಹನುಮಂತಯ್ಯ ಅವರು ತಿಳಿಸಿದರು.

     ಗ್ರಾಮೀಣ ಭಾಗದ ಶಾಲೆಗಳಲ್ಲಿ ಮೂಲ ಸೌಕರ್ಯ, ಶಿಕ್ಷಕರ ವರ್ಗಾವಣೆ ಸೇರಿದಂತೆ ಹಲವು ಸಮಸ್ಯೆಗಳಿವೆ ಅವುಗಳನ್ನು ಸರ್ಕಾರದ ಗಮನಕ್ಕೆ ತರಲಾಗುವುದು ಎಂದರು.

     ನಗರದ ಶಾಸಕ ಭವನದ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ಸಂಘಗಳ ಒಕ್ಕೂಟ ಹಾಗೂ ರಾಜ್ಯ ಸಂಘಗಳ ಒಕ್ಕೂಟ ಆಯೋಜಿಸಿದ್ದ, ಭಾರತದ ಪ್ರಪ್ರಥಮ ಮಹಿಳಾ ‘ಶಿಕ್ಷಕಿ ಸಾವಿತ್ರಿ ಬಾಯಿ ಫುಲೆ ಅವರ ಸಾಧನೆ ಹೆಜ್ಜೆಗಳು’ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಅವರು ಸರ್ಕಾರಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

     ಇದಕ್ಕೂ ಮೊದಲು ಕರ್ನಾಟಕ ರಾಜ್ಯ ಸರ್ಕಾರಿ ಶಿಕ್ಷಕರ ಸಂಘಗಳ ಒಕ್ಕೂಟದ ಅಧ್ಯಕ್ಷ ವಿ.ಟಿ.ವೆಂಕಟೇಶಯ್ಯ ಮಾತನಾಡಿ, ಸಾವಿತ್ರಿ ಬಾಯಿ ಫುಲೆ ಕುರಿತು ನಾವು ಎಲ್ಲರೂ ಓದಿಕೊಳ್ಳುವಂತೆ ಆಗಬೇಕು.ಹಿಂದಿ, ಸಂಸ್ಕೃತ ಭಾಷೆಯಲ್ಲಿದ್ದ ಫುಲೆ ಅವರ ವಿಚಾರಗಳನ್ನು ಕನ್ನಡಕ್ಕೆ ಅನುವಾದಿಸಲಾಗಿದೆ ಎಂದು ಹೇಳಿದರು.

      ರಾಜ್ಯ ವ್ಯಾಪ್ತಿಯಲ್ಲಿ 55 ಸಾವಿರ ಸರ್ಕಾರಿ ಶಾಲೆಗಳಿಗೆ ಸಾವಿತ್ರಿಬಾಯಿ ಫುಲೆ ಅವರ ಪುಸ್ತಕ ವಿತರಣೆಗೆ ಮುಂದಾಗಿದ್ದು, ಈ ನಿಟ್ಟಿನಲ್ಲಿ ಸರ್ಕಾರವು ಸಹಕಾರ ನೀಡಿ, ರಿಯಾಯಿತಿ ದರದಲ್ಲಿ ಖರೀದಿಸಲು ಮುಂದಾಗಿದೆ ಎಂದು ಅವರು ತಿಳಿಸಿದರು.ಐದಾರು ಮಕ್ಕಳು ಇದ್ದರೂ, ರಾಜ್ಯದಲ್ಲಿ ಉದ್ದೇಶ ಪೂರ್ವಕವಾಗಿ ಸರ್ಕಾರಿ ಶಾಲೆಗೆ ಬಾಗಿಲು ಜಡಿಯಲಾಗುತ್ತಿದೆ.ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳಿಗೆ ಮಾಹಿತಿ ನೀಡಿದರೂ, ಕ್ರಮ ಕೈಗೊಳ್ಳಲಾಗುತ್ತಿಲ್ಲ ಎಂದು ಆರೋಪಿಸಿದರು.

       ಗ್ರಾಮೀಣ ಭಾಗದಲ್ಲಿ ಶಿಕ್ಷಕರ ಸಮಸ್ಯೆ ಹೆಚ್ಚಿದೆ.ಏಕೈಕ ಶಿಕ್ಷಕ ಇರುವ ಶಾಲೆಗಳಲ್ಲಿ ನೀರಿನ, ಶೌಚಾಲಯ ಸಮಸ್ಯೆ ಇದೆ. ಇನ್ನೂ ಅಡುಗೆ ಸಿಬ್ಬಂದಿ ರಜೆ ಇದ್ದರೆ, ಶಿಕ್ಷಕರೇ ಹೊಣೆ ಆಗುತ್ತಾರೆ.ಹೀಗಾಗಿ, ಇಬ್ಬರು ಶಿಕ್ಷಕರು ಇರಲೇ ಬೇಕು ಎನ್ನುವ ಕಡ್ಡಾಯ ಕಾನೂನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.ಈ ಸಂದರ್ಭದಲ್ಲಿ ಲೇಖಕಿ ಸುಮಿತ್ರಾ ಎಂ. ದುರ್ಗಿ, ಲೀಲಾವತಿ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

 

Recent Articles

spot_img

Related Stories

Share via
Copy link