ಚಿತ್ರದುರ್ಗ
ಮಹಿಳೆಯರು ಮಾನಸಿಕವಾಗಿ ಹೆಚ್ಚು ಬಲಿಷ್ಠರು ಮತ್ತು ಪುರುಷರಿಗಿಂತಲೂ ಹೆಚ್ಚು ದೃಢತೆಯನ್ನು ಹೊಂದಿರುತ್ತಾರೆ. ಮಹಿಳೆಯರ ದೇಹ ಪ್ರಕೃತಿ ಯಾವುದೇ ಯೋಗಾಸನ ಮಾಡಲು ಚೆನ್ನಾಗಿ ಹೊಂದಿಕೊಳ್ಳುತ್ತದೆ ಇದು ದೇವರು ಮಹಿಳೆಯರಿಗಾಗಿ ನೀಡಿದ ವಿಶೇಷ ವರವೆಂದೇ ಹೇಳಬಹುದು” ಎಂದು ಯೋಗ ಗುರು ರವಿ ಕೆ.ಅಂಬೇಕರ್ ಹೇಳಿದರು.
ಅವರು ಇಂದು ಚಿತ್ರದುರ್ಗದ ಚಂದ್ರವಳ್ಳಿಯಲ್ಲಿ ಜಿಲ್ಲಾ ಮಹಿಳಾ ಪತಂಜಲಿ ಯೋಗ ಸಮಿತಿ ಹಾಗು ಪತಂಜಲಿ ಯೋಗ ಪ್ರಚಾರಕ ಪ್ರಕಲ್ಪ ಚಿತ್ರದುರ್ಗ ಇವರು ಇಲ್ಲಿನ ಮಹಿಳಾ ವಾಯು ವಿಹಾರಿಗಳ ಸಹಯೋಗದೊಂದಿಗೆ ಮಹಿಳೆಯರಿಗಾಗಿ ಏರ್ಪಡಿಸಿರುವ ಏಳು ದಿನಗಳ ಉಚಿತ ಯೋಗ ಪ್ರಾಣಾಯಾಮ ತರಬೇತಿ ಶಿಬಿರವನ್ನು ಗಿಡಕ್ಕೆ ನೀರೆರೆಯುವುದರೊಂದಿಗೆ ಉದ್ಘಾಟಿಸಿ ಮಾತನಾಡಿದರು.
ಮಹಿಳೆಯರು ತಮ್ಮ ಗುರಿಗಳನ್ನು ಸಾಧಿಸುವುದರಲ್ಲಿ ಹೆಚ್ಚು ಏಕಾಗ್ರತೆಯನ್ನು ಹೊಂದಿರುತ್ತಾರೆ. ಯಾವುದೇ ಕ್ಷೇತ್ರದಲ್ಲಿ ಯಾವ ಕೆಲಸವಾದರೂ ಸಾಧಿಸಲು ಸಾಧ್ಯವಾಗುವಂತಹ ಗುರಿಯನ್ನು ಹೊಂದಿ ಮತ್ತು ಅದಕ್ಕಾಗಿ ಶ್ರಮಿಸಿ. ತಮ್ಮ ಅಭ್ಯಾಸದಲ್ಲಿ ಸ್ಥಿರವಾಗಿರುತ್ತಾರೆ. ಮಹಿಳೆಯರು ನೀವು ನಿಮ್ಮ ಕುಟುಂಬದ ಸದಸ್ಯರ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿವಹಿಸುತ್ತೀರಿ ಹಾಗೆಯೇ ನೀವು ನಿಮ್ಮ ಆರೋಗ್ಯದ ಬಗ್ಗೆಯೂ ಕಾಳಜಿವಹಿಸಬೇಕು ಮನೆಯಲ್ಲಿ ನೀವು ಆರೋಗ್ಯದಿಂದಿದ್ದರೆ ನಿಮ್ಮ ಕುಟುಂಬವೂ ಚೆನ್ನಾಗಿರುತ್ತದೆ, ಅದಕ್ಕಾಗಿ ಯೋಗ, ಪ್ರಾಣಾಯಾಮ ಕಲಿಯಿರಿ ನಿಮ್ಮ ದಿನದ 24 ಗಂಟೆಗಳಲ್ಲಿ ನಿಮ್ಮ ಆರೋಗ್ಯಕ್ಕಾಗಿ ಒಂದು ಗಂಟೆ ಮೀಸಲಿಟ್ಟು ಪ್ರತಿದಿನ ಯೋಗಾಭ್ಯಾಸ ಮಾಡಿ ” ಎಂದು ಮಹಿಳೆಯರಿಗೆ ಕಿವಿ ಮಾತು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಜಿಲ್ಲಾ ಮಹಿಳಾ ಪತಂಜಲಿ ಯೋಗ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ರೇಣುಕಮ್ಮ ಮಾತನಾಡಿ “ಯೋಗಾಭ್ಯಾಸದಿಂದ ದೇಹ ಮತ್ತು ಮನಸ್ಸಿನ ಸ್ವಾಸ್ಥ್ಯ ಅಭಿವ್ರುದ್ದಿಯಗುವುದಾದರು ಇದು ನೀವು ತೆಗೆದುಕೊಳ್ಳಲೇಬೇಕಾದ ಔಷದಗಳಿಗೆ ಪರ್ಯಾಯವಲ್ಲ. ಯೋಗದ ಆಸನಗಳನ್ನು/ ಭಂಗಿಗಳನ್ನು ನುರಿತ ಜೀವನ ಕಲಾ ಯೋಗ ತರಬೇತಿದಾರರಿಂದ ಕಲಿತುಕೊಳ್ಳುವ ಅವಶ್ಯಕತೆಯಿದೆ. ಆರೋಗ್ಯ ತೊಂದರೆಗಳಿದ್ದಲ್ಲಿ, ವ್ಯೆದ್ಯರ ಸಲಹೆ ಪಡೆದ ನಂತರ, ಯೋಗ ತರಬೇತಿದಾರರ ನಿಗಾವಣೆಯಲ್ಲಿ ಅಭ್ಯಾಸ ಮಾಡಿ.” ಎಂದು ತಿಳಿಸಿದರು.
ಕಾರ್ಯಕ್ರಮಕ್ಕೂ ಮುನ್ನಾ ಯೋಗ ಶಿಕ್ಷಕಿ ಶ್ರೀಮತಿ ಲಲಿತ ಬೇದ್ರೆ ಶಿಬಿರಾರ್ಥಿಗಳಿಗೆ ಯೋಗಾಭ್ಯಾಸ ಮಾಡಿಸಿದರು. ಕಾರ್ಯಕ್ರಮದಲ್ಲಿ ಸಮಿತಿಯ ಕಾರ್ಯದರ್ಶಿಗಳಾದ ಎಲ್.ಎಸ್ ಬಸವರಾಜ್, ಪ್ರಸನ್ನ ಕುಮಾರ್, ಕಾರ್ಯಾಲಯ ಪ್ರಭಾರಿಗಳಾದ ರಾಮನರೇಶ್, ಕೃಷ್ಣಮೂರ್ತಿ ಭಾಗವಹಿಸಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
