ಬೆಂಗಳೂರು
ದೇವನಹಳ್ಳಿಯ ರಾಣಿ ಕ್ರಾಸ್‍ನಲ್ಲಿ ಟಿಪ್ಪರ್ ಲಾರಿ ಡಿಕ್ಕಿ ಹೊಡೆದು ಸ್ಕೂಟರ್‍ನಲ್ಲಿ ಹೋಗುತ್ತಿದ್ದ ತರಕಾರಿ ವ್ಯಾಪಾರ ಮಾಡುತ್ತಿದ್ದ ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ ದೇವನಹಳ್ಳಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ದೇವನಹಳ್ಳಿ ಜನತಾ ಕಾಲೋನಿಯ ಲಕ್ಷ್ಮಮ್ಮ (32)ಎಂದು ಮೃತಪಟ್ಟ ಮಹಿಳೆಯನ್ನು ಗುರುತಿಸಲಾಗಿದೆ. ರಾಣಿ ಕ್ರಾಸ್ ಬಳಿ ಸೊಪ್ಪು, ತರಕಾರಿ ಮಾರಾಟ ಮಾಡುತ್ತಿದ್ದ ಲಕ್ಷ್ಮಮ್ಮ ಬುಧವಾರ ಮಧ್ಯಾಹ್ನ 2.30ರ ವೇಳೆ ಮನೆಗೆ ಟಿವಿಎಸ್ ಸ್ಕೂಟರ್‍ನಲ್ಲಿ ಊಟಕ್ಕೆ ಹೋಗುತ್ತಿದ್ದರು.
ಮಾರ್ಗ ಮಧ್ಯೆ ದೇವನಹಳ್ಳಿಯಿಂದ ನಂದಿಬೆಟ್ಟದ ಕಡೆ ಹೋಗುತ್ತಿದ್ದ ಟಿಪ್ಪರ್ ಲಾರಿ ತಿರುವು ತೆಗೆದು ಕೊಳ್ಳುವ ವೇಳೆ ಸ್ಕೂಟರ್‍ಗೆ ಡಿಕ್ಕಿ ಹೊಡೆದಿದ್ದು, ಕೆಳಗೆ ಬಿದ್ದ ಲಕ್ಷ್ಮಮ್ಮ ಮೇಲೆ ಚಕ್ರ ಹರಿದು ಮೃತಪಟ್ಟಿದ್ದಾರೆ.ಪ್ರಕರಣ ದಾಖಲಿಸಿರುವ ದೇವನಹಳ್ಳಿ ಸಂಚಾರ ಪೊಲೀಸರು ಲಾರಿ ಚಾಲಕನನ್ನು ಬಂಧಿಸಿ, ಮುಂದಿನ ತನಿಖೆ ಕೈಗೊಂಡಿದ್ದಾರೆ ಎಂದು ಡಿಸಿಪಿ ಸಾರಾಫಾತಿಮಾ ತಿಳಿಸಿದ್ದಾರೆ.