ಟಾಟಾ ಸುಮೋ ಡಿಕ್ಕಿ ಹೊಡೆದು ಮಹಿಳೆ ಸಾವು..!!

ಬೆಂಗಳೂರು

       ವೇಗವಾಗಿ ಬಂದ ಟಾಟಾ ಸುಮೋ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ ಯಲಹಂಕ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಅಟ್ಟೂರು ಲೇಔಟ್‍ನ ಸರ್ವೀಸ್ ರಸ್ತೆಯಲ್ಲಿ ನಡೆದಿದೆ.ಮೃತಪಟ್ಟವರನ್ನು ಅಟ್ಟೂರು ಲೇಔಟ್‍ನ ಸಾವಿತ್ರಮ್ಮ (60)ಎಂದು ಗುರುತಿಸಲಾಗಿದೆ.ಮಂಗಳವಾರ ಬೆಳಿಗ್ಗೆ 8ರ ವೇಳೆ ಮನೆಯ ಮುಂದಿನ ಸರ್ವೀಸ್ ರಸ್ತೆಯನ್ನು ಸಾವಿತ್ರಮ್ಮ ಅವರು ದಾಟುತ್ತಿದ್ದಾಗ ವೇಗವಾಗಿ ಬಂದ ಟಾಟಾ ಸುಮೋ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದಾರೆ.

       ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಪ್ರಕರಣ ದಾಖಲಿಸಿರುವ ಯಲಹಂಕ ಸಂಚಾರ ಪೊಲೀಸರು, ಟಾಟಾ ಸುಮೋ ಚಾಲಕ ರಾಜಶೇಖರ್‍ನನ್ನು ಬಂಧಿಸಿ, ಮುಂದಿನ ತನಿಖೆ ಕೈಗೊಂಡಿದ್ದಾರೆ.ಯುವಕ ಸಾವುವೇಗವಾಗಿ ಹೋಗುತ್ತಿದ್ದ ಬೈಕ್ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಹಿಂಬದಿ ಸವಾರ ಮೃತಪಟ್ಟರೆ, ಸವಾರ ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ಕಾಮಾಕ್ಷಿಪಾಳ್ಯ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಸುಂಕದಕಟ್ಟೆಯ ಬಳಿ ನಡೆದಿದೆ.

      ಮೃತಪಟ್ಟವರನ್ನು ಮಹಾಲಕ್ಷ್ಮಿ ಲೇಔಟ್‍ನ ಆನಂದ್ (22)ಎಂದು ಗುರುತಿಸಲಾಗಿದೆ.ಅಪಘಾತದಿಂದ ತಲೆಗೆ ಗಂಭೀರವಾಗಿ ಗಾಯಗೊಂಡಿರುವ ಸವಾರ ದೀಪಕ್ (18)ನನ್ನು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು, ಆತನ ಸ್ಥಿತಿ ಚಿಂತಾಜನಕವಾಗಿದೆ .ಟಿವಿಎಸ್ ಅಪಾಚೆ ಬೈಕ್‍ನಲ್ಲಿ ಹಿಂದೆ ಆನಂದ್‍ನನ್ನು ಕೂರಿಸಿಕೊಂಡು ದೀಪಕ್ ಸೋಮವಾರ ರಾತ್ರಿ 11.15ರ ವೇಳೆ ಬ್ಯಾಡರಹಳ್ಳಿಯಿಂದ ಸುಂಕದಕಟ್ಟೆಗೆ ಅತಿವೇಗವಾಗಿ ಬರುತ್ತಿದ್ದ. ಮಾರ್ಗಮಧ್ಯೆ ಬಾರ್‍ವೊಂದರ ಮುಂಭಾಗ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಕೆಳಗೆ ಬಿದ್ದು ಗಾಯಗೊಂಡಿದ್ದ ಆನಂದ್‍ನನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಪ್ರಕರಣ ದಾಖಲಿಸಿರುವ ಕಾಮಾಕ್ಷಿಪಾಳ್ಯ ಸಂಚಾರ ಪೆಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ ಎಂದು ಡಿಸಿಪಿ ಸಾರಾ ಪಾತಿಮಾ ತಿಳಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ

Recent Articles

spot_img

Related Stories

Share via
Copy link