ಹುಳಿಯಾರು
ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದ ರೈತ ಮಹಿಳೆಗೆ ಹಾವು ಕಡಿದ ಪರಿಣಾಮ ಸಾವನ್ನಪ್ಪಿರುವ ಘಟನೆ ಹುಳಿಯಾರು ಸಮೀಪದ ಕೆ.ಸಿ.ಪಾಳ್ಯದಲ್ಲಿ ಜರುಗಿದೆ.
ಹಾವು ಕಡಿತದಿಂದ ಸಾವನ್ನಪ್ಪಿರುವ ಮಹಿಳೆಯನ್ನು ಜಯಮ್ಮ (46) ಎಂದು ಗುರುತಿಸಿದ್ದು ಇವರು ಎಂದಿನಂತೆ ತಮ್ಮ ತಂದೆಯ ಜಮೀನಿನಲ್ಲಿ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದಾರೆ. ಆ ಸಂದರ್ಭದಲ್ಲಿ ಹಾವು ಕಡಿದಿದ್ದು ತಕ್ಷಣ ಅಸ್ವಸ್ಥರಾಗಿದ್ದಾರೆ.
ಸ್ಥಳೀಯರ ಸಹಕಾರದಿಂದ ಚಿಕ್ಕನಾಯಕನಹಳ್ಳಿ ಸರ್ಕಾರಿ ಆಸ್ಪತ್ರೆಗೆ ಕರೆತರಲಾಗಿತ್ತಾದರೂ ಅಲ್ಲಿನ ವೈದ್ಯರು ತುಮಕೂರು ಆಸ್ಪತ್ರೆಗೆ ರೆಫರ್ ಮಾಡಿದ್ದಾರೆ. ಹಾಗಾಗಿ ತುಮಕೂರು ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ.
ಹುಳಿಯಾರು ಆಸ್ಪತ್ರೆಯಲ್ಲಿ ಪ್ರಕರಣ ದಾಖಲಾಗಿದ್ದು ತುಮಕೂರು ಜಿಲ್ಲಾ ಆಸ್ಪತ್ರೆಯಲ್ಲಿ ಶವಪರೀಕ್ಷೆ ಮಾಡಲಾಗಿದೆ. ಮೃತರ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಸಲಾಯಿತು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
